DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ ಜಿಲ್ಲೆ

  • Home
  • India
  • Chamarajanagar
  • DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ ಜಿಲ್ಲೆ

DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ ಜಿಲ್ಲೆ Official Handle of Deputy Commissioner & District Magistrate | District Election Officer, Chamarajanagar District, Karnataka State

ಚಾಮರಾಜನಗರ ಜಿಲ್ಲೆ ತೀವ್ರ ಬರಪೀಡಿತ ಪ್ರದೇಶವೆಂದು ಘೋಷಣೆ!ಮಳೆ ಕೊರತೆಯಿಂದಾಗಿ ರಾಜ್ಯ ಸರ್ಕಾರ ಪ್ರಕಟಿಸಿರುವ 101 ಬರಪೀಡಿತ ತಾಲೂಕುಗಳ ಪಟ್ಟಿಯಲ್...
29/08/2026

ಚಾಮರಾಜನಗರ ಜಿಲ್ಲೆ ತೀವ್ರ ಬರಪೀಡಿತ ಪ್ರದೇಶವೆಂದು ಘೋಷಣೆ!

ಮಳೆ ಕೊರತೆಯಿಂದಾಗಿ ರಾಜ್ಯ ಸರ್ಕಾರ ಪ್ರಕಟಿಸಿರುವ 101 ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಚಾಮರಾಜನಗರದ ಎಲ್ಲಾ 5 ತಾಲೂಕುಗಳು ಸೇರಿವೆ.

ಬರಪೀಡಿತ ಪ್ರದೇಶಗಳು: ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು. ಜಿಲ್ಲಾಧಿಕಾರಿ ಶ್ರೀರೂಪ ಅವರ ಕಟ್ಟುನಿಟ್ಟಿನ ಸೂಚನೆ: ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಎದುರಾಗದಂತೆ ತುರ್ತು ಪರಿಹಾರ ಒದಗಿಸಲು ಆದೇಶ.

ಇಂದು ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ, ಕಾವೇರಿ ವನ್ಯಜೀವಿ ವಿಭಾಗದ ಹನೂರು ವನ್ಯಜೀವಿ ವಲಯ ವ್ಯಾಪ್ತಿಯ ಕರಡಿಕಲ್ಲಿ ಗುಡ್ಡದ ಸಮೀಪದ ಅರ...
28/08/2026

ಇಂದು ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ, ಕಾವೇರಿ ವನ್ಯಜೀವಿ ವಿಭಾಗದ ಹನೂರು ವನ್ಯಜೀವಿ ವಲಯ ವ್ಯಾಪ್ತಿಯ ಕರಡಿಕಲ್ಲಿ ಗುಡ್ಡದ ಸಮೀಪದ ಅರಣ್ಯ ಪ್ರದೇಶದಲ್ಲಿ ದಿನಾಂಕ 15-08-2026 ರಂದು ಸಂಭವಿಸಿದ ಘಟನೆಯ ಸಂಬಂಧ ಮ್ಯಾಜಿಸ್ಟೀರಿಯಲ್ ವಿಚಾರಣೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು.

ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡು ದಿನಗಳ ಪರಿಶೀಲನಾ ಭೇಟಿ▪️ಕಳೆದ ಎರಡು ದಿನಗಳಲ್ಲಿ ಶ್ರೀ ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ವ್ಯಾಪ್ತಿಯ ವ...
26/08/2026

ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡು ದಿನಗಳ ಪರಿಶೀಲನಾ ಭೇಟಿ

▪️ಕಳೆದ ಎರಡು ದಿನಗಳಲ್ಲಿ ಶ್ರೀ ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಲಾಯಿತು.

▪️ಮೊದಲ ದಿನ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ಗೋಪುರದ ಹೊರಾಂಗಣ, ಸಾರ್ವಜನಿಕರ ಪ್ರವೇಶ ದ್ವಾರ ಹಾಗೂ ದಾಸೋಹ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳು ಮತ್ತು ದಾಸ್ತಾನುಗಳ ಗುಣಮಟ್ಟವನ್ನು ಪರಿಶೀಲಿಸಲಾಯಿತು. ದಾಸೋಹಕ್ಕೆ ಆಗಮಿಸಿದ್ದ ಭಕ್ತಾದಿಗಳೊಂದಿಗೆ ಸಂವಾದ ನಡೆಸಿ, ಆಹಾರದ ಗುಣಮಟ್ಟ ಹಾಗೂ ಸೇವೆಗಳ ಕುರಿತು ಮಾಹಿತಿ ಪಡೆದು ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. ಜೊತೆಗೆ ಪ್ರಾಧಿಕಾರದ ವಿವಿಧ ವಿಭಾಗಗಳ ಕಾರ್ಯನಿರ್ವಹಣೆಯನ್ನೂ ಪರಿಶೀಲಿಸಲಾಯಿತು.

▪️ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ವಿವಿಧ ಭಾಗಗಳಿಗೆ ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಕಾಮಗಾರಿಗಳ ಗುಣಮಟ್ಟ, ಪ್ರಗತಿ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

▪️ಅಲ್ಲದೆ, MYRADA ತಂಡದೊಂದಿಗೆ ಸಭೆ ನಡೆಸಿ ಶ್ರೀ ಮಲೆ ಮಹದೇಶ್ವರ ಬೆಟ್ಟ ಪ್ರದೇಶದ ಅಭಿವೃದ್ಧಿ, ಪರಿಸರ ಸಂರಕ್ಷಣೆ, ಜೀವನೋಪಾಯ ಹಾಗೂ ಸಮುದಾಯ ಆಧಾರಿತ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.

ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮರ್ಪಕ ಸೇವೆ ಒದಗಿಸಿ : ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ತಾಕೀತು ▪️ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್), ಜ...
25/08/2026

ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮರ್ಪಕ ಸೇವೆ ಒದಗಿಸಿ : ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ತಾಕೀತು

▪️ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್), ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ತಾಕೀತು ಮಾಡಿದರು.

▪️ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

▪️ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಬರುವವರು ಬಡವರಾಗಿದ್ದು, ವೈದ್ಯಕೀಯ ಚಿಕಿತ್ಸಾ ಸೇವೆ ಸಕಾಲಕ್ಕೆ ದೊರೆಯದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ವೈದ್ಯರು ಆಸ್ಪತ್ರೆಗಳಲ್ಲಿ ಲಭ್ಯರಿದ್ದು, ರೋಗಿಗಳಿಗೆ ಸ್ಪಂದಿಸಬೇಕು. ನಿಗದಿತ ಅವಧಿಯಲ್ಲಿ ವೈದ್ಯರು ಕಡ್ಡಾಯವಾಗಿ ಆಸ್ಪತ್ರೆಯಲ್ಲಿಯೇ ಇರಬೇಕು. ರೋಗಿಗಳಿಗೆ ವೈದ್ಯರು ಸಿಗದೆ ಇರುವ ದೂರುಗಳು ಮತ್ತೆ ಕೇಳಿ ಬಂದಲ್ಲಿ ಸಹಿಸುವುದಿಲ್ಲ ಎಂದು ಸಂಸದರು ಎಚ್ಚರಿಕೆ ನೀಡಿದರು.

▪️ವೈದ್ಯಕೀಯ ಕಾಲೇಜಿನ ಡೀನ್ ಅವರು ಪ್ರತಿನಿತ್ಯ ವೈದ್ಯರ ಹಾಜರಾತಿಯನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಕರ್ತವ್ಯದ ಪೂರ್ಣ ಅವಧಿಯಲ್ಲಿ ವೈದ್ಯರು ಇದ್ದು ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವೈದ್ಯರ ಗೈರು ಹಾಜರಿಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಇನ್ನು ಮುಂದೆ ಕಟ್ಟುನಿಟ್ಟಾಗಿ ವೈದ್ಯರ ಸೇವೆ ದೊರೆಯಬೇಕು ಎಂದು ಸೂಚನೆ ನೀಡಿದರು.

▪️ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ತೊಂದರೆಯಾಗದಂತೆ ರಸ್ತೆಯ ಎರಡೂ ಬದಿಯಲ್ಲಿ ಹಾಗೂ ಡಿವೈಡರ್‍ಗಳಲ್ಲಿ ರಿಫ್ಲೆಕ್ಟರ್ ಹಾಕಬೇಕು. ರಸ್ತೆಗಳು ಕೂಡುವ ಜಂಕ್ಷನ್ ಸ್ಥಳಗಳಲ್ಲಿ ವೃತ್ತ ನಿರ್ಮಿಸಬೇಕು. ಸೈನ್ ಬೋರ್ಡ್ ಗಳನ್ನು ಅಳವಡಿಸಬೇಕು. ರಸ್ತೆಗಳ ಕಟಿಂಗ್ ಕ್ರಾಸ್‍ಗಳಲ್ಲಿ ಮಿರರ್ ಹಾಕಬೇಕು. ಟೋಲ್ ಕಲೆಕ್ಷನ್ ಬಗ್ಗೆ ಸ್ಥಳೀಯರಿಂದ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಆಧಾರ್ ಕಾರ್ಡ್ ಆಧಾರದಲ್ಲಿ ಸ್ಥಳೀಯರಿಗೆ ಪಾಸ್ ವ್ಯವಸ್ಥೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಗಳ ಬದಿಯಲ್ಲಿರುವ ಶಾಲೆಗಳ ಮುಂಭಾಗ ವಾಹನಗಳ ವೇಗ ತಗ್ಗಿಸಲು ರಸ್ತೆ ಡುಬ್ಬ ನಿರ್ಮಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

▪️ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿ ಪ್ರಗತಿ ಪರಿಶೀಲಿಸಿದ ವೇಳೆ ಅಧಿಕಾರಿಗಳು ಮಾಹಿತಿ ನೀಡಿ ಅಮೃತ್ 2.0 ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಅಳವಡಿಕೆ ಕಾಮಗಾರಿ ಗುಂಡ್ಲುಪೇಟೆ ತಾಲೂಕಿನಲ್ಲಿ ಪೂರ್ಣಗೊಂಡಿದೆ. ಚಾಮರಾಜನಗರ ತಾಲೂಕಿನಲ್ಲಿ ಒಂದು ವಾರದೊಳಗೆ ಪೂರ್ಣಗೊಳಿಸಲಾಗುವುದು ಹಾಗೂ ಕೊಳ್ಳೇಗಾಲ ಮತ್ತು ಹನೂರು ತಾಲೂಕುಗಳಲ್ಲಿ ಮುಂದಿನ 15 ದಿನದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವಿವರಿಸಿದರು.

▪️ಬಳಿಕ ಮಾತನಾಡಿದ ಸಂಸದರು ಹನೂರು ಭಾಗದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಅಗತ್ಯವಿರುವ ಗ್ರಾಮಗಳಿಗೆ ಟ್ಯಾಂಕರ್‍ಗಳಲ್ಲಿ ನೀರು ಸರಬರಾಜು ಮಾಡಬೇಕು. ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾ ವಹಿಸಬೇಕು. ಗಾಳಿಪುರದಲ್ಲಿ ಕುಡಿಯುವ ನೀರಿಗಾಗಿ 12 ವರ್ಷಗಳ ಹಿಂದೆ ವಾಟರ್‍ಟ್ಯಾಂಕ್ ಕಟ್ಟಿ ಹಾಗೆಯೇ ಬಿಡಲಾಗಿದ್ದು, ಇದರ ಬಳಕೆಯಾಗಿಲ್ಲ. ಇದರಿಂದ ಜನರ ತೆರಿಗೆ ಹಣ ಪೋಲಾಗಿದೆ. ಕುಡಿಯುವ ನೀರು ಸರಬರಾಜು ವಿಚಾರದಲ್ಲಿ ಅಧಿಕಾರಿಗಳು ಯಾವುದೇ ಸಬೂಬು ಹೇಳುವಂತಿಲ್ಲ. ಜನರಿಗೆ ಆದ್ಯತೆ ಮೇರೆಗೆ ಕುಡಿಯುವ ನೀರು ಒದಗಿಸುವಂತೆ ತಿಳಿಸಿದರು.

▪️ಜಿಲ್ಲೆಯ ಕಾಡಂಚಿನ ಪುದೂರು, ಪಾಲಾರ್ ಹಾಗೂ ಆಲಂಬಾಡಿ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜನರು ಮನೆ ಕಟ್ಟಿಕೊಳ್ಳಲು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಿಂದ ಹಕ್ಕುಪತ್ರ ನೀಡಿದ್ದರೂ ಮನೆ ಕಟ್ಟುವ ಕಾಮಗಾರಿಗೆ ಬೇಕಾಗಿರುವ ಸಾಮಗ್ರಿಗಳನ್ನು ಅರಣ್ಯದೊಳಗೆ ತರಲು ಅರಣ್ಯಾಧಿಕಾರಿಗಳು ಅಡ್ಡಿಪಡಿಸುತ್ತಿರುವ ಬಗ್ಗೆ ದೂರುಗಳನ್ನು ಗಮನಿಸಲಾಗಿದೆ. ತಾವು ಭೇಟಿ ನೀಡಿದ ವೇಳೆಯು ಜನರು ಈ ಬಗ್ಗೆ ಮನವಿ ಮಾಡಿಕೊಂಡಿದ್ದಾರೆ. ಮನೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ತೊಂದರೆ ನೀಡುತ್ತಿರುವುದು ಸರಿಯಲ್ಲ. ಬಡವರು ಸೂರು ಕಟ್ಟಿಕೊಳ್ಳಲು ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು ಎಂದು ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಸೂಚನೆ ನೀಡಿದರು.

▪️ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಕೃಷಿ, ತೋಟಗಾರಿಕೆ, ಲೋಕೋಪಯೋಗಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಹಾರ, ಗಣಿ ಇಲಾಖೆ, ಬಿಎಸ್.ಎನ್.ಎಲ್ ಸೇರಿದಂತೆ ವಿವಿಧ ಇಲಾಖೆಗಳ ಕೇಂದ್ರ ಪುರಸ್ಕøತ ಯೋಜನೆಗಳ ಪ್ರಗತಿ ಪರಿಶೀಲಿಸಿದರು.

▪️ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಮುಂದಿನ ಪ್ರಕ್ರಿಯೆಗೂ ಸಹಕರಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಮನವಿ▪️ ಮತದಾರರ ಪಟ್ಟಿ ವಿಶೇಷ ಸಮಗ್ರ ...
24/08/2026

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಮುಂದಿನ ಪ್ರಕ್ರಿಯೆಗೂ ಸಹಕರಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಮನವಿ

▪️ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಲಾಗಿದ್ದು, ಮುಂದಿನ ಪ್ರಕ್ರಿಯೆಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಹಕರಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಮನವಿ ಮಾಡಿದರು.

▪️ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ನೊಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

▪️ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕರಡು ಮತದಾರರ ಪಟ್ಟಿಯನ್ನು ಇಂದು ಜಿಲ್ಲಾಧಿಕಾರಿ ಕಚೇರಿ, ಎಲ್ಲಾ ತಾಲೂಕುಗಳ ತಹಶೀಲ್ದಾರ್ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ಇಲ್ಲವೇ ಎಂಬುದರ ಬಗ್ಗೆ ಎಲ್ಲಾ ಅರ್ಹ ಮತದಾರರು ಖಚಿತಪಡಿಸಿಕೊಳ್ಳಬೇಕು. ಈ ಸಂಬಂಧ ಹಕ್ಕು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

▪️ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕಾಗಿ ಮಾನ್ಯತೆ ಪಡೆದ ನೊಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಾವು ನಿಯೋಜಿಸಿರುವ ಬಿ.ಎಲ್.ಎ-2 ರವರ ಮೂಲಕ ವ್ಯಾಪಕ ಪ್ರಚಾರ ನೀಡುವಂತೆ ಕೋರಿದರು.

▪️ಜಿಲ್ಲೆಯಲ್ಲಿ 4,30,786 ಪುರುಷರು, 4,49,390 ಮಹಿಳೆಯರು ಹಾಗೂ 48 ಇತರರು ಸೇರಿದಂತೆ ಒಟ್ಟು 8,80,224 ಮತದಾರಿದ್ದಾರೆ. ಈ ಪೈಕಿ ಮತದಾರರು ಭರ್ತಿ ಮಾಡಿ ನೀಡಿದ ಒಟ್ಟು 7,91,949 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಉಳಿದ 88,275 ಮಂದಿಯನ್ನು ಗೈರಾಗಿರುವ ಮತದಾರರು, ಸ್ಥಳಾಂತರ, ಮರಣ ಹೊಂದಿದವರು, ಎರಡು ಕಡೆ ನೊಂದಣಿಯಾದ ಮತದಾರರು ಹಾಗೂ ಇತರರನ್ನು ಪಟ್ಟಿಯಲ್ಲಿ ಗುರುತಿಸಲಾಗಿದೆ ಎಂದರು.

▪️ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಕೈಬಿಟ್ಟು ಹೋಗಿದ್ದಲ್ಲಿ ಮತದಾರರು ನಮೂನೆ-6ನ್ನು ಘೋಷಣಾ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ನೀಡಿ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ 18 ವರ್ಷ ತುಂಬಿದ ಹೊಸ ಮತದಾರರನ್ನು ಪಟ್ಟಿಗೆ ಸೇರಿಸಲು ಫಾರಂ-6 ಅನ್ನು ನೀಡುವ ಕಾರ್ಯ ಮುಂದುವರೆದಿದೆ. ಈ ನಿಟ್ಟಿನಲ್ಲಿ ಮಾನ್ಯತೆ ಪಡೆದ ನೊಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವವರೆಗೂ ಪರಿಷ್ಕರಣೆಯ ಮಹತ್ವದ ಕಾರ್ಯಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಮನವಿ ಮಾಡಿದರು.

▪️ಇದೇ ವೇಳೆ ಪ್ರಚುರಪಡಿಸಲಾಗಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕರಡು ಮತದಾರರ ಪಟ್ಟಿಯನ್ನು ಮಾನ್ಯತೆ ಪಡೆದ ನೊಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಅವರು ವಿತರಿಸಿದರು.

▪️ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎಚ್.ಎಸ್. ತೋಂಟಧಾರ್ಯಸ್ವಾಮಿ, ಬಿ.ಎಂ. ಕೃಷ್ಣಮೂರ್ತಿ, ಎಸ್. ಬಾಲಸುಬ್ರಮಣ್ಯ, ಸಯ್ಯದ್ ಅಕ್ರಂ, ಎ.ಎಚ್. ನಸ್ರುಲ್ಲಾ ಖಾನ್, ಭೈರಲಿಂಗಸ್ವಾಮಿ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ನೇರ ಫೋನ್ ಇನ್ ಕಾರ್ಯಕ್ರಮ : 34 ದೂರುಗಳು ದಾಖಲು ▪️ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತ ಇಂದು ನಡೆಸಿದ ...
24/08/2026

ನೇರ ಫೋನ್ ಇನ್ ಕಾರ್ಯಕ್ರಮ : 34 ದೂರುಗಳು ದಾಖಲು

▪️ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತ ಇಂದು ನಡೆಸಿದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ 34 ದೂರುಗಳು ದಾಖಲಾಗಿವೆ.

▪️ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಶ್ರೀರೂಪ ಅವರ ನೇತೃತ್ವದಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನಾನಾ ಭಾಗದಿಂದ ಕರೆ ಮಾಡಿ ಮೂಲಸೌಕರ್ಯಗಳ ಕೊರತೆ, ಕೆಎಸ್.ಆರ್.ಟಿಸಿ ಬಸ್ಸುಗಳ ವ್ಯವಸ್ಥೆ ಸೇರಿದಂತೆ ಹಲವು ಕುಂದು ಕೊರತೆ ಸಮಸ್ಯೆಗಳ ಬಗ್ಗೆ ಹೇಳಿಕೊಂಡರು.

▪️ತಾಲೂಕಿನ ಮಾದಾಪುರದಿಂದ ಸ್ಥಳೀಯರೊಬ್ಬರು ಮಾತನಾಡಿ ಗ್ರಾಮದಲ್ಲಿ ಮೂಲ ಸೌಲಭ್ಯಗಳಿಗೆ ತೊಂದರೆಯಾಗಿದೆ. ಚರಂಡಿ ತುಂಬಿ ದುರ್ವಾಸನೆ ಬರುತ್ತಿದೆ. ಕೂಡಲೇ ಸ್ವಚ್ಚಗೊಳಿಸಬೇಕು. ಬೀದಿ ದೀಪ ವ್ಯವಸ್ಥೆ ಮಾಡಿಕೊಡಬೇಕೆಂದು ಕೋರಿದರು. ಜಿಲ್ಲಾಧಿಕಾರಿಯವರು ಪ್ರತಿಕ್ರಿಯಿಸಿ ಅಗತ್ಯ ಕ್ರಮ ವಹಿಸಲು ಸೂಚಿಸುವುದಾಗಿ ತಿಳಿಸಿದರು.

▪️ಹನೂರು ತಾಲೂಕಿನ ಹುತ್ತೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮಸ್ಯೆ ಹೆಚ್ಚಾಗಿದೆ. ಕೆರೆಗೆ ನೀರು ತುಂಬಿಸಿದರೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಸ್ಥಳೀಯರೊಬ್ಬರು ಮನವಿ ಮಾಡಿದರು. ಈ ಬಗ್ಗೆ ಉತ್ತರಿಸಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ ಅವರು ಕ್ರಮ ವಹಿಸುವುದಾಗಿ ಹೇಳಿದರು.

▪️ನಗರದ ಕರಿನಂಜನಪುರದಿಂದ ನಾಗರಿಕರೊಬ್ಬರು ಕರೆ ಮಾಡಿ ಪಿಡಬ್ಲ್ಯೂಡಿ ಶಾಲೆಯ ಹತ್ತಿರ ಮ್ಯಾನ್ ಹೋಲ್ ಪೈಪ್ ಲೈನ್ ಗಾಗಿ ಗುಂಡಿ ತೆಗೆದು ಬಹಳ ದಿನಗಳಿಂದ ಹಾಗೆಯೇ ಬಿಡಲಾಗಿದೆ. ಇದರಿಂದ ಓಡಾಟಕ್ಕೆ ತೊಂದರೆಯಾಗಿದೆ ಎಂದು ಗಮನಸೆಳೆದರು. ಜಿಲ್ಲಾಧಿಕಾರಿಯವರು ಸಭೆಯಲ್ಲಿಯೇ ಇದ್ದ ನಗರಸಭೆ ಪೌರಾಯುಕ್ತರಿಗೆ ಕೂಡಲೇ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದರು.

▪️ಯಳಂದೂರು ಪಟ್ಟಣದ ನಿವಾಸಿಯೊಬ್ಬರು ಮಾತನಾಡಿ ಪಟ್ಟಣದಿಂದ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಕೊಳ್ಳೇಗಾಲ ಚಾಮರಾಜನಗರಕ್ಕೆ ಕೆಎಸ್‍ಆರ್‍ಟಿಸಿ ಬಸ್ಸುಗಳಲ್ಲಿ ಹೋಗಿ ಬರುತ್ತಿದ್ದಾರೆ. ಆದರೆ ಬಸ್ಸುಗಳು ಪಟ್ಟಣಕ್ಕೆ ಬರುವ ಮೊದಲೇ ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿ ಹೋಗಿರುತ್ತದೆ. ಸ್ಥಳೀಯರು ಪ್ರಯಾಣಿಸಲು ಅವಕಾಶವಾಗುತ್ತಿಲ್ಲ. ಹೀಗಾಗಿ ಯಳಂದೂರು ಪಟ್ಟಣದಿಂದಲೇ ಪ್ರತ್ಯೇಕವಾಗಿ ಬಸ್ಸುಗಳು ವ್ಯವಸ್ಥೆಯಾಗಬೇಕೆಂದು ಕೋರಿದರು. ಸಭೆಯಲ್ಲಿದ್ದ ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿ ಸೂಕ್ತ ವ್ಯವಸ್ಥೆಗೆ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.

▪️ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಸಣ್ಣ ಪುಟ್ಟ ಅಂಗಡಿಗಳಲ್ಲಿ ಕಳ್ಳತನವಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಸಭೆಯಲ್ಲಿದ್ದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್ ಅವರು ಸೂಕ್ತ ಕ್ರಮ ವಹಿಸುವುದಾಗಿ ತಿಳಿಸಿದರು.

▪️ತೆರಕಣಾಂಬಿಯ ಸರ್ಕಾರಿ ಶಾಲೆ ಬಳಿ ಕಸ ಸುರಿಯಲಾಗುತ್ತಿದ್ದು, ಅನೈರ್ಮಲ್ಯ ವಾತಾವರಣ ನಿರ್ಮಣವಾಗಿದೆ. ಗ್ರಾಮಪಂಚಾಯಿತಿ ವತಿಯಿಂದ ಸ್ವಚ್ಚತೆ ನಡೆಯುತ್ತಿಲ್ಲ. ಈ ಬಗ್ಗೆ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗುತ್ತಿಲ್ಲ ಎಮದು ಸ್ಥಳೀಯರೊಬ್ಬರು ದೂರಿದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ ಅವರು ಇಂದೇ ಪಂಚಾಯತ್ ಅಭಿವೃದ್ದಿ ಅಧಿಕಾರಿಗೆ ಸೂಚನೆ ನೀಡಿ ಸ್ವಚ್ಚತೆ ಕೈಗೊಳ್ಳಲು ತಿಳಿಸಲಾಗುವುದು ಎಂದರು.

▪️ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕ, ಜಲ ಜೀವನ್ ಮಿಷನ್ ಅಡಿ ನಿರ್ಮಾಣವಾದ ವಾಟರ್ ಟ್ಯಾಂಕ್ ತೆರೆದುಕೊಂಡಿರುವುದು, ನಗರದಲ್ಲಿ ಅನುಮತಿ ಪಡೆಯದೆ ಅನಧಿಕೃತವಾಗಿ ಕೋಚಿಂಗ್ ಸೆಂಟರ್, ಟ್ಯೂಟೋರಿಯಲ್ ನಡೆಯುತ್ತಿರುವ ಬಗ್ಗೆ, ಪಡಿತರ ವಿತರಣೆಯ ಸಮಯ ಫಲಕ ಅಳವಡಿಸದಿರುವುದು, ಅಕ್ರಮ ಮದ್ಯ ಮಾರಾಟ, ಇನ್ನಿತರ ಮೂಲ ಸೌಕರ್ಯ ಸಮಸ್ಯೆಗಳ ಬಗ್ಗೆ ನಾಗರಿಕರು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು.

▪️ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕರಡು ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 7,91,949 ಮತದಾರರು-ಜಿಲ್ಲಾಧಿಕಾರಿ ಶ್ರೀರೂಪ ▪️ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಕ...
24/08/2026

ಕರಡು ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 7,91,949 ಮತದಾರರು-ಜಿಲ್ಲಾಧಿಕಾರಿ ಶ್ರೀರೂಪ

▪️ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ 7,91,949 ಮತದಾರರಿದ್ದಾರೆ. ಇವರಲ್ಲಿ 3,88,409 ಪುರುಷರು, 4,03,504 ಮಹಿಳೆಯರು ಇತರೆ 36 ಮಂದಿ ಸೇರಿದ್ದಾರೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.

▪️ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಹನೂರು ವಿಧಾನಸಭಾ ಕ್ಷೇತ್ರದಲ್ಲಿ 1,01,425 ಪುರುಷರು, 1,01,241 ಮಹಿಳೆಯರು, ಇತರೆ ನಾಲ್ವರು ಸೇರಿ 2,02,670 ಮತದಾರರಿದ್ದಾರೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 95,752 ಪುರುಷರು, 1,00,323 ಮಹಿಳೆಯರು, ಇತರೆ 12 ಸೇರಿ 1,96,087 ಮತದಾರರಿದ್ದಾರೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 94,507 ಪುರುಷರು, 1,00,212 ಮಹಿಳೆಯರು, ಇತರೆ 11 ಸೇರಿ 1,94,730 ಮತದಾರರಿದ್ದಾರೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 96,725 ಪುರುಷರು, 1,01,728 ಮಹಿಳೆಯರು, ಇತರೆ 9 ಸೇರಿ 1,98,462 ಮತದಾರರಿದ್ದಾರೆ.

▪️ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ವದಲ್ಲಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 4,30,786 ಪುರುಷರು, 4,49,390 ಮಹಿಳೆಯರು, ಇತರೆ 48 ಸೇರಿ 8,80,224 ಮತದಾರರಿದ್ದರು. ಹನೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1,12,045 ಪುರುಷರು, 1,12,565 ಮಹಿಳೆಯರು, ಇತರೆ 6 ಸೇರಿ 2,24,616 ಮತದಾರರಿದ್ದರು. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1,07,898 ಪುರುಷರು, 1,13,235 ಮಹಿಳೆಯರು, ಇತರೆ 18 ಸೇರಿ 2,21,151 ಮತದಾರರಿದ್ದರು. ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1,05,541 ಪುರುಷರು, 1,12,297 ಮಹಿಳೆಯರು, ಇತರೆ 14 ಸೇರಿ 2,17,852 ಮತದಾರರಿದ್ದರು. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1,05,302 ಪುರುಷರು, 1,11,293 ಮಹಿಳೆಯರು, ಇತರೆ 10 ಸೇರಿ 2,16,605 ಮತದಾರರಿದ್ದರು.

▪️ಎಸ್.ಐ.ಆರ್. ಪೂರ್ವದಲ್ಲಿ ಒಟ್ಟು 8,80,224 ಮತದಾರರಿದ್ದರು. ಎಸ್.ಐ.ಆರ್ ಗಣತಿ ನಮೂನೆ ಡಿಜಟಲೀಕರಣಗೊಂಡ ಒಟ್ಟು ಮತದಾರರ ಸಂಖ್ಯೆ 7,91,949 ಆಗಿದೆ. 2002ರ ಮತದಾರರ ಪಟ್ಟಿಯ ಮಾಹಿತಿ ಲಭ್ಯವಾಗದ ಮತದಾರರ ಸಂಖ್ಯೆ 276, ಮತದಾರರ ಸಲ್ಲಿಸಿರುವ 2002ರ ಮಾಹಿತಿ ವಿವರಗಳಲ್ಲಿ ವ್ಯತ್ಯಾಸವಿರುವ ಸಂಖ್ಯೆ 7,204 ಆಗಿದೆ. ಗಣತಿ ನಮೂನೆ ಡಿಜಿಟಲೀಕರಣ ಹಂತದಲ್ಲಿ ಗೈರು, ಸ್ಥಳಾಂತರ, ಮರಣ ಹೊಂದಿದವರು, ಎರಡು ಕಡೆ ನೊಂದಣಿಯಾಗಿರುವವರು, ಇತರೆ ಕಾರಣಗಳಿಂದ ಗುರುತಿಸಲಾದ ಒಟ್ಟು ಮತದಾರರ ಸಂಖ್ಯೆ 88,275 ಆಗಿದೆ. ಒಟ್ಟಾರೆ ಎಸ್.ಐ.ಆರ್ 2026ರ ಕರಡು ಮತದಾರರ ಪಟ್ಟಿಯಲ್ಲಿನ ಮತದಾರರ ಸಂಖ್ಯೆ 7,91,949 ಆಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

▪️ಕರಡು ಮತದಾರರ ಪಟ್ಟಿಯು ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಲ್ಲಿ ಪ್ರಚುರ ಪಡಿಸಲಾಗಿದೆ. ವೆಬ್ ಸೈಟ್ https://ceo.karnataka.gov.in/en ಮತ್ತು https://chamrajnagar.nic.in/en/ ಗಳ ಮುಖಾಂತರವು ಕರಡು ಮತದಾರರ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿ ಖಚಿತ ಪಡಿಸಿಕೊಳ್ಳಬೇಕು. ಆಗಸ್ಟ್ 24 ರಿಂದ ಸೆಪ್ಟೆಂಬರ್ 23ರವರೆಗೆ ಸಾರ್ವಜನಿಕರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಈ ಅವಧಿಯಲ್ಲಿ ಸ್ವೀಕೃತವಾಗುವ ಹಕ್ಕು ಆಕ್ಷೇಪಣೆಗಳನ್ನು ಆಗಸ್ಟ್ 24 ರಿಂದ ಅಕ್ಟೋಬರ್ 22ರವರೆಗೆ ಸಂಬಂಧಿಸಿದ ಮತದಾರರ ನೊಂದಣಾಧಿಕಾರಿಗಳು ಇತ್ಯರ್ಥಪಡಿಸಲಿದ್ದಾರೆ ಎಂದರು.

▪️ಅರ್ಹ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಕೈಬಿಟ್ಟು ಹೋಗಿದ್ದಲ್ಲಿ ಸಂಬಂಧಿಸಿದ ಮತದಾರರು ನಮೂನೆ 6ರ ಅರ್ಜಿಯ ಜೊತೆ ಘೋಷಣಾ ಪತ್ರ ಹಾಗೂ ಅಗತ್ಯ ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಿಕೊಳ್ಳಬಹುದು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ನಮೂನೆ 6, ಎನ್.ಆರ್.ಐ ಮತದಾರರಿಗೆ ನೊಂದಾಯಿಸಲು ನಮೂನೆ 6ಎ, ಹೆಸರು ತೆಗೆದು ಹಾಕಲು ನಮೂನೆ 7, ತಿದ್ದುಪಡಿ ಸ್ಥಳಾಂತರ, ವಿಶೇಷಚೇತನ ಮತದಾರರ ಮಾರ್ಕಿಂಗ್, ಎಪಿಕ್ ಕಾರ್ಡ್‍ಗಳ ಬದಲಿಗಾಗಿ ನಮೂನೆ 8ರಲ್ಲಿ ಭರ್ತಿಮಾಡಿ ಸೂಕ್ತ ದಾಖಲಾತಿಗಳಿಗೆ ಸಂಬಂಧಪಟ್ಟ ಬಿಎಲ್‍ಒಗಳಿಗೆ ಸಲ್ಲಿಸಬಹುದಾಗಿದೆ. ನಮೂನೆಗಳನ್ನು ಆನ್‍ಲೈನ್ (ವೆಬ್ ಸೈಟ್ ವಿಳಾಸ https://voters.eci.gov.in ) ಮತ್ತು ಮೊಬೈಲ್ ಆಪ್ ಮೂಲಕವು ಸಲ್ಲಿಸಬಹುದಾಗಿದೆ.

▪️ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಗಣತಿ ನಮೂನೆ ಗಣಕೀಕರಣ ಹಂತದಲ್ಲಿ 2002ರ ಮತದಾರರ ಪಟ್ಟಿಯ ಮ್ಯಾಪಿಂಗ್ ಆಗದಿರುವ ಹಾಗೂ ಮ್ಯಾಪಿಂಗ್ ಆಗಿರುವುದರಲ್ಲಿ ವ್ಯತ್ಯಾಸ ಕಂಡುಬಂದಿರುವ (ಐogiಛಿಚಿಟ ಆisಛಿಡಿeಠಿಚಿಟಿಛಿಥಿ) ಮತದಾರರಿಗೆ ಕರಡು ಮತದಾರರ ಪಟ್ಟಿ ಪ್ರಕಟಣೆಯ ಸಂಬಂಧಿಸಿದ ದಿನಾಂಕದಿಂದ ನೋಟಿಸ್‍ಗಳನ್ನು ಜನರೇಟ್ ಮಾಡಿ, ಬಿ.ಎಲ್.ಒ ಮುಖಾಂತರ ಸಂಬಂಧಿಸಿದ ಮತದಾರರಿಗೆ ಜಾರಿ ಮಾಡಿ ಸ್ವೀಕೃತಿ ಪಡೆಯಲಾಗುತ್ತದೆ. ಸದರಿ ಮತದಾರರು ವಿಚಾರಣೆಯ ದಿನಾಂಕದಂದು ವಿಚಾರಣಾ ನೋಟೀಸ್‍ನಲ್ಲಿ ನಿಗದಿಪಡಿಸಿರುವ ಸ್ಥಳದಲ್ಲಿ ಖುದ್ದು ಹಾಜರಾಗಿ, ಈ ಕೆಳಕಂಡ ದಾಖಲೆಗಳ ಪೈಕಿ, ಯಾವುದಾದರೊಂದು ದಾಖಲೆಯನ್ನು ಒದಗಿಸಬೇಕಾಗಿರುತ್ತದೆ.

▪️ಕೇಂದ್ರ ಸರ್ಕಾರ /ರಾಜ್ಯ ಸರ್ಕಾರ /ಸಾರ್ವಜನಿಕ ವಲಯದ ಉದ್ಯಮದ ಖಾಯಂ ನೌಕರ ಅಥವಾ ಪಿಂಚಣಿದಾರರಿಗೆ ನೀಡಿರುವ ಗುರುತಿನ ಚೀಟಿ ಅಥವಾ ಪಿಂಚಣಿ ಪಾವತಿ ಆದೇಶ (ಪಿಪಿಒ), ಭಾರತದಲ್ಲಿ 01.07.1987 ಕ್ಕಿಂತ ಮೊದಲು ಸರ್ಕಾರ, ಸ್ಥಳೀಯ ಪ್ರಾಧಿಕಾರ, ಬ್ಯಾಂಕ್, ಅಂಚೆ ಇಲಾಖೆ, ಭಾರತೀಯ ಜೀವ ವಿಮಾ ನಿಗಮ (ಎಲ್.ಐ.ಸಿ) ಅಥವಾ ಸಾರ್ವಜನಿಕ ವಲಯದ ಉದ್ಯಮಗಳಿಂದ ನೀಡಲಾದ ಯಾವುದೇ ಗುರುತಿನ ಚೀಟಿ, ಪ್ರಮಾಣಪತ್ರ ಅಥವಾ ದಾಖಲೆ, ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜನನ ಪ್ರಮಾಣಪತ್ರ, ಪಾಸ್ ಪೋರ್ಟ್, ಮಾನ್ಯತೆ ಪಡೆದ ಮಂಡಳಿ / ವಿಶ್ವವಿದ್ಯಾಲಯದಿಂದ ನೀಡಲಾದ ಮೆಟ್ರಿಕ್ಯುಲೇಷನ್ ಅಥವಾ ಶೈಕ್ಷಣಿಕ ಪ್ರಮಾಣಪತ್ರ, ಖಾಯಂ ನಿವಾಸ ಪ್ರಮಾಣಪತ್ರ, ಅರಣ್ಯ ಹಕ್ಕು ಪ್ರಮಾಣಪತ್ರ, ಒಬಿಸಿ/ ಪರಿಶಿಷ್ಟ ಜಾತಿ(ಎಸ್.ಸಿ) /ಪರಿಶಿಷ್ಟ ಪಂಗಡ (ಎಸ್.ಟಿ) ಅಥವಾ ಇತರೆ ಜಾತಿ ಪ್ರಮಾಣಪತ್ರ, ರಾಷ್ಟ್ರೀಯ ನಾಗರಿಕರ ನೋಂದಣಿ (ಓಚಿಣioಟಿಚಿಟ ಖegisಣeಡಿ oಜಿ ಅiಣizeಟಿs-ಓಖಅ) (ಅಸ್ತಿತ್ವದಲ್ಲಿರುವ ಸ್ಥಳಗಳಲ್ಲಿ), ಯಾವುದೇ ಕಾನೂನುಬದ್ದ ಅಥವಾ ಆಡಳಿತಾತ್ಮಕ ನಿಯಮಗಳಡಿಯಲ್ಲಿ ಸರ್ಕಾರಿ ಅಧಿಕಾರಿಗಳು ನಿರ್ವಹಿಸುವ (ಈಚಿmiಟಥಿ ಖegisಣeಡಿ), ಸರ್ಕಾರದಿಂದ ನೀಡಲಾದ ಜಮೀನು ಅಥವಾ ಮನೆ ಹಂಚಿಕೆ ಪ್ರಮಾಣಪತ್ರ, ಆಧಾರ್ ಕಾರ್ಡನ್ನು ಗುರುತಿನ ಚೀಟಿಯ ದಾಖಲೆಯಾಗಿ ಮಾತ್ರ ಪರಿಗಣಿಸಲಾಗುತ್ತದೆ. ಆಧಾರ್ ಅನ್ನು ಜನ್ಮದಿನಾಂಕ ಮತ್ತು ಪೌರತ್ವ ದೃಢೀಕರಣವನ್ನಾಗಿ ಪರಿಗಣಿಸಲಾಗುವುದಿಲ್ಲ.

▪️ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿದ ನಂತರ ಅಕ್ಟೋಬರ್ 27 ರಂದು ಅಂತಿಮ ಮತದಾರ ಪಟ್ಟಿ ಪ್ರಕಟಿಸಲಾಗುತ್ತದೆ.

ರೈತರಿಗೆ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ! ತಕ್ಷಣವೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಓನ್ ಕೇಂದ್ರಗಳಿಗೆ ಬೇಟಿ ನೀಡಿ.
21/08/2026

ರೈತರಿಗೆ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ! ತಕ್ಷಣವೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಓನ್ ಕೇಂದ್ರಗಳಿಗೆ ಬೇಟಿ ನೀಡಿ.

📢 ನೇರ ಫೋನ್-ಇನ್ ಕಾರ್ಯಕ್ರಮ – ಸಾರ್ವಜನಿಕರ ಕುಂದುಕೊರತೆ ಪರಿಹಾರಕ್ಕಾಗಿಜಿಲ್ಲಾಡಳಿತ, ಚಾಮರಾಜನಗರ ವತಿಯಿಂದ ಸಾರ್ವಜನಿಕರ ಸಮಸ್ಯೆಗಳು ಹಾಗೂ ದೂರ...
21/08/2026

📢 ನೇರ ಫೋನ್-ಇನ್ ಕಾರ್ಯಕ್ರಮ – ಸಾರ್ವಜನಿಕರ ಕುಂದುಕೊರತೆ ಪರಿಹಾರಕ್ಕಾಗಿ

ಜಿಲ್ಲಾಡಳಿತ, ಚಾಮರಾಜನಗರ ವತಿಯಿಂದ ಸಾರ್ವಜನಿಕರ ಸಮಸ್ಯೆಗಳು ಹಾಗೂ ದೂರುಗಳನ್ನು ಆಲಿಸಿ ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ನೇರ ಫೋನ್-ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ನೇರವಾಗಿ ಸಂಪರ್ಕಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.










ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟ : ಜಿಲ್ಲಾಧಿಕಾರಿ ಶ್ರೀರೂಪ▪️  ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಜಿಲ್ಲೆಯ ನಾಲ್ಕು ...
19/08/2026

ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟ : ಜಿಲ್ಲಾಧಿಕಾರಿ ಶ್ರೀರೂಪ

▪️ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.

▪️ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ವಿಶೆಷ ಸಮಗ್ರ ಪರಿಷ್ಕರಣೆ- 2026ರ ಸಂಬಂಧ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸುವ ಕುರಿತಂತೆ ಮಾನ್ಯತೆ ಪಡೆದ ನೊಂದಾಯಿತ ರಾಜಕೀತ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

▪️ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾರರ ನೊಂದಣಾಧಿಕಾರಿ, ಸಹಾಯಕ ನೊಂದಣಾಧಿಕಾರಿ, ತಹಶೀಲ್ದಾರ್ ಕಚೇರಿಗಳು ಹಾಗೂ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಲಾಗುತ್ತದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿದೆಯೇ, ಇಲ್ಲವೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಲು ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಲು ಬಿ.ಎಲ್.ಎ-2 ರವರ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

▪️ ಜಿಲ್ಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 30ರಿಂದ ಆಗಸ್ಟ್ 17ರವರೆಗೆ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಿ ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಸ್ವೀಕರಿಸಿ ಅವುಗಳನ್ನು ಗಣಕೀಕರಣಗೊಳಿಸಲಾಗಿದೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,24,616 ಮತದಾರರಿದ್ದು, ಈ ಪೈಕಿ 2,02,670 ಗಣತಿ ನಮೂನೆಗಳನ್ನು, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,21,151 ಮತದಾರರಿದ್ದು, ಇದರಲ್ಲಿ 1,96,087 ಗಣತಿ ನಮೂನೆಗಳು, ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,17,852 ಮತದಾರರಿದ್ದು, ಈ ಪೈಕಿ 1,94,730 ಗಣತಿ ನಮೂನೆಗಳನ್ನು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,16,605 ಮತದಾರರಿದ್ದು, ಇದರಲ್ಲಿ 1,98,460 ಗಣತಿ ನಮೂನೆಗಳು ಡಿಜಿಟಲೀಕರಣಗೊಳಿಸಲಾಗಿದೆ ಎಂದರು.

▪️ ಜಿಲ್ಲೆಯಲ್ಲಿ 983 ಮತಗಟ್ಟೆಗಳಿದ್ದು, ಒಟ್ಟಾರೆ 8,80,224 ಮತದಾರರಿದ್ದಾರೆ. ಇದರಲ್ಲಿ 7,91,947 ಗಣತಿ ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. ಗೈರು ಹಾಜರಿ, ಸ್ಥಳಾಂತರ, ಮರಣ ಹೊಂದಿರುವ ಹಾಗೂ ಎರಡು ಕಡೆ ನೋಂದಣಿಯಾಗಿರುವ ಹಾಗೂ ಇತರೆ ಸೇರಿದಂತೆ ಒಟ್ಟು 88,277 ಮತದಾರರನ್ನು ಗುರುತಿಸಲಾಗಿದೆ. ಇವರಲ್ಲಿ 10,312 ಗೈರು ಹಾಜರಿ, 37,855 ಸ್ಥಳಾಂತರ, 31,474 ಮರಣ ಹೊಂದಿದವರು, 8,303 ಎರಡು ಕಡೆ ನೊಂದಣಿಯಾಗಿರುವವರು, ಇತರೆ 333 ಸೇರಿದ್ದಾರೆ ಎಂದು ಹೇಳಿದರು.

▪️ ಹನೂರು ವಿಧಾನಸಭಾ ಕ್ಷೇತ್ರದಲ್ಲಿ 635 ಗೈರು ಹಾಜರಿ, 11,770 ಸ್ಥಳಾಂತರ, 6,536 ಮರಣ ಹೊಂದಿದವರು, 2,965 ಎರಡು ಕಡೆ ನೊಂದಣಿಯಾಗಿರುವವರು, ಇತರೆ 40 ಸೇರಿದಂತೆ 21,946 ಮತದಾರರನ್ನು ಗುರುತಿಸಲಾಗಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 2,440 ಗೈರು ಹಾಜರಿ, 10,474 ಸ್ಥಳಾಂತರ, 10,335 ಮರಣ ಹೊಂದಿದವರು, 1,797 ಎರಡು ಕಡೆ ನೊಂದಣಿಯಾಗಿರುವವರು, ಇತರೆ 18 ಸೇರಿದಂತೆ 25,064 ಮತದಾರರನ್ನು ಗುರುತಿಸಲಾಗಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 3,716 ಗೈರು ಹಾಜರಿ, 9,482 ಸ್ಥಳಾಂತರ, 8,073 ಮರಣ ಹೊಂದಿದವರು, 1,778 ಎರಡು ಕಡೆ ನೊಂದಣಿಯಾಗಿರುವವರು, ಇತರೆ 73 ಸೇರಿದಂತೆ 23,122 ಮತದಾರರನ್ನು ಗುರುತಿಸಲಾಗಿದೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 3,521 ಗೈರು ಹಾಜರಿ, 6,129 ಸ್ಥಳಾಂತರ, 6,530 ಮರಣ ಹೊಂದಿದವರು, 1,763 ಎರಡು ಕಡೆ ನೊಂದಣಿಯಾಗಿರುವವರು, ಇತರೆ 202 ಸೇರಿದಂತೆ 18,145 ಮತದಾರರನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.

▪️ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎಂ. ಚಿಕ್ಕ ಮಹದೇವು, ಎಸ್. ಬಾಲಸುಬ್ರಮಣ್ಯ, ಎಚ್.ಎಸ್. ತೋಂಟದಾರ್ಯಸ್ವಾಮಿ, ಶಶಿಕಲಾ, ಬ್ಯಾಡಮೂಡ್ಲು ಬಸವಣ್ಣ, ಪಿ. ಕೃಷ್ಣ ಸಭೆಯಲ್ಲಿ ಉಪಸ್ಥಿತರಿದ್ದರು.

Address

Chamarajanagar
571313

Alerts

Be the first to know and let us send you an email when DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ ಜಿಲ್ಲೆ posts news and promotions. Your email address will not be used for any other purpose, and you can unsubscribe at any time.

Contact The Organization

Send a message to DC Chamarajanagar - ಜಿಲ್ಲಾಧಿಕಾರಿ ಚಾಮರಾಜನಗರ ಜಿಲ್ಲೆ:

Shortcuts

Share