25/04/2026
ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಬಡವರ ಬಂಧು ಶ್ರೀ ಪ್ರಿಯಕೃಷ್ಣರವರು ಗೋವಿಂದರಾಜನಗರ ಕ್ಷೇತ್ರದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ 100 ಹಾಸಿಗೆಗಳ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜೊತೆ ಇಂದು ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಹಿರಿಯರ ಹೃದಯ ಆರೈಕೆಗಾಗಿ ಗೋವಿಂದರಾಜನಗರದಲ್ಲಿ ಆರೋಗ್ಯ ಸೇವೆಯನ್ನು ನೀಡಲು ಆಡಳಿತ ವಿಕೇಂದ್ರೀಕರಣ ಮಾಡುವ ಮುಖಾಂತರ ಎಲ್ಲರಿಗೂ ಹೃದಯ ಆರೋಗ್ಯ ಸೇವೆ ದೊರಕಲಿ ಎಂಬ ಮಹತ್ವದ ಹೆಜ್ಜೆ ಇರಿಸಲಾಗಿದೆ.
ಬೆಂಗಳೂರು ನಗರದ ರಾಜಾಜಿನಗರ, ಯಶವಂತಪುರ, ರಾಜರಾಜೇಶ್ವರಿನಗರ ಸೇರಿದಂತೆ ದಾಸರಹಳ್ಳಿ, ಪೀಣ್ಯ ಹಾಗೂ ಬೆಂಗಳೂರು ಗ್ರಾಮಾಂತರ ನಿವಾಸಿಗಳಿಗೆ ಅನುಕೂಲವಾಗಲಿದೆ. ಜೊತೆಗೆ ರಾಮನಗರ, ಮಂಡ್ಯ, ತುಮಕೂರು ಮತ್ತು ಹಾಸನ ಜಿಲ್ಲೆಗಳಿಂದ ಬರುವ ರೋಗಿಗಳಿಗೂ ಸಹಾಯವಾಗಲಿದೆ.
ಸಚಿವರಾದ ಶರಣಪ್ರಕಾಶ ಪಾಟೀಲ್, ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಬಿ. ದಿನೇಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎನ್. ಮಹೇಶ್ವರ ರಾವ್, ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ಪಶ್ಚಿಮ ಮಹಾನಗರ ಪಾಲಿಕೆ ಆಯುಕ್ತ ಕೆ.ವಿ. ರಾಜೇಂದ್ರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.