25/08/2026
ಮುಧೋಳ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಮೂಲಭೂತ ಸೌಲಭ್ಯಗಳ ಅಭಾವ ಹಾಗೂ ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ದೊರೆಯದಿರುವುದನ್ನು ಖಂಡಿಸಿ ಭೀಮ್ ಆರ್ಮಿ ಮೂಲನಿವಾಸಿ ಏಕತಾ ಪರಿಷತ್ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಮುಧೋಳ ನಗರದ ಬಾಬಾ ಸಾಹೇಬ್ ಅಂಬೇಡ್ಕರ್ ಸರ್ಕಲನಿಂದ ಪ್ರತಿಭಟನಾ ಮೆರವಣಿಗೆಯ ಮೂಲಕ ಸರಕಾರಿ ಆಸ್ಪತ್ರೆಗೆ ತೆರಳಿ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು.
ಸಾರ್ವಜನಿಕರ ಆರೋಗ್ಯದೊಂದಿಗೆ ನಿರ್ಲಕ್ಷ್ಯ ಮಾಡದೆ, ತಕ್ಷಣವೇ ಅಗತ್ಯ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯನ್ನು ನೇಮಿಸಿ, ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗಳನ್ನು ಸರಿಪಡಿಸಿ ಗುಣಮಟ್ಟದ ಸರ್ಕಾರಿ ಆರೋಗ್ಯ ಸೇವೆ ಒದಗಿಸಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಬಾಗಲಕೋಟೆಯ ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಮುಧೋಳ ತಾಲೂಕ ತಹಶೀಲ್ದಾರರು ಮನವಿಯನ್ನು ಸ್ವೀಕರಿಸಿ ಶೀಘ್ರದಲ್ಲಿಯೇ ಸರ್ಕಾರಿ ಆಸ್ಪತ್ರೆಯ ಎಲ್ಲಾ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸುವ ಭರವಸೆಯನ್ನು ನೀಡಿದರು. ಸಂದರ್ಭದಲ್ಲಿ ಭೀಮ ಆರ್ಮಿ ಮೂಲ ನಿವಾಸಿ ಏಕತಾ ಪರಿಷತ್ ರಾಜ್ಯ ಘಟಕ, ಜಿಲ್ಲಾ ಘಟಕ, ತಾಲೂಕು ಮತ್ತು ನಗರ ಘಟಕದ ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು, ತಾಯಂದಿರು ಮತ್ತು ಸಮುದಾಯದ ಹಿರಿಯ ಮುಖಂಡರು, ಯುವ ಮುಖಂಡರು ಉಪಸ್ಥಿತರಿದ್ದು ಪ್ರತಿಭಟನೆಯನ್ನು ಯಶಸ್ವಿಗೊಳಿಸಿದರು
ಜನರ ಆರೋಗ್ಯ – ನಮ್ಮ ಹಕ್ಕು.
ಸರ್ಕಾರಿ ಆಸ್ಪತ್ರೆ ಸುಧಾರಿಸಬೇಕು ಎಂಬುದು ನಮ್ಮ ಆಗ್ರಹ!
#ಮುಧೋಳ #ಸರ್ಕಾರಿಆಸ್ಪತ್ರೆ #ಆರೋಗ್ಯಸೇವೆ #ಭೀಮ್ಆರ್ಮಿ #ಪ್ರತಿಭಟನೆ #ಜನರಆರೋಗ್ಯ