19/08/2026
🔥 ವಾಲ್ಮೀಕಿ ನಿಗಮದ ಹಗರಣದ ವಿರುದ್ಧ ಹಾವೇರಿಯಲ್ಲಿ ಬಿಜೆಪಿಯ ಬೃಹತ್ ಜನಾಕ್ರೋಶ ಪ್ರತಿಭಟನೆ! 🔥
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿರುವ ಸಚಿವ ಬಿ. ನಾಗೇಂದ್ರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ, ಭಾರತೀಯ ಜನತಾ ಪಾರ್ಟಿ ಹಾವೇರಿ ವಿಧಾನಸಭಾ ಕ್ಷೇತ್ರದ ವತಿಯಿಂದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೃಹತ್ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು:
ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ (ಜಿಲ್ಲಾಧ್ಯಕ್ಷರು, ಬಿಜೆಪಿ ಹಾವೇರಿ)
ಶ್ರೀ ಶಿವರಾಜ್ ಸಜ್ಜನ್ (ಮಾಜಿ ಶಾಸಕರು ಹಾಗೂ ಹಿರಿಯ ನಾಯಕರು)
ಶ್ರೀ ಗವಿಸಿದ್ದಪ್ಪ ದ್ಯಾಮಣ್ಣವರ (ಮುಖಂಡರು, ಹಾವೇರಿ ವಿಧಾನಸಭಾ ಕ್ಷೇತ್ರ)
ಶ್ರೀ ಸಂತೋಷ್ ಆಲದಕಟ್ಟಿ, ಶ್ರೀ ನಂಜುಂಡೇಶ್ವರ ಕಳ್ಳೇರು, ಶ್ರೀ ನೀಲಪ್ಪ ಚಾವುಡಿ (ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು)
ಶ್ರೀ ಕಿರಣ್ ಕೋಣನವರ (ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರು)
ಶ್ರೀ ಬಸವರಾಜ್ ಕಳಸೂರು (ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರು)
ಶ್ರೀ ಕಿರಣ್ ಕೊಳ್ಳಿ (ನಗರ ಮಂಡಲ ಅಧ್ಯಕ್ಷರು)
ಶ್ರೀ ಮಾರುತಿ ಗೊರವಾರ್ (ಗ್ರಾಮೀಣ ಮಂಡಲ ಅಧ್ಯಕ್ಷರು)
ಶ್ರೀ ಬಸವರಾಜ ಕೋಳಿವಾಡ್ (ಹತ್ತಿಮತ್ತೂರು ಮಂಡಲ ಅಧ್ಯಕ್ಷರು)
ಹಾವೇರಿ ವಿಧಾನಸಭಾ ಕ್ಷೇತ್ರದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಗೂ ವಿಶೇಷವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪದಾಧಿಕಾರಿಗಳು ಈ ಹೋರಾಟದಲ್ಲಿ ಭಾಗಿಯಾಗಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿದರು.