CEO Chamarajanagar

CEO Chamarajanagar Official Handle of Chief executive officer Zilla panchayat Chamarajanagar

"ವಿಶ್ವ ತಂಬಾಕು ಮುಕ್ತ ದಿನ - 2026" ರ ಅಂಗವಾಗಿ ಇಂದು ಚಾಮರಾಜನಗರದ  ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂ...
30/05/2026

"ವಿಶ್ವ ತಂಬಾಕು ಮುಕ್ತ ದಿನ - 2026" ರ ಅಂಗವಾಗಿ ಇಂದು ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
​ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ, ವಿಶೇಷವಾಗಿ ಯುವ ಪೀಳಿಗೆಯಲ್ಲಿ ಅರಿವು ಮೂಡಿಸುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಪ್ರೋತ್ಸಾಹಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಬನ್ನಿ, ನಮ್ಮ ಜಿಲ್ಲೆಯನ್ನು ತಂಬಾಕು ಮುಕ್ತ ಹಾಗೂ ಆರೋಗ್ಯ ಪೂರ್ಣ ಜಿಲ್ಲೆಯನ್ನಾಗಿ ಮಾಡಲು ನಾವೆಲ್ಲರೂ ಕೈಜೋಡಿಸೋಣ.

Rural Development and Panchayat Raj - Karnataka
K Venkatesh

ಮಾನವ ಅಭಿವೃದ್ಧಿ ಸೂಚ್ಯಂಕ (HDI) ಪ್ರಗತಿ ಪರಿಶೀಲನಾ ಸಭೆ 📊🌱​ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಜೀವನಮಟ್ಟವನ್ನು ಸುಧಾ...
30/05/2026

ಮಾನವ ಅಭಿವೃದ್ಧಿ ಸೂಚ್ಯಂಕ (HDI) ಪ್ರಗತಿ ಪರಿಶೀಲನಾ ಸಭೆ 📊🌱
​ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಜೀವನಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ, ಇಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳೊಂದಿಗೆ ಮಾನವ ಅಭಿವೃದ್ಧಿ ಸೂಚ್ಯಂಕ (HDI) ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.

ದಿನಾಂಕ 29.05.2026 ರಂದು   ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (DWSM) ಸಭೆ ಹಾಗೂ ಟಾಸ್ಕ್ ಫೋರ್ಸ್ ಸಹಿ ಸಭೆ ನಡೆಸಲಾಯಿತು.ಸಭೆಯಲ್ಲಿ ಜಲ ಜ...
30/05/2026

ದಿನಾಂಕ 29.05.2026 ರಂದು ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (DWSM) ಸಭೆ ಹಾಗೂ ಟಾಸ್ಕ್ ಫೋರ್ಸ್ ಸಹಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಜಲ ಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಪ್ರಗತಿಯೊಂದಿಗೆ, ಪ್ರಸ್ತುತ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ನಿರ್ವಹಣೆ ಕುರಿತು ಈ ಕೆಳಗಿನ ಪ್ರಮುಖ ನಿರ್ದೇಶನಗಳನ್ನು ನೀಡಲಾಯಿತು:

* ನಿರಂತರ ನೀರು ಪೂರೈಕೆ: ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಬೇಸಿಗೆಯಲ್ಲೂ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸುವುದು.

* ದುರಸ್ತಿ ಕಾರ್ಯ: ಪೈಪ್‌ಲೈನ್ ಸೋರಿಕೆ ಹಾಗೂ ಮೋಟಾರ್‌ಗಳ ದುರಸ್ತಿಯನ್ನು ತುರ್ತಾಗಿ ನಿರ್ವಹಿಸಲು ಸೂಚನೆ.

* ನೀರಿನ ಮೂಲಗಳ ಸಂರಕ್ಷಣೆ: ಅಂತರ್ಜಲ ಕುಸಿಯುತ್ತಿರುವ ಕಡೆ ಪರ್ಯಾಯ ವ್ಯವಸ್ಥೆ ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಸುವ ಅಗತ್ಯವಿದ್ದಲ್ಲಿ ತಕ್ಷಣ ಕ್ರಮ ಕೈಗೊಳ್ಳುವುದು.

* ಗುಣಮಟ್ಟದ ಪರೀಕ್ಷೆ: ಬೇಸಿಗೆಯಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ನೀರಿನ ಶುದ್ಧತೆಯನ್ನು ನಿಯಮಿತವಾಗಿ ಪರೀಕ್ಷಿಸುವುದು (FTK Testing).

ಸಭೆಯಲ್ಲಿ ಉಪ ಕಾರ್ಯದರ್ಶಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಡಿ.ಡಬ್ಲ್ಯೂ.ಎಸ್.ಎಂ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಚಾಮರಾಜನಗರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (DIET)...
26/05/2026

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಚಾಮರಾಜನಗರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (DIET) ಹಾಗೂ ಅಜೀಮ್ ಪ್ರೇಮ್‌ಜೀ ಫೌಂಡೇಷನ್ ಇವರ ಜಂಟಿ ಸಹಯೋಗದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ವಾರ್ಷಿಕ ಕಾರ್ಯ ಯೋಜನೆ ಕುರಿತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಒಂದು ದಿನದ ಮಹತ್ವದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

K Venkatesh Madhu Bangarappa

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ  (NRLM) ಅಡಿಯಲ್ಲಿ ನಮ್ಮ ಜಿಲ್ಲೆಗೆ ಒಟ್ಟು 07 ಅಕ್ಕ ಕೆಫೆಗಳು ಮಂಜೂರಾಗಿದ್ದು, ಇವುಗಳ ಮೂಲಕ...
26/05/2026

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ (NRLM) ಅಡಿಯಲ್ಲಿ ನಮ್ಮ ಜಿಲ್ಲೆಗೆ ಒಟ್ಟು 07 ಅಕ್ಕ ಕೆಫೆಗಳು ಮಂಜೂರಾಗಿದ್ದು, ಇವುಗಳ ಮೂಲಕ ಮಹಿಳಾ ಸ್ವ-ಸಹಾಯ ಸಂಘಗಳ (SHG) ಸದಸ್ಯರಿಗೆ ಆಹಾರ ಪೂರೈಕೆ ಕ್ಷೇತ್ರದಲ್ಲಿ ಸುಸ್ಥಿರ ಜೀವನೋಪಾಯವನ್ನು ಒದಗಿಸುವುದು ನಮ್ಮ ಪ್ರಮುಖ ಆಧ್ಯತೆಯಾಗಿದೆ. ಸಾರ್ವಜನಿಕರಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ಉತ್ತಮ ಗುಣಮಟ್ಟದ, ಶುಚಿ-ರುಚಿಯಾದ ಹಾಗೂ ಪೌಷ್ಟಿಕ ಆಹಾರವನ್ನು ಒದಗಿಸುವ ದೂರದೃಷ್ಟಿಯೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

* ​ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಪ್ರತಿ ತಾಲ್ಲೂಕಿಗೆ ಒಂದರಂತೆ ಐದು ತಾಲ್ಲೂಕುಗಳಲ್ಲಿ ಪ್ರಗತಿಯಲ್ಲಿರುವ ಅಕ್ಕ ಕೆಫೆಗಳ ಕಾಮಗಾರಿಗಳನ್ನು ಅತ್ಯಂತ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

* ಇದರ ಮುಂದುವರಿದ ಭಾಗವಾಗಿ, ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನವಾಗಿ ಆರಂಭವಾಗಲಿರುವ 'ಅಕ್ಕ ಕೆಫೆ'ಯ ನಿರ್ವಹಣೆಗೆ ಅರ್ಹ ಮಹಿಳಾ ಸ್ವ-ಸಹಾಯ ಸಂಘವನ್ನು (SHG) ಆಯ್ಕೆ ಮಾಡಲು ವಿಶೇಷ ಸಮಿತಿ ಸಭೆಯನ್ನು ಆಯೋಜಿಸಲಾಗಿತ್ತು.

* ​ಈ ಸಂದರ್ಭದಲ್ಲಿ ಶಾರ್ಟ್‌ಲಿಸ್ಟ್ ಆದ ಕಾಳಿಕಾಂಬ ಮತ್ತು ಜಗದೀಶ್ವರಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳು ತಯಾರಿಸಿದ್ದ ವಿವಿಧ ಬಗೆಯ ಸಾಂಪ್ರದಾಯಿಕ ಹಾಗೂ ರುಚಿಕರವಾದ ಖಾದ್ಯಗಳನ್ನು ಪರಿಶೀಲಿಸಲಾಯಿತು. ನಮ್ಮ ಗ್ರಾಮೀಣ ಮಹಿಳೆಯರ ಕೈರುಚಿ ಮತ್ತು ಉದ್ಯಮಶೀಲತೆಯ ಉತ್ಸಾಹ ನಿಜಕ್ಕೂ ಹೆಮ್ಮೆ ತರುವಂತಿದೆ.

​ಈ ಸಭೆಯಲ್ಲಿ ಉಪ ಕಾರ್ಯದರ್ಶಿ, ಪಂಚಾಯತ್ ರಾಜ್ ವಿಭಾಗದ ಕಾರ್ಯಪಾಲಕ ಅಭಿಯಂತರರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ (ಜಿಲ್ಲಾ ಕೌಶಲ್ಯ ಮಿಷನ್), ಜಿಲ್ಲಾ ಆಹಾರ ಸುರಕ್ಷಣಾ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸಮಿತಿಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

​ #ಮಹಿಳಾಸಬಲೀಕರಣ #ಅಕ್ಕಕೆಫೆ #ಜೀವನೋಪಾಯಮಿಷನ್ #ಗ್ರಾಮೀಣಾಭಿವೃದ್ಧಿ #ಚಾಮರಾಜನಗರ

ಇಂದು ಚಾಮರಾಜನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳಾದ ಮಾನ್ಯ ಶ್ರ...
25/05/2026

ಇಂದು ಚಾಮರಾಜನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳಾದ ಮಾನ್ಯ ಶ್ರೀಮತಿ ಆರ್. ವಿನೋತ್ ಪ್ರಿಯಾ (IAS) ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಹಾಗೂ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ತುರ್ತು ಮುಂಜಾಗ್ರತಾ ಕ್ರಮಗಳ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ, ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.

​ಸಭೆಯ ಪ್ರಮುಖ ಅಂಶಗಳು::
​💧 ಕುಡಿಯುವ ನೀರಿನ ಸಮಸ್ಯೆ ಪರಿಹಾರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಅಧಿಕಾರಿಗಳು ಸನ್ನದ್ಧರಾಗಿರಬೇಕು. ಅಗತ್ಯವಿರುವೆಡೆ ಪಾರದರ್ಶಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಹಾಗೂ ಜಲ ಜೀವನ್ ಮಿಷನ್ (JJM) ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ನೋಟಿಸ್ ನೀಡಲು ಸೂಚಿಸಲಾಗಿದೆ.

​🌧️ ಮುಂಗಾರು ಮುಂಜಾಗ್ರತಾ ಕ್ರಮಗಳು: ಮಳೆಗಾಲ ಆರಂಭವಾಗುತ್ತಿರುವುದರಿಂದ ಪ್ರಕೃತಿ ವಿಕೋಪ ಎದುರಿಸಲು ಸಿದ್ಧತೆ, ಚರಂಡಿಗಳ ಹೂಳು ತೆಗೆಯುವುದು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

​📚 ಶಿಕ್ಷಣ ಇಲಾಖೆ ಸುಧಾರಣೆ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹೆಚ್ಚಿನ ಸುಧಾರಣೆ ಕಾಣಲು ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳ ಮೇಲೆ ವಿಶೇಷ ಗಮನ ಹರಿಸುವುದು ಹಾಗೂ ಹೊಸ ಕಲಿಕಾ ವಿಧಾನಗಳನ್ನು ಅಳವಡಿಸಿಕೊಳ್ಳಲು ಮಾರ್ಗದರ್ಶನ ನೀಡಲಾಯಿತು. ಹಾಸ್ಟೆಲ್‌ಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಹಾಗೂ ಗೈರುಹಾಜರಿ ನಿಯಂತ್ರಿಸಲು ಕ್ಷೇತ್ರ ಪ್ರವಾಸ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

​📊 2026-27ನೇ ಸಾಲಿನ ಕ್ರಿಯಾಯೋಜನೆ: ಯಾವುದೇ ವಿಳಂಬಕ್ಕೆ ಆಸ್ಪದ ನೀಡದೆ ಜೂನ್ ಅಂತ್ಯದೊಳಗೆ ಮುಂಬರುವ ಸಾಲಿನ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲು ನಿರ್ದೇಶಿಸಲಾಗಿದೆ.

​ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀಮತಿ ಶ್ರೀರೂಪ (IAS), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಎಂ. ಮುತ್ತುರಾಜು (IPS), ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ಶ್ರೀ ಟಿ. ಜವರೇಗೌಡ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೊಳ್ಳೇಗಾಲದ ಶ್ರೀ ವರಪುರಂ ಮಧ್ಯರಂಗ ಕ್ಷೇತ್ರದ ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ಭಾಗಿಕೊಳ್ಳೇಗಾಲ ತಾಲ್ಲೂಕಿನ ಐತಿಹಾಸಿಕ ಶ್ರೀ ವರಪುರಂ ಮಧ್ಯರಂಗ...
22/05/2026

ಕೊಳ್ಳೇಗಾಲದ ಶ್ರೀ ವರಪುರಂ ಮಧ್ಯರಂಗ ಕ್ಷೇತ್ರದ ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ಭಾಗಿ
ಕೊಳ್ಳೇಗಾಲ ತಾಲ್ಲೂಕಿನ ಐತಿಹಾಸಿಕ ಶ್ರೀ ವರಪುರಂ ಮಧ್ಯರಂಗ ಕ್ಷೇತ್ರದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡಿರುವ ಶ್ರೀ ಜಗನ್ಮೋಹನ ರಂಗನಾಥಸ್ವಾಮಿ ದೇವಾಲಯದ ಪೂರಕ ಅಷ್ಟಬಂಧನ ದಿವ್ಯ ಮಹಾ ಕುಂಭಾಭಿಷೇಕ ಹಾಗೂ ಸಂಪ್ರೋಕ್ಷಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೌರವಾನ್ವಿತ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪಾಲ್ಗೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಉಪ ಮುಖ್ಯಮಂತ್ರಿಗಳು, "ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪುವುದು ನಮ್ಮ ಕೆಲಸ. ದೇವರು ನೀಡುವ ಅವಕಾಶಗಳನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳಬೇಕು" ಎಂದು ಆಶಿಸಿದರು. ಜೊತೆಗೆ, ಚಾಮರಾಜನಗರ ಜಿಲ್ಲೆಯು ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ಅತ್ಯಂತ ಶ್ರೀಮಂತವಾಗಿದ್ದು, ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ ಸಾರ್ವಜನಿಕರ ಸಮಸ್ಯೆಗಳು ನಿವಾರಣೆಯಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಾನ್ಯ ಪಶುಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ. ವೆಂಕಟೇಶ್, ಮಾನ್ಯ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಶ್ರೀ ರಾಮಲಿಂಗರೆಡ್ಡಿ, ಶಾಸಕರುಗಳಾದ ಶ್ರೀ ಸಿ. ಪುಟ್ಟರಂಗಶೆಟ್ಟಿ, ಶ್ರೀ ಎ.ಆರ್. ಕೃಷ್ಣಮೂರ್ತಿ, ಶ್ರೀ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿಗಳಾದ ಶ್ರೀಮತಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಎಂ. ಮುತ್ತುರಾಜು, ದಾನಿಗಳಾದ ಶ್ರೀ ಮಹೇಶ್ ರೆಡ್ಡಿ ಹಾಗೂ ಇತರ ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇಂದು ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಪ್ರಗತಿ ಪರಿಶೀಲನಾ ಭೇಟಿಗಳನ್ನು ಕೈಗೊಳ್ಳಲಾಯಿತು.​📌 ಗ್ರ...
19/05/2026

ಇಂದು ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಪ್ರಗತಿ ಪರಿಶೀಲನಾ ಭೇಟಿಗಳನ್ನು ಕೈಗೊಳ್ಳಲಾಯಿತು.

​📌 ಗ್ರಾಮ ಪಂಚಾಯತ್ ಕಚೇರಿ ಭೇಟಿ : ಸಾರ್ವಜನಿಕ ಸೇವೆಗಳ ವಿತರಣೆ ಹಾಗೂ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಜನಸಾಮಾನ್ಯರ ಕುಂದುಕೊರತೆಗಳಿಗೆ ಶೀಘ್ರವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
​📌 ಅರಿವು ಕೇಂದ್ರ ಭೇಟಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಜ್ಞಾನದ ಬೆಳಕಾಗಿರುವ ಲೈಬ್ರರಿಗೆ ಭೇಟಿ ನೀಡಿ, ಅಲ್ಲಿನ ಪುಸ್ತಕಗಳ ಸಂಗ್ರಹ, ಮೂಲಸೌಕರ್ಯ ಹಾಗೂ ಡಿಜಿಟಲ್ ಸೌಲಭ್ಯಗಳನ್ನು ಪರಿಶೀಲಿಸಲಾಯಿತು.
​📌 ವಿವೇಕಾನಂದ ಗಿರಿಜನ ಪ್ರಾಥಮಿಕ ಮತ್ತು ಪ್ರೌಢ ಶಾಲೆ: ಶಾಲಾ ಆವರಣಕ್ಕೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ, ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಮೂಲಸೌಕರ್ಯಗಳ ಬಗ್ಗೆ ಚರ್ಚಿಸಲಾಯಿತು.

Priyank Kharge K Venkatesh Rural Development and Panchayat Raj - Karnataka

ಮಾನ್ಯ ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ. ವೆಂಕಟೇಶ್ ಅವರ ನೇತೃತ್ವದಲ್ಲಿ, ಹನೂರು ಶಾಸಕರಾದ ಶ್ರೀ ಎಂ.ಆರ್. ಮಂ...
17/05/2026

ಮಾನ್ಯ ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ. ವೆಂಕಟೇಶ್ ಅವರ ನೇತೃತ್ವದಲ್ಲಿ, ಹನೂರು ಶಾಸಕರಾದ ಶ್ರೀ ಎಂ.ಆರ್. ಮಂಜುನಾಥ್ ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಹನೂರು ತಾಲೂಕಿನ ತೀವ್ರ ನೀರಿನ ಅಭಾವ ಎದುರಿಸುತ್ತಿರುವ ಕೆಂಚಯ್ಯನದೊಡ್ಡಿ, ಎಂ.ಜಿ.ದೊಡ್ಡಿ, ಕುರಟ್ಟಿಹೊಸೂರು, ಹೊಸದೊಡ್ಡಿ ಮತ್ತು ಕೆಂಪಯ್ಯನಹಟ್ಟಿ ಗ್ರಾಮಗಳಿಗೆ ಭೇಟಿ ನೀಡಿ ಜಂಟಿ ಪರಿಶೀಲನೆ ನಡೆಸಲಾಯಿತು.

​ಪ್ರಮುಖ ನಿರ್ಧಾರಗಳು ಹಾಗೂ ಕೈಗೊಂಡ ಕ್ರಮಗಳು:

*​ಹೆಚ್ಚುವರಿ ಟ್ಯಾಂಕರ್ ಸರಬರಾಜು: ಕೊಳವೆಬಾವಿಗಳಲ್ಲಿ ನೀರು ಬತ್ತಿಹೋಗಿರುವ ಕಡೆಗಳಲ್ಲಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ಕೊರತೆಯಾಗದಂತೆ ಹೆಚ್ಚಿನ ಟ್ಯಾಂಕರ್‌ಗಳ ಮೂಲಕ ತಕ್ಷಣ ನೀರು ಒದಗಿಸಲು ಸೂಚಿಸಲಾಗಿದೆ.

*​ವಿದ್ಯುತ್ ಮತ್ತು ಮೋಟಾರ್ ಸಂಪರ್ಕ: ಕೊರೆಯಲಾದ ಬೋರ್‌ವೆಲ್‌ಗಳಿಗೆ ವಿಳಂಬವಿಲ್ಲದೆ ತಕ್ಷಣ ಮೋಟಾರ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಿ ಚಾಲನೆ ನೀಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

*​ಇಲಾಖಾ ಸಮನ್ವಯ: ಕೌದಳ್ಳಿ ಭಾಗದಲ್ಲಿ ಪೈಪ್‌ಲೈನ್ ಕಾಮಗಾರಿಗೆ ಇದ್ದ ಅರಣ್ಯ ಇಲಾಖೆಯ ತಾಂತ್ರಿಕ ಅಡಚಣೆಯನ್ನು ಸ್ಥಳದಲ್ಲೇ ಸಚಿವರು ಅಧಿಕಾರಿಗಳೊಂದಿಗೆ ಮಾತನಾಡಿ ಸುಗಮಗೊಳಿಸಿದರು.

*​ಸಾರ್ವಜನಿಕರ ಅಹವಾಲು ಆಲಿಕೆ: ಗ್ರಾಮಸ್ಥರ ಬೇಡಿಕೆಯಂತೆ ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆ, ಅಕ್ರಮ ಮದ್ಯ ಮಾರಾಟಕ್ಕೆ ತಡೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

​ಜಿಲ್ಲಾಡಳಿ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸಾರ್ವಜನಿಕರ ದಿನನಿತ್ಯದ ಮತ್ತು ತುರ್ತು ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ, ಸಮರ್ಪಕ ನೀರು ಪೂರೈಕೆಗೆ ನಿರಂತರ ಮೇಲ್ವಿಚಾರಣೆ ನಡೆಸಲಾಗುವುದು.

K Venkatesh Priyank Kharge Rural Development and Panchayat Raj - Karnataka

ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಷನ್ ಜಿಲ್ಲಾ ಸಂಸ್ಥೆ, ಚಾಮರಾಜನಗರ ಇವರ ಸಂಯುಕ್ತ ...
15/05/2026

ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಷನ್ ಜಿಲ್ಲಾ ಸಂಸ್ಥೆ, ಚಾಮರಾಜನಗರ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮತ್ತು ತಾಲೂಕು ಹಂತದ ಅನುಷ್ಠಾನಾಧಿಕಾರಿಗಳಿಗಾಗಿ ಆಯೋಜಿಸಲಾದ ಎರಡು ದಿನಗಳ ಶೈಕ್ಷಣಿಕ ಕಾರ್ಯಗಾರಕ್ಕೆ ಇಂದು ಚಾಲನೆ ನೀಡಲಾಯಿತು.
​ಜಿಲ್ಲೆಯ ಶೈಕ್ಷಣಿಕ ಪ್ರಗತಿ, ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಗುಣಾತ್ಮಕ ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ಈ ಕಾರ್ಯಗಾರವು ಅಧಿಕಾರಿಗಳಿಗೆ ಪೂರಕ ಮಾರ್ಗದರ್ಶನ ನೀಡಲಿದೆ.

K Venkatesh Madhu Bangarappa

Address

Chamarajanagar
571313

Alerts

Be the first to know and let us send you an email when CEO Chamarajanagar posts news and promotions. Your email address will not be used for any other purpose, and you can unsubscribe at any time.

Contact The Organization

Send a message to CEO Chamarajanagar:

Share