25/10/2026
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯಾದಲಡಕು ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾದಿಗುಂಟೆ ಗ್ರಾಮದಲ್ಲಿ ಬೀದಿದೀಪಗಳು ಕೆಟ್ಟು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದ ಕುರಿತು ಐಪಿಜಿಆರ್‌ಎಸ್ ತಂತ್ರಾಂಶ ಹಾಗೂ ಇಮೇಲ್ ಮೂಲಕ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಅಹವಾಲು ಸಲ್ಲಿಕೆಯಾಗಿತ್ತು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಸಚಿವಾಲಯದ ನಿರ್ದೇಶನದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸ್ಥಳ ಪರಿಶೀಲನೆ ನಡೆಸಿ ಗ್ರಾಮದಲ್ಲಿ ಕೆಟ್ಟುಹೋಗಿದ್ದ ಎಲ್ಲಾ ಬೀದಿದೀಪಗಳನ್ನು ಸಮರೋಪಾದಿಯಲ್ಲಿ ದುರಸ್ತಿಗೊಳಿಸಿ ಸುಸ್ಥಿತಿಗೆ ತಂದಿದ್ದಾರೆ. ಈ ಮೂಲಕ ಗ್ರಾಮಸ್ಥರ ರಾತ್ರಿ ಸಂಚಾರಕ್ಕೆ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ.