06/09/2026
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ರವರಿಂದ ಇಂದು ಸಿ.ಎ.ಆರ್./ಡಿ.ಎ.ಆರ್. ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ-2026 ಆಯೋಜಿಸಲಾಗಿದ್ದು, ಪರೀಕ್ಷಾ ಪ್ರಕ್ರಿಯೆಯು ಶಾಂತಿಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ನಡೆಯಲು ಮೈಸೂರು ನಗರ ಪೊಲೀಸರಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.