13/06/2026
ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಸಬ್ ಬೀಟ್ ಸಂಖ್ಯೆ-23ರ ನೈದಿಲೆ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಭಾಗವಹಿಸಿ, ಸೈಬರ್ ಅಪರಾಧ ತಡೆ, ತುರ್ತು ಸಹಾಯವಾಣಿ ಸಂಖ್ಯೆಗಳು (112, 1930), ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ಮನೆ ಕಳ್ಳತನ ತಡೆ, ಒಬ್ಬರೇ ವಾಸಿಸುವ ಹಿರಿಯ ನಾಗರಿಕರ ಸುರಕ್ಷತೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಿದರು. ಜೊತೆಗೆ, ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಹಾಗೂ ಸುರಕ್ಷಿತ ಮತ್ತು ಅಪರಾಧಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಯಿತು.