15/09/2024
“ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ”ಯ ಪ್ರಯುಕ್ತ ದಿನಾಂಕ: 15.09.2024 ರಂದು ಉಡುಪಿ ಜಿಲ್ಲೆಯ ಗಡಿಭಾಗಗಳಾದ ಶಿರೂರು ಟೊಲ್ ಗೇಟಿನಿಂದ ಹೆಜಮಾಡಿ ಸೇತುವೆ ವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ವಿವಿಧ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ “ಮಾನವ ಸರಪಳಿ” ಕಾರ್ಯಕ್ರಮವನ್ನು 1 ಲಕ್ಷಕ್ಕೂ ಹೆಚ್ಚಿನ ಜನರು ಭಾಗವಹಿಸಿ ಯಶಸ್ವಿಯಾಗಿ ಆಚರಿಸಲಾಗಿದೆ. ಜಿಲ್ಲೆಯ ಯುವ ಜನತೆ, ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿ ಸಿಬ್ಬಂದಿಗಳು ನೋಂದಣಿ ಮಾಡಿಕೊಂಡು ಕಾರ್ಯಕ್ರಮದಲ್ಲಿ ಅತ್ಯುತ್ಸಾಹದಿಂದ ಭಾಗವಹಿಸಿರುವುದು ಶ್ಲಾಘನೀಯ.
ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ಎಲ್ಲಾ ಇಲಾಖೆಗಳ/ನಿಗಮ ಮಂಡಳಿಯ ಅಧಿಕಾರಿ/ ಸಿಬ್ಬಂದಿಗಳು, ಸರ್ಕಾರಿ/ ಖಾಸಗಿ ಶಾಲಾ-ಕಾಲೇಜಿನ ಬೋಧಕ/ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪ್ರಾಯೋಜಕರುಗಳು, ವಿವಿಧ ಸಮುದಾಯದ ಸಂಘ-ಸಂಸ್ಥೆಗಳ ಮುಖಂಡರುಗಳು, ಪದಾಧಿಕಾರಿಗಳು, ಪತ್ರಿಕಾ ಮಾಧ್ಯಮ ಮಿತ್ರರು, ವಿವಿಧ ಕಲಾ ತಂಡದವರು, ಭಾಗವಹಿಸಿದ ಎಲ್ಲಾ ಸಾರ್ವಜನಿಕರಿಗೆ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳಿಗೆ ಅಭಿನಂದನೆಗಳು. 500 ಮೀ ಉದ್ದದ ಭಾರತದ ಧ್ವಜ ಹಾಗೂ ನಾಡಧ್ವಜವನ್ನು ಪ್ರದರ್ಶಿಸಲು ಸಹಕರಿದ ಸಂಘ ಸಂಸ್ಥೆಗಳಿಗೆ ವಿಶೇಷ ಅಭಿನಂದನೆಗಳು.
ಜಿಲ್ಲಾ ಮಟ್ಟದ ಕಾರ್ಯಕ್ರಮದ ಉದ್ಟಾಟನಾ ಸಮಾರಂಭಕ್ಕೆ ಆಗಮಿಸಿದ ಗೌರವಾನ್ವಿತ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು, ಮುಖ್ಯವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ನ ಎಲ್ಲಾ ಅಧಿಕಾರಿ ಸಿಬ್ಬಂಧಿಗಳು, ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂಧಿಗಳು, ಅಪರ ಜಿಲ್ಲಾಧಿಕಾರಿ, ಸಹಾಯಕ ಕಮೀಷನರ್ ಹಾಗೂ ಎಲ್ಲಾ ತಹಶೀಲ್ದಾರರುಗಳು ಮತ್ತು ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂಧಿಗಳು, ವಿಶೇಷವಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂಧಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ವಿಭಾಗ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾಮಾಜಿಕ ಅರಣ್ಯ ಹಾಗೂ ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂಧಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಹಕಾರ ಇಲಾಖೆ, ಮುಜರಾಯಿ ಇಲಾಖೆ, ಆರೋಗ್ಯ ಇಲಾಖೆ ಯುವಜನ ಸೇವಾ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳು ಕೈಜೋಡಿಸಿರುವುದರಿಂದ ಹಾಗೂ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಭಾಗವಹಿಸಿದ ಕಾರಣ ಅತ್ಯಂತ ವಿಜೃಂಭಣೆಯಿಂದ ಯಶಸ್ವಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲು ಸಾದ್ಯವಾಗಿದೆ. ಅದ್ದರಿಂದ ತಾವೆಲ್ಲರೂ ಅಭಿನಂದಾನರ್ಹರು. ಮುಂದೆಯೂ ಇಂತಹ ಸರಕಾರಿ ಕಾರ್ಯಕ್ರಮಗಳಿಗೆ ತಮ್ಮ ಸಹಕಾರವನ್ನು ಕೋರುತ್ತಾ ತಮಗೆಲ್ಲರಿಗೂ ಅತ್ಯಂತ ಪ್ರೀತಿಪೂರ್ವಕ ಅಭಿನಂದನೆಗಳು.