Chikkaballapura Police

Chikkaballapura Police Official page of Karnataka State Chikkaballapura District Police

ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಕಳೆದು ಹೋದ ಮೊಬೈಲ್ ಫೋನ್ ಅನ್ನು ಸಿ.ಇ.ಐ.ಆರ್ ಪೋರ್ಟಲ್ ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಹ...
06/09/2026

ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಕಳೆದು ಹೋದ ಮೊಬೈಲ್ ಫೋನ್ ಅನ್ನು ಸಿ.ಇ.ಐ.ಆರ್ ಪೋರ್ಟಲ್ ಮೂಲಕ ಪತ್ತೆ ಮಾಡಿ ವಾರಸುದಾರರಿಗೆ ಹಿಂದುರಿಗಿಸಲಾಗಿರುತ್ತದೆ.

ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಒಂದು ವೇಳೆ ನೀವು ನಿಮ್ಮ ಮೊಬೈಲ್ ಫೋನ್ ಕಳೆದು ಕೊಂಡಲ್ಲಿ, ಮೊಬೈಲ್ ಫೋನ್ ಗೆ ಸಂಬಂಧಪಟ್ಟ ದಾಖಲಾತಿಗಳು, ನಿಮ್ಮ ಗುರುತಿನ ಪುರಾವೆ, KSP Mobile App ಮೂಲಕ ಪೊಲೀಸ್ ಕಂಪ್ಲೆಂಟ್ ಪ್ರತಿ ಪಡೆದು, CEIR ವೆಬ್ ಪೋರ್ಟಲ್: https://www.ceir.gov.in ರಲ್ಲಿ ವರದಿ ದಾಖಲಿಸಲು ಕೋರಿದೆ.





ಪೆರೇಸಂದ್ರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಠಾಣಾ ವ್ಯಾಪ್ತಿಯ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದಲ್ಲಿ ಬೀಟ್ ಮೀಟಿಂಗ್ ಅನ್ನು ಹಮ್ಮಿಕೊಂಡಿದ್...
05/09/2026

ಪೆರೇಸಂದ್ರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಠಾಣಾ ವ್ಯಾಪ್ತಿಯ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದಲ್ಲಿ ಬೀಟ್ ಮೀಟಿಂಗ್ ಅನ್ನು ಹಮ್ಮಿಕೊಂಡಿದ್ದು, ಹೊಸ ಬೀಟ್ ವ್ಯವಸ್ಥೆಯಾದ ''ಮನೆ ಮನೆಗೆ ಪೊಲೀಸ್" ಹಾಗೂ "ನಮ್ಮ ಕಾಪ್ 24/7 ಎಐ ಚಾಟ್ ಬೋಟ್ ಸಹಯೋಗಿ" ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಿದ್ದು, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಸೈಬರ್ ಅಪರಾಧಗಳು ಹಾಗೂ ತುರ್ತು ಸಹಾಯವಾಣಿ 112, 1098, 1930 ಗಳ ಬಗ್ಗೆ ಅರಿವುಮೂಡಿಸಿರುತ್ತಾರೆ.

ಅಕ್ಕ ಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಚಿಕ್ಕಬಳ್ಳಾಪುರ ನಗರ ಬಸ್ ನಿಲ್ದಾಣ, ಎ ಪಿ ಎಂ ಸಿ ಮಾರುಕಟ್ಟೆ, ಚಿಕ್ಕಬಳ್ಳಾಪುರ ತಾಲ್ಲೂಕಿನ...
05/09/2026

ಅಕ್ಕ ಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಚಿಕ್ಕಬಳ್ಳಾಪುರ ನಗರ ಬಸ್ ನಿಲ್ದಾಣ, ಎ ಪಿ ಎಂ ಸಿ ಮಾರುಕಟ್ಟೆ, ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ದೇವಸ್ಥಾನ, ಇಶಾ ಫೌಂಡೇಶನ್ ಹಾಗೂ ವಿಷ್ಣುಪ್ರಿಯಾ ಕಾಲೇಜಿಗೆ ಭೇಟಿ ನೀಡಿ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಅಕ್ಕ ಪಡೆಯ ಕಾರ್ಯವೈಖರಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳು, ಸರಗಳ್ಳತನ, ಮಾನವ ಕಳ್ಳ ಸಾಗಾಣಿಕೆ, ವರದಕ್ಷಿಣೆ ಕಿರುಕುಳ, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ 1098, 112, ಮತ್ತು 1930 ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿರುತ್ತಾರೆ. /7

ಈ ದಿನ ಜಿಲ್ಲಾ ಪೊಲೀಸ್ ವತಿಯಿಂದ ಚಿಕ್ಕಬಳ್ಳಾಪುರ ನಗರದ ಪೊಲೀಸ್ ಸಮುದಾಯ ಭವನದಲ್ಲಿ, ಜಿಲ್ಲೆಯ ಎಲ್ಲಾ ಫ್ಲೆಕ್ಸ್ ಪ್ರಿಂಟಿಂಗ್ ಮತ್ತು ಡಿಜೆ ಸೌಂಡ...
05/09/2026

ಈ ದಿನ ಜಿಲ್ಲಾ ಪೊಲೀಸ್ ವತಿಯಿಂದ ಚಿಕ್ಕಬಳ್ಳಾಪುರ ನಗರದ ಪೊಲೀಸ್ ಸಮುದಾಯ ಭವನದಲ್ಲಿ, ಜಿಲ್ಲೆಯ ಎಲ್ಲಾ ಫ್ಲೆಕ್ಸ್ ಪ್ರಿಂಟಿಂಗ್ ಮತ್ತು ಡಿಜೆ ಸೌಂಡ್ ಸಿಸ್ಟಮ್ ಮಾಲೀಕರ ಜೊತೆ ಮುಂಬರಲಿರುವ ಗಣೇಶೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಶಾಂತಿ ಸಭೆಯನ್ನು ಹಮ್ಮಿಕೊಂಡಿದ್ದು, ಅವರಿಗೆ ಸರ್ಕಾರದ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿ ಇನ್ನಿತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಗಿರುತ್ತದೆ. /7

     /7
05/09/2026

/7

ಸಂಚಾರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಚಿಕ್ಕಬಳ್ಳಾಪುರ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ Drunk Drive ಪ್ರಕರಣಗಳನ...
05/09/2026

ಸಂಚಾರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಚಿಕ್ಕಬಳ್ಳಾಪುರ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದವರ ವಿರುದ್ಧ Drunk Drive ಪ್ರಕರಣಗಳನ್ನು ದಾಖಲಿಸಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿರುತ್ತಾರೆ.

ಮಹಿಳಾ ಠಾಣೆಗೆ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರನ್ನು ಬರಮಾಡಿಕೊಂಡು ಅವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋ...
05/09/2026

ಮಹಿಳಾ ಠಾಣೆಗೆ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರನ್ನು ಬರಮಾಡಿಕೊಂಡು ಅವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಜೆಜೆ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಮಾದಕ ವಸ್ತಗಳು ವರದಕ್ಷಿಣೆ ನಿಷೇಧ ಕಾಯ್ದೆ, ಹಾಗೂ ಸಹಾಯವಾಣಿ 1098, 112, 1930, 1933, ಗಳ ಬಗ್ಗೆ ಅರಿವು ಮೂಡಿಸಲಾಗಿರುತ್ತದೆ.

ಈ ದಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಾರದ ಕವಾಯತನ್ನು ಹಮ್ಮಿಕೊಂಡಿದ್ದು, ಕವಾಯಿತಿನ ನಂತರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕುಂದ...
04/09/2026

ಈ ದಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಾರದ ಕವಾಯತನ್ನು ಹಮ್ಮಿಕೊಂಡಿದ್ದು, ಕವಾಯಿತಿನ ನಂತರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕುಂದು ಕೊರತೆಗಳನ್ನು ಆಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಸೂಚನೆಗಳನ್ನು ನೀಡಲಾಗಿರುತ್ತದೆ. /7

ಅಕ್ಕ ಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ನಗರ ಬಸ್ ನಿಲ್ದಾಣ, ಇಶಾ ಫೌಂಡೇಶನ್, ಬಾಗೇಪಲ್ಲಿ ತಾಲ್ಲ...
04/09/2026

ಅಕ್ಕ ಪಡೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ನಗರ ಬಸ್ ನಿಲ್ದಾಣ, ಇಶಾ ಫೌಂಡೇಶನ್, ಬಾಗೇಪಲ್ಲಿ ತಾಲ್ಲೂಕಿನ ಪೋಲನಾಯಕನಪಲ್ಲಿ, ಜೂಲಪಾಳ್ಯ ಹಾಗೂ ಘಂಟವಾರಪಲ್ಲಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಅಕ್ಕ ಪಡೆಯ ಕಾರ್ಯವೈಖರಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳು, ಸರಗಳ್ಳತನ, ಮಾನವ ಕಳ್ಳ ಸಾಗಾಣಿಕೆ, ವರದಕ್ಷಿಣೆ ಕಿರುಕುಳ, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಿ 1098, 112, ಮತ್ತು 1930 ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿರುತ್ತಾರೆ. /7

Address

Office Of The District Superintendent Of Police – Marimakalahalli Chikkaballapura –
Chik Ballapur
562101

Alerts

Be the first to know and let us send you an email when Chikkaballapura Police posts news and promotions. Your email address will not be used for any other purpose, and you can unsubscribe at any time.

Contact The Organization

Send a message to Chikkaballapura Police:

Shortcuts

Share