03/07/2026
ಜನರ ಸಮಸ್ಯೆಗಳ ಪರ ಸದನದಲ್ಲಷ್ಟೇ ಅಲ್ಲ, ಸಭೆಗಳಲ್ಲಿಯೂ ಧ್ವನಿ ಎತ್ತಿದ ನಾಯಕರು!
ಮಾನ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಮ್ಮೆಲ್ಲರ ನೆಚ್ಚಿನ ನಾಯಕರು, ಜನಪ್ರಿಯ ವಿಧಾನಪರಿಷತ್ ಶಾಸಕರಾದ ಶ್ರೀ ಬಸನಗೌಡ ಬಾದರ್ಲಿ ಅವರು ಭಾಗವಹಿಸಿ, ರಾಯಚೂರು ಜಿಲ್ಲೆಯ ಹಾಗೂ ಸಿಂಧನೂರು ತಾಲೂಕಿನ ಕುಡಿಯುವ ನೀರಿನ ಸಮಸ್ಯೆ, ಮುಂಗಾರು ಹಂಗಾಮಿನ ಬಿತ್ತನೆಗೆ ಅಗತ್ಯ ರಸಗೊಬ್ಬರದ ಸಮರ್ಪಕ ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವು ಲಭ್ಯತೆ ಕುರಿತು ಅಧಿಕಾರಿಗಳ ಗಮನ ಸೆಳೆದು ಸಮಗ್ರ ಚರ್ಚೆ ನಡೆಸಿದರು.
ಜನರ ಬದುಕಿಗೆ ನೇರವಾಗಿ ಸಂಬಂಧಿಸಿದ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಸಿಗಬೇಕು ಎಂಬ ದೃಢ ಸಂಕಲ್ಪದೊಂದಿಗೆ ಸದಾ ಜನಪರ ಧ್ವನಿಯಾಗಿರುವ ನಮ್ಮ ನಾಯಕರ ಕಾರ್ಯಕ್ಕೆ ಅಭಿನಂದನೆಗಳು. 💐
ಈ ಸಭೆಯಲ್ಲಿ ಸಂಸದರು, ಜಿಲ್ಲೆಯ ಶಾಸಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು