04/08/2026
ಶಿವಗಂಗಾ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಸ್ಥೆಯ ವತಿಯಿಂದ ಆಯೋಜಿಸಲಾದ ರಾಷ್ಟ್ರ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ, ಅದ್ಭುತ ಪ್ರತಿಭೆಯನ್ನು ಪ್ರದರ್ಶಿಸಿದ ಎಲ್ಲ ಸ್ಪರ್ಧಾರ್ಥಿಗಳನ್ನು ಅಭಿನಂದಿಸುವ ಅವಕಾಶ ದೊರೆಯಿತು. ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದ ಕ್ಷಣ ಸಂತಸವನ್ನುಂಟು ಮಾಡಿತು.
ಯೋಗವು ಕೇವಲ ದೈಹಿಕ ಆರೋಗ್ಯಕ್ಕಷ್ಟೇ ಸೀಮಿತವಲ್ಲ, ಅದು ಶಿಸ್ತು, ಆತ್ಮವಿಶ್ವಾಸ ಮತ್ತು ಮಾನಸಿಕ ಸದೃಢತೆಯನ್ನು ಬೆಳೆಸುವ ಜೀವನಶೈಲಿಯಾಗಿದೆ. ಇಂತಹ ಸ್ಪರ್ಧೆಗಳು ನಮ್ಮ ಯುವ ಪ್ರತಿಭೆಗಳಿಗೆ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಉತ್ತಮ ವೇದಿಕೆಯಾಗಿವೆ.
ಇನ್ನೂ ಮೂರು ತಿಂಗಳ ಬಳಿಕ ಥೈಲ್ಯಾಂಡ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಈ ಸಂಸ್ಥೆಯ ಹಾಗೂ ಶ್ರೀ ಜಗದೀಶ್ ಅವರ ನೇತೃತ್ವದಲ್ಲಿ ಪ್ರತಿಭಾವಂತ ಸ್ಪರ್ಧಾರ್ಥಿಗಳನ್ನು ಕರೆದೊಯ್ಯುವ ಮಹತ್ವದ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ. ನಮ್ಮ ನಾಡಿನ ಪ್ರತಿಭೆಗಳು ವಿಶ್ವಮಟ್ಟದಲ್ಲಿ ಕೀರ್ತಿ ತಂದುಕೊಡಲಿ ಎಂದು ಹಾರೈಸುತ್ತೇನೆ.
▪️ಲಗ್ಗೆರೆ ನಾರಾಯಣಸ್ವಾಮಿ