14/06/2025
"ಒಂದು ರಾಷ್ಟ್ರ - ಒಂದು ಚುನಾವಣೆ
ಉತ್ತಮ ಪ್ರಜಾಪ್ರಭುತ್ವ ರಾಷ್ಟ್ರದ ಶ್ರೇಷ್ಠ ಕಲ್ಪನೆ "
ಕಲಬುರಗಿಯಲ್ಲಿಂದು ಆಯೋಜಿಸಿದ್ದ ಒಂದು ದೇಶ - ಒಂದು ಚುನಾವಣೆ ಕುರಿತ ವಿಶೇಷ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು. ದೇಶದ ನಾಗರೀಕರ ಬಹು ವರ್ಷಗಳ ಆಶಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಿಸಿ ಸುಭದ್ರ ಭಾರತ ಕಟ್ಟುವ ನಿಟ್ಟಿನಲ್ಲಿ ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರ ನೇತೃತ್ವದ ಸರ್ಕಾರ ಜಾರಿಗೊಳಿಸಿದೆ.
ಏಕಕಾಲದಲ್ಲಿ ಚುನಾವಣೆ ನಡೆಯುವುದರಿಂದ ಚುನಾವಣಾ ವೆಚ್ಚದಲ್ಲಿ ಭಾರಿ ಇಳಿಕೆಯಾಗಲಿದ್ದು, ಸರ್ಕಾರಿ ನೌಕರರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡುವುದು ಕಡಿಮೆಯಾಗುತ್ತದೆ. ರಾಜಕೀಯ ಪಕ್ಷಗಳೂ ಚುನಾವಣೆ ಬಿಟ್ಟು, ಆಡಳಿತದತ್ತ ಗಮನಕೊಡಲು ಸಾಧ್ಯವಾಗುತ್ತದೆ. ಪದೇ ಪದೇ ಚುನಾವಣೆ ನಡೆಯುವುದರಿಂದ ಜನರಿಗೆ ಆಗುವ ತೊಂದರೆಗಳ ನಿವಾರಣೆ ಸೇರಿದಂತೆ ಆಡಳಿತಾತ್ಮಕ ಮತ್ತು ಭದ್ರತಾ ಪಡೆಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ ಈ ಕುರಿತು ಎಲ್ಲೆಡೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕೆಂಬ ಸಂಕಲ್ಪ ಮಾಡಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿಜೀ, ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ವಿಜೇಯದ್ರ ಯುಡ್ಯೂರಪ್ಪ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಡಾ|| ಮುರಗೇಶ್ ನಿರಾಣಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶಿಲ್ ನಮೋಶಿ, ಮಾಜಿ ಸಂಸದರಾದ ಶ್ರೀ ಉಮೇಶ್ ಜಾಧವ್, ಪ್ರಮುಖರಾದ ಶ್ರೀ ಎಂ.ಶರಣಬಸಪ್ಪನವರು, ಶ್ರೀ ಎಸ್.ವಿ.ಪಾಸರ್ ಅವರು, ಎಪಿಎಂಸಿ ಅಧ್ಯಕ್ಷರಾದ ಶ್ರೀ ಸಂತೋಷ್, ಅಭಿಯಾನದ ಸಹ ಸಂಚಾಲಕರಾದ ಶ್ರೀಮತಿ ಪ್ರತಿಮಾ ಸುಭಾಷ್, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಪ್ರಮುಖರು, ಸಾರ್ವಜನಿಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.