ಪಿರಿಯಾಪಟ್ಟಣ ಕಾಂಗ್ರೆಸ್

ಪಿರಿಯಾಪಟ್ಟಣ ಕಾಂಗ್ರೆಸ್ ಪಿರಿಯಾಪಟ್ಟಣ ಕಾಂಗ್ರೇಸ್ ಪಕ್ಷದ ಅಧಿಕೃತ ಪೇಜ್

ಶಿಕ್ಷಣ ಕ್ರಾಂತಿಯ ಹರಿಕಾರರು, ತ್ರಿವಿಧ ದಾಸೋಹಿಗಳಾದ ‘ರಾಜಗುರುತಿಲಕ’ ಪರಮಪೂಜ್ಯರ ಸೇವೆ ಅನನ್ಯ.​ಮೈಸೂರಿನ ಶ್ರೀ ಸುತ್ತೂರು ಮಠದಲ್ಲಿ ಹಮ್ಮಿಕೊಂಡ...
29/08/2026

ಶಿಕ್ಷಣ ಕ್ರಾಂತಿಯ ಹರಿಕಾರರು, ತ್ರಿವಿಧ ದಾಸೋಹಿಗಳಾದ ‘ರಾಜಗುರುತಿಲಕ’ ಪರಮಪೂಜ್ಯರ ಸೇವೆ ಅನನ್ಯ.

​ಮೈಸೂರಿನ ಶ್ರೀ ಸುತ್ತೂರು ಮಠದಲ್ಲಿ ಹಮ್ಮಿಕೊಂಡಿದ್ದ ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀಮನ್ಮಹಾರಾಜ ‘ರಾಜಗುರುತಿಲಕ’ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವದ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ DK Shivakumar ಅವರು, ವಿವಿಧ ಮಠಾಧೀಶರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರೊಂದಿಗೆ ನೆರವೇರಿಸಿದರು.

​ಈ ಮಹೋತ್ಸವದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳು, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು, ಅವಧೂತ ದತ್ತ ಪೀಠದ ಶ್ರೀ ದತ್ತ ವಿಜಯಾನಂದ ತೀರ್ಥ ಮಹಾಸ್ವಾಮೀಜಿಗಳು, ಸಚಿವರಾದ ಶ್ರೀ ಪುಟ್ಟರಂಗಶೆಟ್ಟಿ, Dr Yathindra Siddaramaiah , ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಶ್ರೀ ತನ್ವೀರ್‌ ಸೇಠ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ತೇಜೋಮಯಿ ದಯಾಪೂರ್ಣೇ ಸಚ್ಚಿದಾನಂದರೂಪಿಣಿ।ಸರ್ವವರ್ಣಾತ್ಮಿಕೇ ತುಭ್ಯಂ ಚಾಮುಂಡಾಯೈ ಸುಮಂಗಲಂ॥ಪವಿತ್ರ ಆಷಾಢ ಮಾಸದ ಶುಭ ಸಂದರ್ಭದಲ್ಲಿ ಮೈಸೂರಿನ ಅಧಿ...
01/08/2026

ತೇಜೋಮಯಿ ದಯಾಪೂರ್ಣೇ ಸಚ್ಚಿದಾನಂದರೂಪಿಣಿ।
ಸರ್ವವರ್ಣಾತ್ಮಿಕೇ ತುಭ್ಯಂ ಚಾಮುಂಡಾಯೈ ಸುಮಂಗಲಂ॥

ಪವಿತ್ರ ಆಷಾಢ ಮಾಸದ ಶುಭ ಸಂದರ್ಭದಲ್ಲಿ ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ದಿವ್ಯ ದರ್ಶನ ಪಡೆಯುವ ಸೌಭಾಗ್ಯ ದೊರೆಯಿತು. ತಾಯಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರ ಬದುಕು ಹಸನಾಗಲಿ, ಎಲ್ಲರ ಮನೆಗಳಲ್ಲಿ ಸುಖ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದೆ.

DK Shivakumar

ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಮೊಟ್ಟಮೊದಲ ಬಾರಿಗೆ ತಾಯಿ ಚಾಮುಂಡೇಶ್ವರಿಯ ಪುಣ್ಯಭೂಮಿ, ನಮ್ಮ ಸಾಂಸ್ಕೃತಿಕ ನಗರಿ ಮೈಸೂರ...
01/08/2026

ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಮೊಟ್ಟಮೊದಲ ಬಾರಿಗೆ ತಾಯಿ ಚಾಮುಂಡೇಶ್ವರಿಯ ಪುಣ್ಯಭೂಮಿ, ನಮ್ಮ ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ರವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅದ್ದೂರಿಯಾಗಿ ಸ್ವಾಗತವನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯನವರು ಕೆಪಿಸಿಸಿ ಕಾರ್ಯಧ್ಯಕ್ಷರಾದ ಮಾನ್ಯ ತನ್ವೀರ್ ಸೇಠ್ ರವರು, ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷರಾದ ಡಾ. ಬಿ ಜೆ ವಿಜಯ್ ಕುಮಾರ್ ರವರು ಹಾಗೂ ಪಕ್ಷದ ಎಲ್ಲಾ ಶಾಸಕರು ಮತ್ತು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಂಗ್ರೆಸ್ ನಡಿಗೆ ಮತದಾರರ ಕಡೆಗೆ   ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಮೈಸೂರು ವಿಭಾಗಿಯ SIR ಜಾಗೃತಿ ಸಮಾವೇಶ ದಿನಾಂಕ 28-06-2026 ಭಾನು...
26/06/2026

ಕಾಂಗ್ರೆಸ್ ನಡಿಗೆ ಮತದಾರರ ಕಡೆಗೆ

ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ
ಮೈಸೂರು ವಿಭಾಗಿಯ SIR ಜಾಗೃತಿ ಸಮಾವೇಶ

ದಿನಾಂಕ 28-06-2026 ಭಾನುವಾರ
ಸಮಯ :- 10 ಗಂಟೆ ಗೆ
ಸ್ಥಳ :- ಜೆಕೆ ಗ್ರೌಂಡ್ ರೈಲ್ವೆ ಸ್ಟೇಷನ್ ಮುಂಭಾಗ ಮೈಸೂರು

Indian National Congress - Karnataka

ಮುಖ್ಯಮಂತ್ರಿ Siddaramaiah ಅವರು‌ ಇಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, "ವಿವಿಧ ಇಲಾಖೆಗಳ ಒಟ್ಟು 419....
21/04/2026

ಮುಖ್ಯಮಂತ್ರಿ Siddaramaiah ಅವರು‌ ಇಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, "ವಿವಿಧ ಇಲಾಖೆಗಳ ಒಟ್ಟು 419.78 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಬಳಿಕ ಶಕ್ತಿ ದೇವತೆ ಶ್ರೀಮಸಣಿಕಮ್ಮ ದೇವಸ್ಥಾನ ನಿರ್ಮಾಣ, ಕುವೆಂಪು ಭವನ‌ ನಿರ್ಮಾಣ, ಸಿಡಿಲು ಮಲ್ಲಿಕಾರ್ಜುನ ಸ್ವಾಮಿ‌ ದೇವಸ್ಥಾನ, ಬೆಟ್ಟಕ್ಕೆ ಹೋಗುವ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಶಾಸಕರಾದ ರವಿಶಂಕರ್, ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಶಿವಕುಮಾರ್ ಹಾಗೂ ಡಾ.ತಿಮ್ಮಯ್ಯ ಸೇರಿ ಹಲವು ಪ್ರಮುಖರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಟಿ.ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ, "ವರುಣಾ ವಿಧಾನಸಭಾ ಕ್ಷೇತ್...
18/01/2026

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಟಿ.ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ, "ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ Siddaramaiah ಅವರು ನೆರವೇರಿಸಿದರು.

ಸಚಿವರಾದ ಡಾ||ಹೆಚ್.ಸಿ.ಮಹದೇವಪ್ಪ, ಡಾ||ಶರಣಪ್ರಕಾಶ್ ಪಾಟೀಲ್, ಡಾ||ಎಂ.ಸಿ.ಸುಧಾಕರ್, ಸಂಸದರಾದ ಸುನಿಲ್ ಬೋಸ್, ವಿಧಾನ‌ ಪರಿಷತ್ ಸದಸ್ಯರಾದ ಡಾ||ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು, ವಿಧಾನ‌ ಪರಿಷತ್ ಸದಸ್ಯರುಗಳು, ವರುಣಾ ವಿಧಾನಸಭಾ ಕ್ಷೇತ್ರದ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನ: ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕು.2005 ರಲ್ಲಿ ಮನಮೋಹನ್ ಸಿಂಗ್ ಅ...
18/01/2026

ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನ: ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕು.
2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಮನರೇಗಾ ಕಾನೂನು ಜಾರಿ ಮಾಡಿದರು. ಆ ಮೂಲಕ ಕೆಲಸದ ಹಕ್ಕು ಕೊಟ್ಟರು. ಮೋದಿ ಸರ್ಕಾರ ಅದನ್ನು ಕಿತ್ತುಹಾಕುತ್ತಿದೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ. ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೇಂದ್ರ ಸರ್ಕಾರ ಅದನ್ನು ತೀರ್ಮಾನಿಸಲಿದೆ. ವಿಬಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಎಲ್ಲರೂ ಚಳುವಳಿಗೆ ತಯಾರಾಗಿ.

ದೇಶದಲ್ಲಿ ಇನ್ನು ಮುಂದೆ ಮನರೇಗಾ ಯೋಜನೆ ಇರುವುದಿಲ್ಲ. ನಮ್ಮ ಸರ್ಕಾರ ಮನರೇಗಾ ಯೋಜನೆಯನ್ನು ಮುಂದುವರೆಸಲು ಹೋರಾಡುತ್ತಿದೆ. ದಲಿತರಿಗೆ, ಹೆಣ್ಣುಮಕ್ಕಳಿಗೆ ಕೆಲಸ ಕೊಡುವ ಕಾಯ್ದೆ. ಅದು ಸಂವಿಧಾನದ ಹಕ್ಕು. ಮನರೇಗಾವನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದೆಂಬ ಒತ್ತಡವನ್ನು
ಹಾಕಲಾಗುತ್ತಿದೆ.

ಕುಪ್ಯಾ ಗ್ರಾಮದಲ್ಲಿ ಸುಮಾರು 323 ಕೋಟಿ ರೂ.ಗಳ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ನಂತರ ಮೂರು ಬಾರಿ ವರುಣಾ ಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 22/10/2024 ರಲ್ಲಿ 501 ಕೋಟಿ ರೂ‌. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ನಂತರ 9/8/2025 ರಂದು 1,108 ಕೋಟಿ ರೂ. ಗಳ ಕಾರ್ಯಕ್ರಮಗಳು ಮತ್ತು ಇಂದು ₹323 ಕೋಟಿ ಸೇರಿದಂತೆ ಒಟ್ಟು 1,932 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ. 1,500ಕ್ಕೂ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಜಾರಿ ಮಾಡಲಾಗಿದೆ. ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳು ಎರಡಕ್ಕೂ ಸಮಾನವಾಗಿ ವೆಚ್ಚ ಮಾಡಲಾಗಿದೆ.

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ ವರುಣಾದಲ್ಲಿ ₹1,932 ಕೋಟಿಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ. ಖಜಾನೆ ಖಾಲಿಯಾಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಮೈಸೂರು ಜಿಲ್ಲೆಯಲ್ಲಿ ಸುಮಾರು 10,000 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಇದೇ ರೀತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಅಭಿವೃದ್ಧಿಗಾಗಿ ಸರ್ಕಾರ ಕ್ರಮ ಕೈಗೊಂಡಿದೆ. 1,15,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳಬೇಕು.

ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರುಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ. ಯತೀಂದ್ರ. ಅವರಿಗೆ ಕ್ಷೇತ್ರದ ಎಲ್ಲಾ ಗ್ರಾಮಗಳ ಪರಿಚಯವಿದೆ. ವಾರಕ್ಕೆ ಎರಡು ಮೂರು ಸಾರಿ ಬಂದು ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಮೈಸೂರಿಗೆ ಬಂದಾಗಲೆಲ್ಲಾ ಜನರನ್ನು ಭೇಟಿ ಮಾಡುವ ಪ್ರಯತ್ನ ಮಾಡುತ್ತೇನೆ.

- ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ Siddaramaiah ಅವರ ಮಾತುಗಳು

ಮೈಸೂರಿನ ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ...
18/01/2026

ಮೈಸೂರಿನ ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಕೃಷಿ ವಿಚಾರಸಂಕಿರಣದ ಉದ್ಘಾಟನೆಯನ್ನು ಮುಖ್ಯಮಂತ್ರಿ Siddaramaiah ಅವರು ನೆರವೇರಿಸಿ, ಶುಭ ಹಾರೈಸಿದರು.

Address

ಪಿರಿಯಾಪಟ್ಟಣ
Piriyapatna

Telephone

+17406428958

Website

Alerts

Be the first to know and let us send you an email when ಪಿರಿಯಾಪಟ್ಟಣ ಕಾಂಗ್ರೆಸ್ posts news and promotions. Your email address will not be used for any other purpose, and you can unsubscribe at any time.

Shortcuts

Share