18/08/2026
ಕಂಪ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕನಾಗಿ ಹಾಗೂ ಕಂಪ್ಲಿ ಕ್ಷೇತ್ರದ ಜನರ ಸೇವಕನಾಗಿ ಇಂದು ರೈತರ ಹಕ್ಕಿಗಾಗಿ ನಡೆದ ಹೋರಾಟದಲ್ಲಿ ನಾನು ಸ್ವತಃ ಭಾಗವಹಿಸಿದೆ.
ಕಂಪ್ಲಿ ತಾಲೂಕಿನ ಅಂಬೇಡ್ಕರ್ ವೃತ್ತದಲ್ಲಿ ಎಲ್.ಎಲ್.ಸಿ ಕಾಲುವೆಗಳ ಮೂಲಕ ರೈತರಿಗೆ ನೀರು ಸರಿಯಾಗಿ ಹರಿಸಬೇಕೆಂಬ ನ್ಯಾಯಯುತ ಬೇಡಿಕೆಯನ್ನು ಮುಂದಿಟ್ಟುಕೊಂಡು ರೈತ ಬಾಂಧವರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೆ ಸರ್ಕಾರದ ನಿರ್ಲಕ್ಷ್ಯದಿಂದ ಇಲ್ಲಿಯವರೆಗೂ ನೀರು ಸರಿಯಾಗಿ ತಲುಪದೇ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿರುವುದು ಅತ್ಯಂತ ದುಃಖದ ಸಂಗತಿ.
ಈ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರೊಂದಿಗೆ ನಿಂತು ಅವರ ನೋವು, ಸಂಕಷ್ಟಗಳನ್ನು ಆಲಿಸುವ ಅವಕಾಶ ನನಗೆ ದೊರಕಿತು. ರೈತರಿಗೆ ನ್ಯಾಯ ದೊರಕಿಸಿಕೊಡುವುದು ಸರ್ಕಾರದ ಮೂಲಭೂತ ಜವಾಬ್ದಾರಿ. ಎಲ್.ಎಲ್.ಸಿ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಿ, ಬೆಳೆ ನಷ್ಟ ಅನುಭವಿಸಿದ ರೈತರಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು ಎಂಬುದು ನಮ್ಮ ಸ್ಪಷ್ಟ ಆಗ್ರಹ.
ರೈತರ ಹಕ್ಕುಗಳಿಗಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ನಾನು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರೈತರೊಂದಿಗೆ ಸೇರಿ ಇನ್ನಷ್ಟು ತೀವ್ರ ಹೋರಾಟಕ್ಕೆ ನಾವು ಸಿದ್ಧರಾಗಿದ್ದೇವೆ.
ರೈತರ ಹಿತವೇ ನಮ್ಮ ಮೊದಲ ಆದ್ಯತೆ. ರೈತರ ನ್ಯಾಯಕ್ಕಾಗಿ ನಮ್ಮ ಹೋರಾಟ ನಿರಂತರ.
_ಶ್ರೀ ಟಿ ಹೆಚ್ ಸುರೇಶ್ ಬಾಬು