GreeNation

GreeNation Save Trees, Save Water, Protect Nature

Working to Protect the Green Planet GreeNation has been working on various issues related to the environment since 2004.

as this organization belongs to India. Our work in the country is focused on Environmental campaigns particularly awareness on save water, save Tree, working on stop climate change, sustainable agriculture, preserving the oceans & forests, and preventing works against environment, As a environmental organization, GreeNation focuses on the most critical worldwide environmental issues such as ancien

t forests protection and promotion of renewable energies to stop climate change Elimination of toxic chemicals and Preventing the release of genetically engineered organisms into nature, Over the years GreeNation India has built a strong base of supporters & general members spread across the country. GreeNation is a non-profit, non government organization (NGO) with a significant presence in the country, to maintain its independence, GreeNation does not accept donations from corporates or businessman who does not respect the values of environment but relies on contributions from individual supporters and foundation grants.

JOIN GREENATION | SAVE EARTHBecome a Member Now
11/09/2025

JOIN GREENATION | SAVE EARTH
Become a Member Now

Join Greenation, India's independent environmental NGO, in our mission for eco-protection. Support campaigns focused on water conservation, tree planting, and renewable energy to combat climate change and protect our forests and oceans.

Don't Pack the Blue Planet with Polythene | SAY NO TO PLASTICTeam GreeNation
26/08/2025

Don't Pack the Blue Planet with Polythene | SAY NO TO PLASTIC
Team GreeNation

Putting an End to Plastic Pollution | World Environment Day
05/06/2025

Putting an End to Plastic Pollution | World Environment Day

ದಾವಣಗೆರೆ: (ಇಂಡೋ ಟೈಮ್ಸ್ ಮೀಡಿಯಾ) ಅಖಿಲ ಭಾರತ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲಿಮೀನ್ (AIMIM) ದಾವಣಗೆರೆ ಶಾಖೆಯ ಪ್ರತಿನಿಧಿ ಮಂಡಳಿ, ಜಿಲ್ಲಾ...
13/02/2025

ದಾವಣಗೆರೆ: (ಇಂಡೋ ಟೈಮ್ಸ್ ಮೀಡಿಯಾ) ಅಖಿಲ ಭಾರತ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲಿಮೀನ್ (AIMIM) ದಾವಣಗೆರೆ ಶಾಖೆಯ ಪ್ರತಿನಿಧಿ ಮಂಡಳಿ, ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಅಲಿ ಶೋಯಬ್ ಅವರ ನೇತೃತ್ವದಲ್ಲಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಮನವಿ ಸಲ್ಲಿಸಿದೆ. ಈ ಮನವಿಯನ್ನು ಜಿಲ್ಲೆ ಅಲ್ಪಸಂಖ್ಯಾತ ಅಧಿಕಾರಿ ಮುಖಾಂತರ ಸಚಿವರಿಗೆ ನೀಡಲಾಯಿತು.

ಪ್ರಸ್ತುತ 2024-25ನೇ ಸಾಲಿಗೆ ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಾಭಿವೃದ್ಧಿಗೆ ₹3,059.84 ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ಆದರೆ ಕೇವಲ ₹1,505.72 ಕೋಟಿ ಮೊತ್ತ ಮಾತ್ರ ವಿನಿಯೋಗವಾಗಿದೆ. ಸುಮಾರು ₹1,276.29 ಕೋಟಿ ಅನುದಾನ ಇನ್ನೂ ಖರ್ಚಾಗದೆ ಉಳಿದಿದ್ದು, ಇದು ಸರಿಯಾದ ನಿಯಂತ್ರಣ ಇಲ್ಲದ ಕಾರಣ ಎಂದು ಪ್ರತಿನಿಧಿ ಮಂಡಳಿ ಆರೋಪಿಸಿದೆ.

AIMIM ದಾವಣಗೆರೆ ಶಾಖೆಯ ಪ್ರಮುಖ ಬೇಡಿಕೆಗಳು:

✔ ಉಳಿದಿರುವ ₹1,276.29 ಕೋಟಿ ಮೊತ್ತವನ್ನು ಈ ಆರ್ಥಿಕ ವರ್ಷದ ಅಂತ್ಯಕ್ಕೆ ಸಂಪೂರ್ಣವಾಗಿ ಬಳಸಲು ತಕ್ಷಣ ಕ್ರಮ ಕೈಗೊಳ್ಳಬೇಕು.
✔ ಅನುದಾನದ ಯೋಜನೆವಾರು ಲೆಕ್ಕಪತ್ರ (ಆಡಿಟ್ ವರದಿ) ಜನತೆಗೆ ಮತ್ತು ಸಂಬಂಧಿತ ಸಮಿತಿಗಳಿಗೆ ಜಾರಿಗೆ ತರಬೇಕು.
✔ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದ ಯೋಜನೆಗಳ ಸದುಪಯೋಗ ತಲುಪುವಂತೆ ಕ್ರಮ ಕೈಗೊಳ್ಳಬೇಕು.

ಈ ಸಂಧರ್ಭದಲ್ಲಿ ಮಾತನಾಡಿದ ಮುಹಮ್ಮದ್ ಅಲಿ ಶೋಯಬ್ ಅವರು,
“ಸರ್ಕಾರವು ಪ್ರಾಮಾಣಿಕವಾಗಿ ಈ ಅನುದಾನವನ್ನು ಸಮರ್ಪಕವಾಗಿ ಬಳಸಿ, ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮಗೊಳಿಸಬೇಕು” ಎಂದು ಒತ್ತಾಯಿಸಿದರು.

ಇತ್ತೀಚೆಗೆ ಅನೇಕ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಿದರೂ, ಅದರ ಸರಿಯಾದ ಬಳಕೆ ಇಲ್ಲದಿರುವ ಬಗ್ಗೆ ಅನೇಕ ಅನುಮಾನಗಳು ವ್ಯಕ್ತವಾಗಿವೆ. ಸರ್ಕಾರದ ಹೊಣೆಗಾರಿಕೆ ಹೆಚ್ಚಿಸಲು ಮತ್ತು ಲೆಕ್ಕಪತ್ರ ಪಾರದರ್ಶಕವಾಗಿಸಲು ಈ ವರದಿ ಅನಿವಾರ್ಯ ಎಂದು AIMIM ಪ್ರತಿನಿಧಿ ಮಂಡಳಿ ಹೇಳಿದರು.

ಈ ಮನವಿಯನ್ನು ತಕ್ಷಣ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಲು ಪ್ರಸ್ತಾಪಿಸಲಾಗಿದೆ.

ಈ ಸಂದರ್ಭದಲ್ಲಿ AIMIM ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜ್ಮತುಲ್ಲಾ, ಜಿಲ್ಲಾ ಸಮಿತಿಯ ಸದಸ್ಯ ಸನೌಲ್ಲಾ, ತಾಲ್ಲೂಕು ಅಧ್ಯಕ್ಷ ಅಯೂಬ್ ಖಾನ್ ಹಾಗೂ ತಾಲ್ಲೂಕು ಯುವ ಅಧ್ಯಕ್ಷ ತಾಹೀರ್ ಉಪಸ್ಥಿತರಿದ್ದರು.

ದಾವಣಗೆರೆ: (ಇಂಡೋ ಟೈಮ್ಸ್ ಮೀಡಿಯಾ) ಅಖಿಲ ಭಾರತ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲಿಮೀನ್ (AIMIM) ದಾವಣಗೆರೆ ಶಾಖೆಯ ಪ್ರತಿನಿಧಿ ಮಂಡಳಿ, ಜಿಲ....

13/02/2025

ازقلم : محمد اعظم شاہد

پچھلے پندرہ مہینوںمیں اسرائیلی حملوں نے غزہ پٹی کو ملبہ میں تبدیل کرکے رکھ دیاہے۔ 19؍جنوری2025کو ہوئے عارضی جنگی معاہدے کے مطابق اگلے چھ ہفتوںکے دوران حماس بتدریج مرحلہ وار اسرائیلی یرغمال اور قیدیوںکو رہا کرے گا۔ جس کے بدلے میں اسرائیل ہر مرحلے میں سینکڑوں(سو سے زیادہ)فلسطینی یرغمال اور قیدی رہا کرے گا۔ابھی یہ سلسلہ چل ہی رہا تھا ،مگر اب پچھلے ہفتے سے ایسے حالات بن رہے ہیں جنہیں دیکھ کر یوں لگ رہا ہے کہ عارضی جنگ بندی معاہدہ کسی بھی وقت ٹوٹ سکتا ہے اور جنگ دوبارہ شروع ہوسکتی ہے۔ اور اس طرح قتل وغارت گری کا ماحول دوبارہ شروع ہوجائے گا،جس کے لیے اسرائیل امریکہ کی سرپرستی اور حمایت حاصل کرتے ہوئے حماس کے خلاف تیار کھڑا ہوا ہے۔

جیسے ہی عارضی جنگ بندی معاہدہ کانفاذ شروع ہوا ، اسرائیل نے سازشی رکاوٹیں پیداکرنے کا آغاز کردیا۔اس الزام پر کہ حماس جنگ بندی معاہدے کے تحت اسرائیلی یرغمالوں کی رہائی میں تاخیر کررہا ہے ۔ غزہ پٹی کے ایک پناہ گزیں علاقے پر اسرائیلی حملے کے نتیجے میں تقریباً اَسّی فلسطینی مارے گئے، جن میں بچے اور خواتین بھی شامل تھے۔ غزہ کی جانب لوٹ رہے فلسطینیوں کو راستے میں روکا گیا اور دھمکیاں دی جاتی رہیں۔ یہ سب جنگ بندی کے باقاعدہ اعلان کے بعد بے ایمانی سے ہوتا رہا۔ اپنے مکانوں کو ملبہ اور کھنڈرات میں تبدیل دیکھ کر واپس ہورہے غزہ کے فلسطینی خود کو محروم اور بے بس محسوس کررہے تھے کہ کیسے اور کس طرح دوبارہ کھنڈرات کا ملبہ صاف ہو اور تعمیرات شروع ہوںاور باز آبادکاری کا سلسلہ شروع ہو۔اپنے

مادر وطن میں ہر حال میںراکھ سے ازسر نواٹھ کر اپنی شناخت قائم کرنے پر عزم اہل غزہ سوچ ہی رہے تھے کہ امریکی صدر نے ایک نیا شوشہ چھوڑدیا۔ٹرمپ نے اہل غزہ کی مشکلات حل کرنے کے نام پر غزہ سے لگے پڑوسی ممالک مصر اور اردن کو مشورہ دیا کہ اپنے ممالک میں غزہ کے باشندوںکو سکونت فراہم کریں۔یعنی اہل غزہ کو ان کی اپنی زمین سے منتقل کرنے کی آواز دے کر ٹرمپ نے خطے میں ماحول کو بگاڑنے کی قصداً مذموم کوشش کی ہے۔ عرب ممالک کی تنظیم عرب لیگ نے ٹرمپ کے اس مشورہ کی مذمت کی اور اعادہ کیا کہ دوریاستی فارمولے پر عمل پیرا ہوکر غزہ کو دوبارہ بسانے کی جانب کوشش کرنی ہوگی۔ حالات نے پھر یہ رُخ موڑا کہ ٹرمپ نے’ غزہ منصوبہ‘غزا کا اعلان کردیا۔

اس حیرت ناک منصوبے کے مطابق ٹرمپ نے کہا ہے کہ اہل غزہ کو غزہ لوٹنے کی ضرورت ہی نہیں ہے، کیونکہ کھنڈرات میں تبدیل شدہ غزہ میں بازآبادکاری مشکل ترین مرحلہ ہے۔ اس منصوبے کی سعودی عرب،مصر،قطر،اُردن اور اب ترکی نے بھرپور مذمت کی ہے۔ کہاگیا ہے کہ کوئی بھی طاقت فلسطینیوںکو ان کی زمین اور وطن سے دستبردار اور محروم کرنہیں سکتی۔یہ عالمی بنیادی حق شہریت کی خلاف ورزی ہے۔ اسرائیلی وزیراعظم نیتن یاہو نے ٹرمپ کے منصوبے کا خیرمقدم کیاہے۔ واضح ہے کہ اسرائیل اور امریکہ غزہ کے وجود کے خاتمے کے درپے ہیں۔

ابھی دو دن قبل دس فروری کو ٹرمپ نے ایک بار پھر ہرزہ سرائی دہراتے ہوئے غزہ کو خریدنے اور اس کی ملکیت حاصل کرنے کا عزم جتاتے ہوئے اپنی بے شرمی اور بے عقلی کا ثبوت دیتے ہوئے کہا ہے کہ کسی بھی طرح حماس غزہ کی نگرانی کرنے سے محروم ہوجائے۔ ٹرمپ نے کہا ہے کہ وہ غزہ کو خریدنے اور مالک بننے کا عزم رکھتا ہے۔ گویا امریکہ ہی پوری دنیا کا ٹھیکیدار اور رکھوالاہے ،یہ جتاتے ہوئے ٹرمپ نے رحم دلی کااظہار ان معنوں میں کیاہے کہ اگر مشرق وسطیٰ کی دوسری ریاستیں غزہ پٹی کے کچھ حصوںکی تعمیر نو کا ارادہ رکھتی ہیں تو امریکہ کی سرپرستی میں وہ ایسا کچھ کرسکتے ہیں۔

مضحکہ خیز بیان دیکھئے ٹرمپ نے کہا ہے کہ حماس کبھی بھی غزہ میں قدم جمانہیں سکے گا۔اور غزہ کے لوگ واپس غزہ کو جاکر کیا کریںگے، کیونکہ وہاں کچھ بھی باقی نہیں ہے۔ سب کچھ ختم ہوچکا ہے۔ یہاں سب کچھ منہدم ہوچکا ہے اور جو کچھ بچ گیا ہے اس کو مسمار کردیاجاے گا۔ اس بیان پر سعودی عرب نے جرأتمندانہ بیان جاری کرتے ہوئے
کہا ہے کہ انتہاپسند قابض ذہنیت فلسطینی علاقائیت کا مطلب سمجھنے سے قاصر ہے۔ فلسطینی سرزمین فلسطین کے عوام کے لیے
جذباتی،تاریخی اور قانونی تعلق رکھتی ہے۔ امریکہ اور اسرائیل کی انتہاپسندسازشی ذہنیت اس حقیقت سے چشم پوشی کررہی ہے کہ فلسطینیوں کو اپنی زمین پر زندگی گزارنے کا بنیادی حق حاصل ہے۔ اسی تخریبی ذہنیت نے غزہ کے بیس لاکھ باشندوں کی زندگی اجاڑ کر رکھ دی ہے۔

اسی غاصبانہ ذہنیت پر سعودی عرب نے کھل کر مذمت کرتے ہوئے امریکہ سے کہا ہے کہ پندرہ مہینوں میں47ہزار اہل غزہ جن میں اکثریت بچوںاور خواتین کی تھی انہیں شہید کردیاگیا اور ایک لاکھ سے زائد افراد کو زخمی کیاہے۔ اپنی بیان بازی کے لیے مشہور ترکی کے صدر رجب طیب اردگان نے امریکی صدر ٹرمپ کے غزہ منصوبہ پر سخت ردعمل ظاہر کرتے ہوئے کہا ہے کہ کوئی بھی طاقت فلسطینیوں کو ان کے مادر وطن سے الگ نہیں کرسکتی۔ انہوںنے کہا ہے کہ غزہ پٹی، ویسٹ بینک اور مشرقی یروشلم فلسطینیوں کا ہے۔ ٹرمپ کا غزہ منصوبہ ہماری نظر میں بات چیت کے لائق ہی نہیں ہے۔

غزہ میں امن کے قیام سے پہلے ہی ایسے اشارے مل رہے ہیں کہ عارضی جنگی معاہدے کی 42ہفتوں کی میعاد سے پہلے ہی حالات بگڑ سکتے ہیں۔ اسرائیلی فوج نے اعادہ کیا ہے کہ وہ دوبارہ جنگ کے لیے پوری طرح تیار ہے۔ امریکی صدر ٹرمپ نے دو دن قبل حماس کو ایک اور دھمکی دے رکھی ہے کہ15؍فروری کو جنگی معاہدہ کا پہلا مرحلہ ختم ہونے سے پہلے تمام اسرائیلی یرغمالوں کو وہ رہا کردے۔ ورنہ جنگ بندی معاہدہ ختم ہوسکتا ہے۔ اور غزہ پر دوبارہ قہر ٹوٹ پڑسکتا ہے۔ حماس نے جنگی معاہدے کے مطابق اسرائیل کے ضوابط کا خیال رکھا لیکن حماس کے مطالبات پر اسرائیل سنجیدہ نہیں ہے اور وعدہ خلافی کررہاہے ۔خاکستر غزہ کے خاتمے کی سازشیں کیا رخ اختیار کرتی ہیں آنے والے دنوںمیںیہ واضح ہوجائے گا۔ہر اعتبار سے امریکہ کی من مانی انتہائی شرمناک ہے۔

[email protected] cell: 9986831777

ಇಂಡೋ ಟೈಮ್ಸ್ ಮೀಡಿಯಾ | ಹಲೀಮ್ ಮನ್ಸೂರ್ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್...
13/02/2025

ಇಂಡೋ ಟೈಮ್ಸ್ ಮೀಡಿಯಾ | ಹಲೀಮ್ ಮನ್ಸೂರ್

ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್ಯಾಂಶಗಳು:-

ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ.

ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ.

ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.

ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಮಾತ್ರ ಈ ಆಧ್ಯಾದೇಶ ಅನ್ವಯವಾಗುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಅಂದಾಜು ರೂ. 60,000 ಕೋಟಿ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ವಿವರವಾಗಿ ಇಲ್ಲವಾದರೂ ಅಂದಾಜು ರೂ. 40,000 ಕೋಟಿ ಸಾಲ ಪಡೆದಿರುವರು ಎಂದು ಅಂದಾಜಿಸಲಾಗಿದೆ.

ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ.

ಆಯಾ ಜಿಲ್ಲೆಗಳಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಸಲ್ಲಿಸಬೇಕು. ಸದರಿ ಮಾಹಿತಿಯನ್ನು ಸಲ್ಲಿಸದಿದ್ದಲ್ಲಿ, 6 ತಿಂಗಳ ಕಾರಾ ವಾಸದೊಂದಿಗೆ ಅಥವಾ ರೂ.10,000/- ಗಳಿಗೆ ವಿಸ್ತರಿಸಬಹುದಾದ ಜುಲ್ಮಾನೆ ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.

ವಿವಾದಗಳನ್ನು ಇತ್ಯರ್ಥ್ಯ ಪಡಿಸುವುದಕ್ಕಾಗಿ ಒಂಬುಡ್ಸ್ ಪರ್ಸನ್‌ಗಳನ್ನು ಸರ್ಕಾರವು ಅಧಿಸೂಚನೆಯ ಮೂಲಕ ನೇಮಕ ಮಾಡಬಹುದು.

ಬಲವಂತದ ವಸೂಲಿ ಕ್ರಮಗಳನ್ನು ವಿವರವಾಗಿ ತಿಳಿಸಲಾಗಿದೆ.

ಬಲವಂತದ ವಸೂಲಿ ಕ್ರಮಗಳನ್ನು ಕೈಗೊಂಡಲ್ಲಿ, ಯಾವುದೇ ವ್ಯಕ್ತಿಯೂ ವಿಚಾರಣೆಗೆ ಒಳಪಡುತ್ತಾನೆ ಮತ್ತು 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾವಾಸದ ಶಿಕ್ಷೆ ಹಾಗೂ ರೂ. 5 ಲಕ್ಷ ಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗುತ್ತಾನೆ. ಈ ಅಪರಾಧಗಳು ಸಂಜ್ಞೇಯ ಅಪರಾಧ/ ಜಾಮೀನು ರಹಿತ (Cognizable / Non Bailable) ಆಗಿರುತ್ತವೆ. ಯಾವುದೇ ಪೋಲೀಸ್‌ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳುವುದು ನಿರಾಕರಿಸಲಾಗುವುದಿಲ್ಲ.

ಪೋಲೀಸ್‌ ಉಪ ಅಧೀಕ್ಷಕರ (Dy SP) ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವತ: (Suo moto) ಪ್ರಕರಣವನ್ನು ದಾಖಲಿಸಬಹುದು.

ಸರ್ಕಾರವು ಕಾಲಕಾಲಕ್ಕೆ ಈ ಆಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.

ಈ ಆಧ್ಯಾದೇಶದಿಂದ ಭಾರತೀಯ ರಿಸರ್ವ್‌ ಬ್ಯಾಂಕ್‌, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.

ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ.

ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು. ಈ ಆದೇಶವು ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ನೊಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ. ನೊಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ ಕೋಟಿ ರೂ ಸಾಲ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

ಮೈಕ್ರೋಫೈನಾನ್ಸ್ ಸಂಸ್ಥೆಗಳು ತಾವು ವ್ಯವಹರಿಸುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಲ್ಲಿ ನೊಂದಣಿಯಾಗುವುದು ಕಡ್ಡಾಯವಾಗಿದೆ. ಈ ಸಂಸ್ಥೆಗಳು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ ಹಾಗೂ ಸುಸ್ತಿ ಸಾಲಗಳ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತ್ರೈ ಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ಸಲ್ಲಿಸದಿದ್ದರೆ 6 ತಿಂಗಳ ಕಾರಗೃಹವಾಸ ಅಥವಾ 10 ಸಾವರಿರೂ ವರೆಗೆ ದಂಡ ಅಥವಾ ಎರಡೂ ಶಿಕ್ಷೆಗೆ ಗುರಿಯಾಗುತ್ತಾರೆ.
ವಿವಾದಗಳನ್ನು ಇತ್ಯರ್ಥಗಳನ್ನು ಒಂಬುಡ್ಸ್‍ಮನ್‍ಗಳನ್ನು ಸರ್ಕಾರ ಅಧಿಸೂಚನೆ ಮೂಲಕ ನೇಮಕ ಮಾಡುವ ಅಧಿಕಾರ ಹೊಂದಿರುತ್ತದೆ.

ಇಂಡೋ ಟೈಮ್ಸ್ ಮೀಡಿಯಾ | ಹಲೀಮ್ ಮನ್ಸೂರ್

ದಾವಣಗೆರೆ: ಫೆ 13 (ಇಂಡೋ ಟೈಮ್ಸ್ ಮೀಡಿಯಾ | ಕ.ವಾ):ಸರ್ಕಾರದ ಯೋಜನೆಗಳಿಂದ ಬಡವರೂ ಸಹ ಬದುಕನ್ನು ಕಟ್ಟಿಕೊಂಡಿದ್ದು ಜೀತ ಪದ್ದತಿ ನಿರ್ಮೂಲನೆಗೂ ಸ...
13/02/2025

ದಾವಣಗೆರೆ: ಫೆ 13 (ಇಂಡೋ ಟೈಮ್ಸ್ ಮೀಡಿಯಾ | ಕ.ವಾ):
ಸರ್ಕಾರದ ಯೋಜನೆಗಳಿಂದ ಬಡವರೂ ಸಹ ಬದುಕನ್ನು ಕಟ್ಟಿಕೊಂಡಿದ್ದು ಜೀತ ಪದ್ದತಿ ನಿರ್ಮೂಲನೆಗೂ ಸಹಕಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ತಿಳಿಸಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಹಾಗೂ ಕರ್ನಾಟಕ ಮುಕ್ತಿ ಆಲಯನ್ಸ್ ಸಹಯೋಗದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ಜಾಗೃತಿ ಜಾಥಾ ಹಾಗೂ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದಿನ ದಿನಮಾನದಲ್ಲಿ ಶ್ರೀಮಂತರಿಂದ ಹಣ ಪಡೆದು ಹಣ ತೀರುವಳಿಗೆ ಕೆಲಸ ಮಾಡುವ ಪದ್ದತಿ ಇತ್ತು, ಅದರೆ ಈಗ ಕಾಲ ಬದಲಾಗಿದೆ. ಇದಕ್ಕೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಂದ ಬಡವರು ಉತ್ತಮ ಬದುಕನ್ನು ಕಟ್ಟಿಕೊಳ್ಳುವಂತಾಗಿದೆ. ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಗುರುತಿನ ಚೀಟಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಹ ಧನ, ಉಚಿತ ಆರೋಗ್ಯ ವಿಮೆ, ಮುಂತಾದ ಸೌಲಭ್ಯಗಳನ್ನು ಜನರು ಬಳಸಿಕೊಳ್ಳುವ ಮೂಲಕ ಇನ್ನೊಬ್ಬರ ಮೇಲೆ ಅವಲಂಬನೆಯಾಗದೇ ಕಾನೂನಿನ ಚೌಕಟ್ಟಿನಲ್ಲಿ ವಿವಿಧ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಸಂಪೂರ್ಣವಾಗಿ ಜೀತ ಪದ್ದತಿ ನಿರ್ಮೂಲನೆ ಮಾಡಬೇಕಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೀತ ಪದ್ದತಿ ಕಂಡು ಬಂದಿರುವುದಿಲ್ಲ. ಜೀತ ಕಾರ್ಮಿಕರು ಕಂಡು ಬಂದರೆ ಅವರಿಗೆ ವಸತಿ ಕಲ್ಪಿಸುವುದು, ಸ್ವ ಉದ್ಯೋಗಕ್ಕಾಗಿ ಕೌಶಲ್ಯ ತರಬೇತಿ, ವಿದ್ಯಾಭ್ಯಾಸ, ಉದ್ಯೋಗ ಹಾಗೂ ಬ್ಯಾಂಕ್‍ಗಳಲ್ಲಿ ಸಾಲ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಗ್ರಾಮ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಮೂಲಕ ಕಾರ್ಯಕ್ರಮಗಳ ಅನುಷ್ಟಾನ ಮಾಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಜೀತ ಪದ್ದತಿ ನಿರ್ಮೂಲನಾ ಸಮಿತಿ ರಚನೆ ಮಾಡಲಾಗಿದೆ, ಜಿಲ್ಲಾ ಮಟ್ಟದ ಸಮಿತಿಯಲ್ಲಿ ನ್ಯಾಯಾಧೀಶರು ಅಧ್ಯಕ್ಷರಾಗಿರುತ್ತಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಜೀತಪದ್ಧತಿ ಕುರಿತು ಬರುವ ದೂರುಗಳನ್ನು ಪರಿಶೀಲಿಸಿ ಅಗತ್ಯ ಕ್ರಮವನ್ನು ತೆಗೆದುಕೊಂಡು ಜಿಲ್ಲೆಯಲ್ಲಿ ಜೀತ ಪದ್ದತಿ ಸಂಪೂರ್ಣ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ವಕೀಲ ಸಂಘದ ಅಧ್ಯಕ್ಷರಾದ ಎಲ್.ಹೆಚ್ ಅರುಣಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಉಪವಿಭಾಗಾಧಿಕಾರಿ ಸಂತೋμï ಪಾಟೀಲ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಬಿ, ಯೋಜನಾ ನಿರ್ದೇಕರಾದ ರೇಷ್ಮ ಕೌಸರ್, ಮುಕ್ತಿ ಅಲಯನ್ಸ್ ಸಂಚಾಲಕರಾದ ಬೃಂದಾ ಅಡಿಗ, ಕ್ರೀಸ್ಟೋಫರ್ ಸ್ಪ್ಯಾನಿ, ರಾಜೇಂದ್ರನ್ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು

ದಾವಣಗೆರೆ: ಫೆ 13 (ಇಂಡೋ ಟೈಮ್ಸ್ ಮೀಡಿಯಾ | ಕ.ವಾ): ಸರ್ಕಾರದ ಯೋಜನೆಗಳಿಂದ ಬಡವರೂ ಸಹ ಬದುಕನ್ನು ಕಟ್ಟಿಕೊಂಡಿದ್ದು ಜೀತ ಪದ್ದತಿ ನಿರ್ಮೂಲನ...

ಬೆಂಗಳೂರು (ಇಂಡೋ ಟೈಮ್ಸ್ ಮೀಡಿಯಾ | ಹಲೀಮ್ ಮನ್ಸೂರ್)ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲ...
13/02/2025

ಬೆಂಗಳೂರು (ಇಂಡೋ ಟೈಮ್ಸ್ ಮೀಡಿಯಾ | ಹಲೀಮ್ ಮನ್ಸೂರ್)

ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.

ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ.ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ,ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ.ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

ಕಳೆದ ಜನವರಿ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕರ್ನಾಟಕ ವಲಯದ ಅಧ್ಯಕ್ಷರು, ಭಾರತೀಯ ರಿಸರ್ವ ಬ್ಯಾಂಕ್‌ (RBI) ನ ಪ್ರಾಂತೀಯ ನಿರ್ದೇಶಕರು, ಹಾಗೂ ಸಾ-ಧನ್(SA-DHAN),ಎಕೆಎಂಐ,ಎಂಎಫ್ಐಎನ್ ಮತ್ತು ಪ್ರಮುಖ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು , ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಂಚಾಲಕರು, ಅಧಿಕಾರಿಗಳು , ಪೊಲೀಸ್, ಕಂದಾಯ, ಸಹಕಾರ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಿ. ಕಿರುಕುಳವನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೆಶನ ನೀಡಿದ್ದಾರೆ.

ಕರ್ನಾಟಕದ ಅಧಿನಿಯಮಗಳು:

ಕರ್ನಾಟಕ ಲೇವಾದೇವಿದಾರರ ಅಧಿನಿಯಮ-1961
ಅಡಿಯಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.
ಈ ಅಧಿನಿಯಮದಡಿಯಲ್ಲಿ 2024ರ ಡಿಸೆಂಬರ್ 31 ರವರೆಗೆ 20,425 ಸಂಸ್ಥೆಗಳು ನೋಂದಣಿಯಾಗಿವೆ. ಅದರಲ್ಲಿ 6590 ಲೇವಾದೇವಿದಾರರು, 6772 ಪಾನ್‌ ಬ್ರೋಕರ್‌ಗಳು, 7063 ಹಣಕಾಸಿನ ಸಂಸ್ಥೆಗಳು (Finance Corporation) ಇವೆ.

ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- 2004 ಪ್ರಕಾರ ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16 ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ ನಿಗದಿಪಡಿಸಲಾಗಿದೆ.

ಇಂತಹ ಮಾಹಿತಿಗಳನ್ನು ಸಾರ್ವಜನಿಕವಾಗಿ ಫಲಕಗಳ ಮೂಲಕ ಪ್ರದರ್ಶಿದಲು ಸಂಸ್ಥೆಗಳು ಹಾಗೂ ಸಂಬಂಧಿಸಿದ ಕಚೇರಿಗಳಿಗೆ ತಿಳಿಸಲಾಗಿದೆ. ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಪ್ರಕ್ರಿಯೆಗಳಿಂದ ಸಾಲ ಮರುಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ.

ಸೂಕ್ಷ್ಮ ಹಣಕಾಸು (Micro finance) ಸಂಸ್ಥೆಗಳು ಎಂದರೇನು?:

3 ಲಕ್ಷ ರೂ.ವರೆಗೂ ಆದಾಯವಿರುವ ಸಾರ್ವಜನಿಕರಿಗೆ ಸಾಲವನ್ನು ಒದಗಿಸುವ ವ್ಯವಸ್ಥೆಯನ್ನು ಮೈಕ್ರೋ ಫೈನಾನ್ಸ್‌ ಎಂದು ಘೋಷಿಸಲಾಗಿದೆ. ಬ್ಯಾಂಕುಗಳಲ್ಲದ ಸಹಕಾರ ಸಂಘಗಳು, ಎನ್‌ಬಿಎಫ್‌ಸಿಗಳು, ಸರ್ಕಾರೇತರ ಸಂಸ್ಥೆಗಳು, ಟ್ರಸ್ಟ್‌ಗಳು, ಸಣ್ಣ ಅಂಗಡಿ ಮಾಲೀಕರು, ಇನ್ನಿತರರು ಸಾಲ ನೀಡುತ್ತಾರೆ.

ಸಹಕಾರಿ ಸಂಸ್ಥೆಗಳ ಮೇಲ್ವಿಚಾರಣೆಯನ್ನು ಸಹಕಾರ ಇಲಾಖೆ. ಬ್ಯಾಂಕ್‌ ಅಲ್ಲದ ಆರ್ಥಿಕ ಸಂಸ್ಥೆಗಳ (ಎನ್‌ಬಿಎಫ್‌ಸಿ) ಮೇಲ್ವಿಚಾರಣೆಯನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮೂಲಕ ನೋಂದಣಿ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾ-ಧನ್ (SA-Dhan) ಮತ್ತು ಮೈಕ್ರೋ ಫೈನಾನ್ಸ್ ಇಂಡಸ್ಟ್ರಿ ನೆಟ್‌ವರ್ಕ್ (MFIN) ಸಂಸ್ಥೆಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ಸ್ವಯಂ ನಿಯಂತ್ರಣಾ ಸಂಸ್ಥೆಗಳನ್ನಾಗಿ (self-regulatory organisation) ನೇಮಿಸಿದೆ.ನಿಗದಿತ ಉತ್ತಮ ಲೇವಾದೇವಿ ಪದ್ದತಿಗಳನ್ನು ಅನುಷ್ಠಾನಗೊಳಿಸಲು ಈ ಸಂಸ್ಥೆಗಳನ್ನು ರಚಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕೇವಲ 31 ಮೈಕ್ರೋ ಫೈನಾನ್ಸ್ ಇಂಡಸ್ಟ್ರಿಗಳು ಅಸ್ತಿತ್ವದಲ್ಲಿ ಇವೆ. ಈ 31 ಸಂಸ್ಥೆಗಳು ಅಸೋಸಿಯೇಷನ್ ಆಫ್ ಕರ್ನಾಟಕ ಮೈಕ್ರೋ ಫೈ‌ನಾನ್ಸ್ ಇನಸ್ಟಿಟ್ಯೂಷನ್ (AKMI) ಸದಸ್ಯತ್ವ ಪಡೆದಿವೆ. ರಾಜ್ಯದಲ್ಲಿ ಈ ಸಂಸ್ಥೆಗಳ 3090 ಶಾಖೆಗಳಿದ್ದು 37,967 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. 1,09,88,332 ಖಾತೆಗಳಲ್ಲಿ 59,367.76 ಕೋಟಿ ರೂ‌. ಬಾಕಿ ಉಳಿದಿದೆ.
ನಿಯಮಗಳನ್ನು ಪಾಲಿಸದ ಹಣಕಾಸು ಸಂಸ್ಥೆಗಳ ಬಗ್ಗೆ ಮೇಲ್ವಿಚಾರಣಾ ಸಂಸ್ಥೆಗಳ ಮೂಲಕ ಭಾರತೀಯ ರಿಸರ್ವ್‌ ಬ್ಯಾಂಕಿಗೆ ವರದಿ ನೀಡಲಾಗುತ್ತದೆ , ಆರ್‌ಬಿಐ ಒಪ್ಪಿಗೆಯೊಂದಿಗೆ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗುತ್ತದೆ.

ದಬ್ಬಾಳಿಕೆಯ ಸಾಲ ಮರುಪಾವತಿ ಕ್ರಮದಿಂದ ಸಂರಕ್ಷಿಸಲು ಅಧಿಕೃತವಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾರ್ಗಸೂಚಿಗಳು

ಎಲ್ಲಾ ಎನ್‌ಬಿಎಫ್‌ಸಿ-ಎಂಎಫ್‌ಐಗಳು ಬಡ್ಡಿಯ ದರ, ಮರುಪಾವತಿಯ ಕಂತು ಮತ್ತು ಅಸಲು ಸಾಲ ಮುಂತಾದವುಗಳ ಬಗ್ಗೆ ʼಫ್ಯಾಕ್ಟ್ ಶೀಟ್‌ನಲ್ಲಿ ಸಾಲ ವಿತರಣೆಯ ಸಮಯದಲ್ಲಿ ಪ್ರತಿಯೊಬ್ಬ ಸಾಲಗಾರನಿಗೆ ಮಾಹಿತಿ ಒದಗಿಸಬೇಕು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು
ಮೈಕ್ರೋ ಫೈನಾನ್ಸ್ ಇನ್‌ಸ್ಟಿಟ್ಯೂಷನ್ (ಎಂಎಫ್ಐ) , ಮನಿ ಲೆಂಡಿಂಗ್ ಏಜೆನ್ಸಿ ಅಥವಾ ಸಂಸ್ಥೆಯಿಂದ ನೀಡುವ ಎಲ್ಲಾ ಸಾಲಗಳ ಮಂಜೂರಾತಿ, ವಿತರಣೆಯ ಪ್ರಕ್ರಿಯೆಯಲ್ಲಿ ಈ ಅಂಶಗಳನ್ನು ಅನುಸರಿಸಬೇಕು:

ಸಾಲಗಾರನಿಗೆ ಸಾಲದ ನಿಯಮಗಳ ಬಗ್ಗೆ ಸ್ಥಳೀಯ ಭಾಷೆಯಲ್ಲಿ ಅಥವಾ ಆತನಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಬೇಕು

ಸಾಲದ ಅರ್ಜಿಯಲ್ಲಿ ಷರತ್ತುಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಬೇಕು.

ಯಾವ ದಾಖಲೆಗಳನ್ನು ನೀಡುವ ಅವಶ್ಯಕತೆ ಇದೆ ಎನ್ನುವ ಸೂಕ್ತ ಮಾಹಿತಿ ನೀಡಬೇಕು.

ನಗದು ಪುಸ್ತಕ, ಲೆಡ್ಜರ್ ಮತ್ತು ಇತರ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.

ಸಾಲ ನೀಡಿದ ದಿನಾಂಕದಿಂದ ಏಳು ದಿನಗಳ ಒಳಗೆ ಸಾಲಗಾರನಿಗೆ ನಿಗದಿತ ನಮೂನೆಯಲ್ಲಿ ಸಾಲದ ಮೊತ್ತ ,ನೀಡಿದ ದಿನಾಂಕ ಮತ್ತು ಅವಧಿಯ ಮುಕ್ತಾಯ, ಸಂಸ್ಥೆಯ ಕಾರ್ಯನಿರ್ವಾಹಕರ ಹೆಸರು ಮತ್ತು ವಿಳಾಸ, ನಿಯಮಾನುಸಾರ ವಿಧಿಸಲಾಗುವ ಬಡ್ಡಿದರ ಸ್ಪಷ್ಟವಾಗಿರುವ ಲಿಖಿತ ದಾಖಲೆಯನ್ನು ತಲುಪಿಸಬೇಕು.

ಸಾಲಗಾರನು ಮಾಡುವ ಪಾವತಿಗೆ ಪ್ರತಿಯಾಗಿ ಸಹಿ ಮಾಡಿದ ರಶೀದಿ ನೀಡಬೇಕು.

ಸಾಲಗಾರನ ಲಿಖಿತ ಬೇಡಿಕೆಯ ಮೇರೆಗೆ ಸಾಲಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯ ನಕಲನ್ನು ನೀಡಬೇಕು.

ಸಾಲಗಾರರಿಂದ ಪಡೆದ ಭದ್ರತೆಯನ್ನು ಸ್ಪಷ್ಟವಾಗಿ ತಿಳಿಸಬೇಕು

ಜನಸಾಮಾನ್ಯರು ಈ ವಿಧಾನಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು. ತಮ್ಮ ಅಧಿಕೃತ ಹಕ್ಕುಗಳು,ಬಾಧ್ಯತೆಗಳ ಬಗ್ಗೆ ಖಚಿತ ಪಡಿಸಿಕೊಂಡ ನಂತರ ಸಾಲ ತೆಗೆದುಕೊಳ್ಳಬೇಕು.

ಸ್ವಸಹಾಯ ಗುಂಪುಗಳಲ್ಲಿ ಸಾಲ

ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಹಲವು ಕಡೆ ಬಳಕೆ ಸಾಲವನ್ನು (Consumption Loan) ಪಡೆಯುವ ವ್ಯವಸ್ಥೆ ಇದೆ. ಇವುಗಳಲ್ಲಿ ಶೇ. 99 ರಷ್ಟು ಯಶಸ್ವಿಯಾಗಿ ಮರುಪಾವತಿ ಕೂಡ ಆಗುತ್ತವೆ. ಬ್ಯಾಂಕುಗಳಲ್ಲಿ ಇರುವಂತೆ ದಾಖಲಾತಿ ಒದಗಿಸುವ, ಜಾಮೀನು ನೀಡುವ ಹಾಗೂ ತಮ್ಮ ಆಸ್ತಿಗಳ ಅಡಮಾನ ಮಾಡುವ ಕ್ಲಿಷ್ಟ ವಿಧಾನ ಇಲ್ಲಿರುವುದಿಲ್ಲ. ಸರಳ ವಿಧಾನ ಅನುಸರಿಸಿ ಸಾಲ ಸಿಗುವುದರಿಂದ ಜನರು ಇಂತಹ ವ್ಯವಸ್ಥೆಗಳಿಗೆ ಹೆಚ್ಚಾಗಿ ಮೊರೆ ಹೋಗುತ್ತಾರೆ.

ಸಹಾಯವಾಣಿ

ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಿಗೆ
ದೂರು ನೀಡಬಹುದು. ಸೂಕ್ಷ್ಮ ಹಣಕಾಸು ಸಂಸ್ಥೆ (MFI) ,ಮನಿ ಲೆಂಡಿಂಗ್ ಸಂಸ್ಥೆಗಳ ನಿಯಮ ಉಲ್ಲಂಘನೆಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್‌ (RBI) ಸಹಾಯವಾಣಿ ಸಂಖ್ಯೆ 14448 ಗೆ ಮಾಹಿತಿ ನೀಡಬಹುದು.
ರಾಜ್ಯ ಸರ್ಕಾರವು ಮೈಕ್ರೋ ಫೈನಾನ್ಸ್‌ ಸಾಲಗಾರರಿಗೆ ಎಲ್ಲ ರೀತಿಯ ಕಾನೂನು ರಕ್ಷಣೆ ನೀಡಲು ಕ್ರಮವಹಿಸಿದೆ ನೊಂದ ವ್ಯಕ್ತಿಗಳು ರಾಜ್ಯದ ಏಕೀಕೃತ ಸಹಾಯವಾಣಿ ಸಂಖ್ಯೆ: 112 ಅಥವಾ 1902 ಸಂಪರ್ಕಿಸಬಹುದು.

ಡಾ.ಶಾಲಿನಿ ರಜನೀಶ್
ಮುಖ್ಯ ಕಾರ್ಯದರ್ಶಿಗಳು,ಕರ್ನಾಟಕ ಸರ್ಕಾರ

ಬೆಂಗಳೂರು (ಇಂಡೋ ಟೈಮ್ಸ್ ಮೀಡಿಯಾ | ಹಲೀಮ್ ಮನ್ಸೂರ್)

ದಾವಣಗೆರೆ: ಫೆ.7 (ತಾರಿಕ್ ನಕಾಶ್ | ಇಂಡೋ ಟೈಮ್ಸ್ ಮೀಡಿಯಾ)ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ...
07/02/2025

ದಾವಣಗೆರೆ: ಫೆ.7 (ತಾರಿಕ್ ನಕಾಶ್ | ಇಂಡೋ ಟೈಮ್ಸ್ ಮೀಡಿಯಾ)
ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಬಜೆಟ್‍ನಲ್ಲಿ ಅನುಮೋದನೆ ನೀಡಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಅವರು ಶುಕ್ರವಾರ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಸರ್ಕಾರದ ಅನುದಾನ ಸೇರಿ ರೂ.3.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿ 76 ಸಾವಿರದಷ್ಟು ಶಾಲೆಗಳಿದ್ದು 1.08 ಕೋಟಿ ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದು ಒಟ್ಟು ನೌಕರರಲ್ಲಿ ಶೇ 37 ರಷ್ಟು ಸಿಬ್ಬಂದಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 57 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕೊರತೆಯೂ ಇದ್ದು ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಜೊತೆಗೆ ದಾನಿಗಳಿಂದ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಮ್ಮ ಶಾಲೆ, ನಮ್ಮ ಜವಾಬ್ದಾರಿ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ ಎಂದರು.

ಪೌಷ್ಟಿಕತೆ ಹೆಚ್ಚಿಸಲು ಪ್ರತಿನಿತ್ಯ ಮೊಟ್ಟೆ; ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರತಿನಿತ್ಯ ಮೊಟ್ಟೆ ನೀಡಲಾಗುತ್ತಿದೆ. ಇದರಲ್ಲಿ ಆಜೀಂ ಪ್ರೇಂಜೀ ಪೌಂಢೇಷನ್‍ನಿಂದ ನಾಲ್ಕು ದಿನ, ಸರ್ಕಾರದಿಂದ 2 ದಿನ ಮೊಟ್ಟೆ ನೀಡಲಾಗುತ್ತಿದ್ದು ಸ್ಥಳೀಯವಾಗಿ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತಿದೆ.

ಎಲ್ಲ ದಿನವೂ ಮೊಟ್ಟೆ ನೀಡಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟ ಅವರು ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಮತ್ತು ಪೋಷಕರೊಂದಿಗೆ ಮಕ್ಕಳನ್ನು ಕರೆದುಕೊಂಡು ಹೋಗದೆ ಶಾಲೆಗೆ ಕಳುಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಪ್ರತಿ ದಿನದ ಹಾಜರಾತಿಗೆ ರೂ.1 ರಂತೆ ಮಕ್ಕಳಿಗೆ ನೀಡಲಾಗುತ್ತಿತ್ತು, ನಂತರ ಮಧ್ಯಾಹ್ನ ಊಟ ನೀಡುತ್ತಾ ಬಂದು ಈಗ ಹಾಲು, ಮೊಟ್ಟೆಯನ್ನು ನೀಡಲಾಗುತ್ತಿದೆ. ಭವಿಷ್ಯದ ಪ್ರಜೆಗಳಾಗುವ ಮಕ್ಕಳು ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆದು ದೇಶದ ಆಸ್ತಿಯಾಗಬೇಕು ಮತ್ತು ಸಂವಿಧಾನ ಉಳಿಯಲು ಎಲ್ಲರೂ ಶಿಕ್ಷಣವಂತರಾಗಬೇಕೆಂದರು.

ಗ್ರಂಥಾಲಯಗಳಿಗೆ ಮಹತ್ವ; ಶಾಲೆಗಳಿಗೆ ನೀಡುವ ಮಹತ್ವವನ್ನು ಗ್ರಂಥಾಲಯಗಳಿಗೆ ನೀಡುವ ಅವಶ್ಯಕತೆ ಇದೆ. ಜಗಳೂರು ಪಟ್ಟಣದಲ್ಲಿ ಮುಖ್ಯಗ್ರಂಥಾಲಯವನ್ನು ಬಹಳ ಸುಸಜ್ಜಿತವಾಗಿ ನಿರ್ಮಾಣ ಮಾಡಿ ನಡೆಸಲಾಗುತ್ತಿದೆ.

ಗ್ರಂಥಾಲಯಗಳು ಶಿಕ್ಷಕ ರಹಿತವಾದ ವಿಶ್ವವಿದ್ಯಾನಿಲಯಗಳಿದ್ದಂತೆ, ಗ್ರಂಥಾಲಯಗಳಲ್ಲಿ ಅಧ್ಯಯನ ಮಾಡಿದ ಅನೇಕರು ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಓದುಗರನ್ನು ಸಂದರ್ಶಿಸಿದಾಗ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಆಯ್ಕೆಯಾಗಿದ್ದು ಕೆಎಎಸ್ ಅಧಿಕಾರಿಯಾಗುವ ಆಸೆ ಇದ್ದು ಮುಂದಿನ ದಿನಗಳಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಈಗಿನಿಂದಲೇ ತಯಾರಿ ನಡೆಸುತ್ತಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಇದೇ ಮಾದರಿಯಲ್ಲಿ ರಾಜ್ಯಾದ್ಯಂತ ಗ್ರಂಥಾಲಯಗಳನ್ನು ಅಭಿವೃದ್ದಿ ಮಾಡುವ ಗುರು ಹೊಂದಲಾಗಿದೆ ಎಂದರು.

8 ನೇ ತರಗತಿವರೆಗೆ ವಿಸ್ತರಣೆ; ಹುಚ್ಚಂಗಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ ಮಾತ್ರ ಇದ್ದು ಇದನ್ನು 8 ನೇ ತರಗತಿಯವರೆಗೆ 2025-26 ಶೈಕ್ಷಣಿಕ ವರ್ಷದಿಂದಲೇ ವಿಸ್ತರಣೆ ಮಾಡಲು ಆದೇಶಿಸಲಾಗಿದೆ. 9-10 ನೇ ತರಗತಿಯನ್ನು ಇಲ್ಲಿಯೇ ಮುಂದುವರೆಗೆಸಲು ಮಕ್ಕಳ ಸಂಖ್ಯೆಯನ್ನಾಧರಿಸಿ ಮುಂದಿನ ನಿರ್ಧಾರವನ್ನು ಇಲಾಖೆ ಕೈಗೊಳ್ಳಲಿದೆ, ಶಾಲೆಯ ಅಭಿವೃದ್ದಿಗೆ ರೂ.25 ಲಕ್ಷಗಳನ್ನು ಕೇಳಿದ್ದು ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಜಗಳೂರು ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೆಂದ್ರಪ್ಪ ಮಾತನಾಡಿ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವರು ತಮ್ಮ ಅನುದಾನದಲ್ಲಿ ಹುಟ್ಟೂರಿನ ಶಾಲೆ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಇದೇ ಮಾದರಿಯಲ್ಲಿ ಚಿಮ್ಮನಕಟ್ಟೆಯಲ್ಲಿಯು ಹೈಟೆಕ್ ಶಾಲೆ ನಿರ್ಮಾಣ ಮಾಡಲಾಗುತ್ತದೆ.

ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ನದಿ ನೀರನ್ನು ಕುಡಿಯುವ ಉದ್ದೇಶಕ್ಕೆ ಸರಬರಾಜು ಮಾಡಲು ಉದ್ದೇಶಿಸಿದ್ದು ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿದೆ. ಜಗಳೂರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜು ಬಹು ದಿನಗಳ ಬೇಡಿಕೆಯಾಗಿದ್ದು ಆರಂಭಿಸಲು ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.

ವಿಧಾನಪರಿಷತ್ತಿನ ಸದಸ್ಯರಾದ ರವಿಕುಮಾರ್ ಎನ್ ಪ್ರಾಸ್ತಾವಿಕವಾಗಿ ಮಾತನಾಡಿ ಈ ಶಾಲೆಯಲ್ಲಿ ನಾನು ಓದಿದ್ದು ನಮ್ಮ ತಾಯಿಯ ಆಸೆಯಂತೆ ನಮ್ಮೂರಿಗೆ ಶಾಲಾ ಕಟ್ಟಡ ನಿರ್ಮಿಸಲು ಶ್ರಮಿಸಿದ್ದೇನೆ. ಈ ಹಿಂದೆ ನಾಲ್ಕನೇ ತರಗತಿವರೆಗೆ ಮಾತ್ರ ಇದ್ದು ಈಗ 7 ನೇ ತರಗತಿವರಗೆ ಇದೆ. ಇಲ್ಲಿನ ಜನರು ಶ್ರಮ ಜೀವಿಗಳಾಗಿದ್ದು ಕೆಲಸಕ್ಕಾಗಿ ವಲಸ ಹೋಗುತ್ತಾರೆ.

ಆದ್ದರಿಂದ ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಸ್ಮಾರ್ಟ್ ಕ್ಲಾಸ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಶಾಲೆಯಲ್ಲಿ ಕಲ್ಪಿಸಿದ್ದು ಇದಕ್ಕೆ ರಾಜ್ಯಸಭಾ ಸದಸ್ಯರ ಅನುದಾನ ಮತ್ತು ವಿಧಾನ ಪರಿಷತ್‍ರ ನಿಧಿಯಲ್ಲಿ 2.5 ಕೋಟಿ ನೀಡಲಾಗಿದೆ, ಒಟ್ಟು ರೂ.3.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಶಾಲೆ ನಿರ್ಮಿಸಿದ್ದು ಕಂಪ್ಯೂಟರ್ ಸೇರಿದಂತೆ ಇತರೆ ಉದ್ದೇಶಗಳಿಗಾಗಿ ಇಲಾಖೆಯಿಂದ ರೂ.25 ಲಕ್ಷ ಅನುದಾನ ಬಿಡುಗಡೆ ಮಾಡಬೇಕೆಂದರು.

ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ ಎಂ ಮಾತನಾಡಿ ಗ್ರಾಮದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಹಾಕಬಾರದು ಎಂದರು.

ವಿಧಾನ ಪರಿಷತ್ ಸದಸ್ಯರಾದ ಪ್ರೊ;ಎಸ್.ವಿ. ಸಂಕನೂರು, ಕೆ.ಎಸ್. ನವೀನ್, ಚಿದಾನಂದಗೌಡ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಮಾಜಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ದಿದ್ದಿಗಿ ಗ್ರಾ.ಪಂ ಅಧ್ಯಕ್ಷರಾದ ಗುತ್ಯಮ್ಮ ಸಿದ್ದಪ್ಪ, ಎಸ್‍ಡಿಎಂಸಿ ಅಧ್ಯಕ್ಷ ಪಿ.ಟಿ.ರಮೇಶ, ದಾನಿಗಳಾದ ಸ್ಪೇಸ್ ಮ್ಯಾನೇಜ್‍ಮೆಂಟ್ ಸಲ್ಯೂಷನ್ ಲಿಮಿಟೆಡ್ ಡಾ.ದಿನೇಶ್, ವೋಲ್ಲೋ ಗ್ರೂಪ್ ಜಿ.ವಿ.ರಾವ್, ಜಿ.ಪಂ.ಉಪಕಾರ್ಯದರ್ಶಿ ಕೃಷ್ಣನಾಯ್ಕ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ದಾವಣಗೆರೆ: ಫೆ.7 (ತಾರಿಕ್ ನಕಾಶ್ | ಇಂಡೋ ಟೈಮ್ಸ್ ಮೀಡಿಯಾ)ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸ....

ದಾವಣಗೆರೆ, ಫೆಬ್ರವರಿ.06 ( ತಾರಿಕ್ ನಕಾಶ್ | ಕ. ವಾ)ದಾವಣಗೆರೆ ಜಿಲ್ಲೆಯಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಿದ್ದು ಸಾರ್ವಜನಿಕರು ಹಾಗೂ ಅಧಿಕಾ...
06/02/2025

ದಾವಣಗೆರೆ, ಫೆಬ್ರವರಿ.06 ( ತಾರಿಕ್ ನಕಾಶ್ | ಕ. ವಾ)
ದಾವಣಗೆರೆ ಜಿಲ್ಲೆಯಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಿದ್ದು ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕುವುದು ಕಂಡು ಬಂದಿದ್ದು ಇದಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರಕರ್ತರ ಸಮೂಹ ಹಾಗೂ ಜಿಲ್ಲಾ ವರದಿಗಾರರ ಕೂಟ ಒತ್ತಾಯಿಸಿದೆ.

ಪತ್ರಕರ್ತರೆಂದು ಹೇಳಿಕೊಂಡು ಬೆದರಿಕೆ ಹಾಕುವುದು ಮತ್ತು ಇತರೆ ಉದ್ದೇಶಕ್ಕೆ ಒತ್ತಾಯಿಸುವುದು ಕಂಡು ಬಂದಲ್ಲಿ ತಕ್ಷಣ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಅಥವಾ ವಾರ್ತಾ ಇಲಾಖೆಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.

ಉಪಗ್ರಹ ಆಧಾರಿತ ವಿದ್ಯುನ್ಮಾನ ಸುದ್ದಿವಾಹಿನಿಗಳಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದಲ್ಲಿ ಮತ್ತು ಮುದ್ರಣ ಮಾಧ್ಯಮ ಆರ್.ಎನ್.ಐ.ಅನ್ವಯ ನಿಯಮಬದ್ದವಾಗಿ ಹಾಗೂ ಕ್ರಮಬದ್ದವಾಗಿ ಪ್ರಸಾರ ಹೊಂದಿರುವ ಪತ್ರಿಕೆಯ ಸಂಪಾದಕರು,
ವರದಿಗಾರರನ್ನು ಮಾಧ್ಯಮ ಪ್ರತಿನಿಧಿಗಳೆಂದು ಗುರುತಿಸಲಾಗುತ್ತದೆ.

ಆದರೆ ಸೋಷಿಯಲ್ ಮೀಡಿಯಾವನ್ನು ಅಂದರೆ ಯೂಟ್ಯೂಬ್‍ನ್ನು ಮಾಧ್ಯಮ ಪ್ರತಿನಿಧಿ ಎಂದು ಕರೆಯಲಾಗುವುದಿಲ್ಲ. ಕೆಲವು ವ್ಯಕ್ತಿಗಳು ಜಿಲ್ಲಾಧಿಕಾರಿಗಳ ಹೆಸರು ಮತ್ತು ಪತ್ರಕರ್ತರ ಸಂಘಟನೆಗಳ ಹೆಸರನ್ನೇಳಿ ಬೇಡಿಕೆಗಳನ್ನಿಡುತ್ತಿದ್ದಾರೆ, ಇದಕ್ಕೆ ಕಡಿವಾಣ ಹಾಕಬೇಕೆಂದು ಕಾರ್ಯನಿರತ ಪತ್ರಕರ್ತರ ಒತ್ತಾಯವಾಗಿದ್ದು ಇಂತಹ ನಕಲಿ ಪತ್ರಕರ್ತರು ಕಂಡುಬಂದಲ್ಲಿ ಮಾಹಿತಿ ನೀಡಲು ಕೋರಲಾಗಿದೆ.

ದಾವಣಗೆರೆ, ಫೆಬ್ರವರಿ.06 ( ತಾರಿಕ್ ನಕಾಶ್ | ಕ. ವಾ)ದಾವಣಗೆರೆ ಜಿಲ್ಲೆಯಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಿದ್ದು ಸಾರ್ವಜನಿಕರು ಹಾಗೂ ....

30/01/2025

ದಾವಣಗೆರೆ ಜ.30 (ತಾರಿಕ್ ನಕಾಶ್ | ಇಂಡೋ ಟೈಮ್ಸ್ ಮೀಡಿಯಾ) ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.
ಗುರುವಾರ (ಜ.30) ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಿರುಹಣಕಾಸು ಸಂಸ್ಥೆಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಾಲ ವಿತರಣೆ ಮತ್ತು ಮರುಪಾವತಿ ಪ್ರಕ್ರಿಯೆಗಳಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ಸಲಹೆ ಮತ್ತು ಸೂಚನೆಗಳ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

ಮೈಕ್ರೋ ಫೈನಾನ್ಸ್ ಕಂಪನಿಗಳು ನ್ಯಾಯಬದ್ಧವಾಗಿ ವ್ಯವಹರಿಸಲಿ, ಆದರೆ ಕಿರುಕುಳ ಮರುಕಳಿಸಿದರೆ ಸ್ವಯಂ ಹಿತಾಸಕ್ತಿಯಿಂದ ಎಫ್‌ಐಆರ್ ದಾಖಲಿಸುವಂತೆ ತಿಳಿಸಿದರು. ಸಾಲವನ್ನು ನೀಡುವಾಗ ಸಾಲ ಪಡೆಯುವ ವ್ಯಕ್ತಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯವನ್ನು ಪರಿಗಣಿಸಬೇಕು. ಮಾಸಿಕ ಒಟ್ಟು ಆದಾಯದ ಶೇ 50 ರಷ್ಟು ಮೊತ್ತವನ್ನು ಮಾತ್ರ ಸಾಲ ಮರುಪಾವತಿ ಸಾಮರ್ಥ್ಯ ಎಂದು ಪರಿಗಣಿಸಬೇಕು.

ವ್ಯಕ್ತಿಯು ಬೇರೆಯ ಮೂಲಗಳಿಂದ ಈಗಾಗಲೇ ಪಡೆದಿರುವ ಸಾಲದ ಮರುಪಾವತಿ ಕಂತಿನ ಮೊತ್ತವು. ಆದಾಯದ ಮೂಲಕ್ಕಿಂತ ಶೇ. 50 ರಷ್ಟು ಮೀರುತ್ತಿದ್ದರೆ, ಅಂತಹ ವ್ಯಕ್ತಿಗೆ ಸಾಲ ನೀಡುವಂತಿಲ್ಲ. ಒಂದೊಮ್ಮೆ ನೀಡದರೆ, ಅದು ಮೈಕ್ರೋ ಪೈನಾನ್ಸ್ ಕಂಪನಿ ಕಡೆಯಿಂದ ಆದ ಲೋಪ ಎಂದು ಹೇಳಲಾಗುವುದು. ಜನರಿಗೆ ಅವರ ಅಗತ್ಯಕ್ಕಿಂತ ಹೆಚ್ಚಾಗಿ ಸಾಲವನ್ನು ನೀಡುತ್ತಿದ್ದಾರೆ. ಸಾಲ ಮರುಪಾವತಿಲು ನಿಮ್ಮ ಚೌಕಟ್ಟುನ್ನು ಮೀರಿ ಅವರಿಗೆ ತೊಂದರೆ ನೀಡುತ್ತಿದ್ದಿರಿ. ಇದರ ಬಗ್ಗೆ ಪ್ರಕರಣ ದಾಖಲು ಮಾಡಲಾಗುವುದು.

ಗ್ರಾಮೀಣ ಭಾಗದ ಜನರಿಗೆ ಸಾಲದ ಅವಶ್ಯಕತೆ ತುಂಬಾ ಇರುವುದರಿಂದ ಆರ್.ಬಿ.ಐ ನಿಯಮಾನುಸಾರ ಸಾಲ ನೀಡಿ, ಅವರ ಅಗತ್ಯಕ್ಕೆ ತಕ್ಕಂತೆ ಸಾಲ ನೀಡಬೇಕು ಎಂದರು.

ಸಾರ್ವಜನಿಕರಿಗೆ ನಿಮ್ಮ ಪೈನಾನ್ಸ್ ಕಂಪನಿಯ ಬಡ್ಡಿ ಎಷ್ಟು ಅಂತ ತಿಳಿಸಿ, ಮೈಕ್ರೋ ಫೈನಾನ್ಸ್ 2 ಲಕ್ಷ ರೂ ವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ನೀಡುವ ಸಂಧರ್ಭದಲ್ಲಿ ಅರ್ಜಿ ಹಾಗೂ ಷರತ್ತುಗಳು ಕನ್ನಡದಲ್ಲಿರಬೇಕು.

ಸಾಲ ಮತ್ತು ಬಾಕಿ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದ ವ್ಯಕ್ತಿಯ ಕುಟುಂಬದ ಯಾವ ವ್ಯಕ್ತಿಗಳನ್ನು ಕೆವೈಸಿ ಕೇಳುವಂತಿಲ್ಲ. ಬಾಕಿ ಪಾವತಿ ಮಾಡಿ ಎಂದು ಒತ್ತಾಯಿಸುವಂತಿಲ್ಲ. ಅತ್ಯಂತ ಕಡಿಮೆ ಮೊತ್ತದ ಸಾಲವಾದರೂ ವಿಮೆ ಮಾಡಿಸಬೇಕು. ಸಾಲ ಪಡೆದ ವ್ಯಕ್ತಿಯು ಮೃತಪಟ್ಟಲ್ಲಿ ವಿಮೆಯ ಮೂಲಕ ಸಾಲದ ಮೊತ್ತವನ್ನು ಪಡೆಯಬೇಕು. ಬಡ್ಡಿ ದರ ಗರಿಷ್ಠ ಶೇ. 18 ರಷ್ಟು ಮಾತ್ರ, ಇದಕ್ಕಿಂತ ಹೆಚ್ಚಿನ ಬಡ್ಡಿದರ ವಸೂಲಿ ಮಾಡುವಂತಿಲ್ಲ.

ವಸೂಲಿ ಸಿಬ್ಬಂದಿ ಬೆದರಿಕೆ ಹಾಕಬಾರದು, ಬೈಗುಳ-ಅವಾಚ್ಯ ಶಬ್ದಗಳ ಬಳಕೆ ಮಾಡಬಾರದು. ಸಾಲ ಪಡೆದವರಿಗೆ ಪದೇ ಪದೇ ಕರೆ ಮಾಡಬಾರದು. ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ಒಳಗೆ ಮಾತ್ರ ಕರೆ ಮಾಡಬೇಕು. ಸಾಲ ಪಡೆದ ವ್ಯಕ್ತಿಯ ಕುಟುಂಬದವರು, ಸಂಬಂಧಿಕರು, ಸ್ನೇಹಿತರು ಮತ್ತು ಸಹದ್ಯೋಗಿಗಳಿಗೆ ಕರೆ ಮಾಡುವಂತಿಲ್ಲ. ಸಾಲ ಪಡೆದವರ ಹೆಸರು ಮತ್ತು ವಿವರಗಳನ್ನು ಯಾವುದೇ ಕಾರಣಕ್ಕೂ ಸಾರ್ವಜನಿಕವಾಗಿ ಪ್ರದರ್ಶಿಸುವಂತಿಲ್ಲ. ಸಾಲ ಪಡೆದ ಕುಟುಂಬದವರ ಮೇಲೆ ಹಲ್ಲೆ ನಡೆಸುವಂತಿಲ್ಲ. ಯಾವುದೇ ರೀತಿಯ ಕಿರುಕುಳ ನೀಡುವಂತಿಲ್ಲ. ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಕೃತ್ಯವನ್ನು ಎಸಗುವಂತಿಲ್ಲ. ಸಾಲ ಪಡೆದವರ ಆಸ್ತಿ-ಸ್ವತ್ತುಗಳಿಗೆ ಹಾನಿ ಮಾಡುವಂತಿಲ್ಲ.

ಬಾಕಿ ಪಾವತಿ ಮಾಡದೇ ಇದ್ದಾಗ ಎದುರಾಗಬಹುದಾದ ಪರಿಸ್ಥಿತಿಯ ಬಗ್ಗೆ ಸುಳ್ಳು ಮಾಹಿತಿ ನೀಡಬಾರದು. ತಡವಾಗಿ ಕಂತು ಪಾವತಿಸಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಬಡ್ಡಿ ಹಾಕುವಂತಿಲ್ಲ. ಸಾಲ ವಸೂಲಿಗೆ ರೌಡಿಗಳನ್ನು ಬಿಟ್ಟು ದಬ್ಬಾಳಿಕೆ ಮಾಡುವಂತಿಲ್ಲ. ಆರ್.ಬಿ.ಐ ನಿಯಾಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು. ಫೆನಾನ್ಸ್ ಕಂಪನಿಯವರು ಯಾವುದೇ ಕಾರಣಕ್ಕೂ ಆಧಾರ್ ಕಾರ್ಡ್ ತೆಗೆದುಕೊಳ್ಳಬಾರದು. ಪಾನ್ ಬ್ರೋಕರ‍್ಸ್ ತಮ್ಮ ಅಂಗಡಿಗಳ ಮುಂದೆ ಸಿಸಿಟಿವಿ ಹಾಕಿಸಿ ನಿಮ್ಮಿಂದಲೂ ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜಗಳೂರು, ಮಾಯಕೊಂಡ, ಹೊನ್ನಾಳಿಯಿಂದ ಸಾಕಷ್ಟು ದೂರುಗಳು ಬಂದಿರುತ್ತವೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿರುತ್ತದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತಾನಾಡಿ, ರಾಜ್ಯದೆಲ್ಲೆಡೆ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿಮೀರಿದೆ. ಸಾಕಷ್ಟು ಜನ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ರೈತರು, ಕಾರ್ಮಿಕರು ಚಿಕ್ಕ ಅತಿ ಚಿಕ್ಕ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು ಸಾಲ ತೆಗೆದುಕೊಂಡಿದ್ದಾರೆ. ಕಿರುಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಸಾಲ ವಿತರಣೆ ಮತ್ತು ಮರಪಾವತಿಯಲ್ಲಿ ಗ್ರಾಹಕರನ್ನು ಹಾಗೂ ಸಿಬ್ಬಂದಿಗಳನ್ನು ಗೌರವದಿಂದ ನೋಡಿಕೊಳ್ಳುವುದು. ಕಂತು ಕಟ್ಟಲು ತಪ್ಪಿದ ಗ್ರಾಹಕರೊಂದಿಗೆ ವ್ಯವಹರಿಸಲು ಆರ್.ಬಿ.ಐ ನಿರ್ದೇಶಗಳನ್ನು ಪಾಲಿಸುವುದು,

ಗ್ರಾಹಕ ಸ್ನೇಹಿ ಮತ್ತು ನ್ಯಾಯಸಮ್ಮತವಾಗಿರಬೇಕು. ನೀವು ಸೂಕ್ತವಲ್ಲದ ಸಮಯದಲ್ಲಿ ಗ್ರಾಹಕರನ್ನು ಸಂಪರ್ಕ ಮಾಡುವುದಾಗಲಿ ಅಥವಾ ಸಾಲ ವಸೂಲಾತಿ ಮಾಡಬಾರದು. ಅವರ ಮನೆಯಲ್ಲಿ ಮೃತ್ಯು ಸಂಭವಿಸಿದಾಗ, ಅನಾರೋಗ್ಯದ ಸಂದರ್ಭದಲ್ಲಿ ಸಾಲ ಮಸೂಲಾತಿ ಮಾಡಬಾರದು. ಪ್ರತಿಯೊಂದು ಕಿರುಹಣಕಾಸು ಸಂಸ್ಥೆಯೂ ಸಾಲಗಾರರೊಂದಿಗೆ ಸಂವಹನ ಮಾರ್ಗದರ್ಶನ ನೀಡಬೇಕೆಂದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಿದ್ದಾರ್ಥ ಆಚಾರ್ಯ, ಡಿವೈಎಸ್‌ಪಿ ಬಸವರಾಜ, ಚನ್ನಗಿರಿ ಉಪವಿಭಾಗದ ಎಎಸ್ಪಿ ಶ್ಯಾಮ ಉಪಸ್ಥಿತರಿದ್ದರು.

Address

Davangere
577001

Telephone

08192259286

Website

Alerts

Be the first to know and let us send you an email when GreeNation posts news and promotions. Your email address will not be used for any other purpose, and you can unsubscribe at any time.

Contact The Organization

Send a message to GreeNation:

Share