Deputy Commissioner Raichur

Deputy Commissioner Raichur Deputy Commissioner Raichur

ತುಂಗಭದ್ರಾ ಎಡದಂಡೆ ನಾಲೆಯ ಕೊನೆಯ ಭಾಗದ ರೈತರಿಗೆ ಸಮರ್ಪಕ ಹಾಗೂ ನ್ಯಾಯಯುತವಾಗಿ ನೀರು ತಲುಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ...
03/09/2026

ತುಂಗಭದ್ರಾ ಎಡದಂಡೆ ನಾಲೆಯ ಕೊನೆಯ ಭಾಗದ ರೈತರಿಗೆ ಸಮರ್ಪಕ ಹಾಗೂ ನ್ಯಾಯಯುತವಾಗಿ ನೀರು ತಲುಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಜಹೀರಾ ನಸೀಮ್ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ನೀರು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಲುವೆಯಲ್ಲಿ ನೀರು ಪೋಲಾಗುವುದನ್ನು ತಡೆಗಟ್ಟುವುದು, ಅಕ್ರಮವಾಗಿ ನೀರು ಎತ್ತುವುದನ್ನು ನಿಯಂತ್ರಿಸುವುದು ಹಾಗೂ ಅಕ್ರಮ ಪೈಪ್‌ಲೈನ್‌ಗಳ ವಿರುದ್ಧ ನಿಯಮಾನುಸಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಿರವಾರ ಹಾಗೂ ಮಸ್ಕಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸುವಂತೆ ಜೆಸ್ಕಾಂ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ ಅವರು, ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಹಾಗೂ ಹೆಚ್ಚುವರಿ ಸಿಬ್ಬಂದಿ ಒದಗಿಸುವುದಾಗಿ ತಿಳಿಸಿದರು. ಕಾಲುವೆಗಳ ಮೇಲೆ ನಿರಂತರವಾಗಿ ಮೇಲುಸ್ತುವಾರಿ ನಡೆಸಬೇಕು ಹಾಗೂ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ಅವರು ತುಂಗಭದ್ರಾ ಎಡದಂಡೆ ನಾಲೆಯ ವ್ಯಾಪ್ತಿ, ಅಚ್ಚುಕಟ್ಟು ಪ್ರದೇಶ ಹಾಗೂ ಭತ್ತದ ಬೆಳೆಗೆ ಸಂಬಂಧಿಸಿದ ಮಾಹಿತಿಯನ್ನು ಸಭೆಗೆ ನೀಡಿದರು. ಅಚ್ಚುಕಟ್ಟು ಪ್ರದೇಶದಲ್ಲಿ ಅನುಮತಿಸಲಾದ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ, ನೀರಿನ ಸಮರ್ಪಕ ಬಳಕೆಗಾಗಿ ಪರ್ಯಾಯ ಬೆಳೆಗಳ ಕುರಿತು ರೈತರಿಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.

ಕೊಪ್ಪಳ ಜಿಲ್ಲಾಧಿಕಾರಿ ಶ್ರೀ ಸುರೇಶ ಬಿ. ಇಟ್ನಾಳ ಅವರು ನೀರು ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ನೀರಾವರಿ ಇಲಾಖೆಯ ಅಧಿಕಾರಿಗಳ ಪರಸ್ಪರ ನಿಯೋಜನೆ ಕುರಿತು ಸಲಹೆ ನೀಡಿದರು.

ಕೊನೆಯ ಭಾಗದ ರೈತರಿಗೆ ಸಮರ್ಪಕ ಹಾಗೂ ನ್ಯಾಯಯುತವಾಗಿ ನೀರು ತಲುಪುವಂತೆ ಎಲ್ಲಾ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.

ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ ಎಲ್. ಅವರ ಅಧ್ಯಕ್ಷತೆಯಲ್ಲಿ ರಾಯಚೂರು ಜಿಲ...
02/09/2026

ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ ಎಲ್. ಅವರ ಅಧ್ಯಕ್ಷತೆಯಲ್ಲಿ ರಾಯಚೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಸಭೆಯಲ್ಲಿ ಆಯೋಗದ ಸದಸ್ಯರಾದ ಶ್ರೀ ಸುನೀಲ್ ಎಂ. ಉಕ್ಕಲಿ, ಶ್ರೀ ಎನ್. ದಿವಾಕರ್, ಶ್ರೀಮತಿ ಗೀತಾ ಥಾಂವಶಿ ಹಾಗೂ ಆಯೋಗದ ಕಾರ್ಯದರ್ಶಿ ಡಾ. ಹೆಚ್.ಎಸ್. ಶಿವರಾಮು ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳಿಂದ ಆಲಿಸಲಾಯಿತು. ವಿವಿಧ ಇಲಾಖೆಗಳ ವ್ಯಾಪ್ತಿಗೆ ಒಳಪಡುವ ವಿಷಯಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.

ಸ್ವೀಕರಿಸಲಾದ ಅಹವಾಲುಗಳನ್ನು ನಿಯಮಾನುಸಾರ ಪರಿಶೀಲಿಸಿ, ಅರ್ಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಕ್ರಮವಹಿಸುವುದು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ನಿಯಮಾನುಸಾರ ಸ್ಪಂದಿಸುವ ಕುರಿತು ಸಭೆಯಲ್ಲಿ ಒತ್ತು ನೀಡಲಾಯಿತು.

ರಾಯಚೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಕೃಷಿ ಚಟುವಟಿಕೆಗಳು, ನೀರಾವರಿ ನಿರ್ವಹಣೆ ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯ...
01/09/2026

ರಾಯಚೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಕೃಷಿ ಚಟುವಟಿಕೆಗಳು, ನೀರಾವರಿ ನಿರ್ವಹಣೆ ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಅವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿದ ಸಚಿವರು, ತುಂಗಭದ್ರಾ ಎಡದಂಡೆ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಕೊನೆಯ ಭಾಗದ ರೈತರಿಗೆ ಸಮರ್ಪಕವಾಗಿ ನೀರು ತಲುಪುವಂತೆ ನೀರಿನ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಕುಡಿಯುವ ನೀರು, ಕೃಷಿ ಹಾಗೂ ಜಾನುವಾರುಗಳ ಮೇವಿನ ಲಭ್ಯತೆಗೆ ಸಂಬಂಧಿಸಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯ ಐದು ತಾಲೂಕುಗಳನ್ನು ಈಗಾಗಲೇ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಪರಿಸ್ಥಿತಿಯ ಆಧಾರದ ಮೇಲೆ ಅಗತ್ಯವಿರುವ ಇನ್ನಷ್ಟು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಸಮರ್ಪಕವಾಗಿ ಒದಗಿಸುವಂತೆ ಸೂಚಿಸಿದರು.

ತಾಲೂಕು ಮಟ್ಟದಲ್ಲಿ ‘ಪ್ರಜಾಸೇವೆ’ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾರ್ವಜನಿಕರ ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು.

ಸಭೆಯಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಹಾಗೂ ಮಸ್ಕಿ ಕ್ಷೇತ್ರದ ಶಾಸಕರಾದ ಆರ್. ಬಸನಗೌಡ ತುರ್ವಿಹಾಳ, ರಾಯಚೂರು ಲೋಕಸಭಾ ಸದಸ್ಯರಾದ ಜಿ. ಕುಮಾರ ನಾಯಕ, ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಭೋಸರಾಜು, ಮಾನವಿ ಕ್ಷೇತ್ರದ ಶಾಸಕರಾದ ಜಿ. ಹಂಪಯ್ಯ ನಾಯಕ, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ರಾಯಚೂರು ನಗರದ ವಾರ್ಡ್‌ 19 ಹಾಗೂ 20ರಲ್ಲಿ ಜಿಲ್ಲಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರ...
31/08/2026

ರಾಯಚೂರು ನಗರದ ವಾರ್ಡ್‌ 19 ಹಾಗೂ 20ರಲ್ಲಿ ಜಿಲ್ಲಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ, ನೂತನ ಓವರ್‌ಹೆಡ್ ವಾಟರ್ ಟ್ಯಾಂಕ್ (OHT) ನಿರ್ಮಾಣ ಹಾಗೂ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ/ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಕಾಮಗಾರಿಗಳ ಪ್ರಸ್ತುತ ಸ್ಥಿತಿ, ಗುಣಮಟ್ಟ ಹಾಗೂ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.

ನಗರದ ನಾಗರಿಕರಿಗೆ ಶುದ್ಧ ಕುಡಿಯುವ ನೀರು, ಸ್ವಚ್ಛತೆ, ನೈರ್ಮಲ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಅಭಿವೃದ್ಧಿ ಕಾಮಗಾರಿಗಳು ನಿಗದಿತ ತಾಂತ್ರಿಕ ಹಾಗೂ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ನಿರ್ದೇಶನ ನೀಡಲಾಯಿತು.

ನಗರ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಲಾಯಿತು. ಸಾರ್ವಜನಿಕ ಆರೋಗ್ಯ ಹಾಗೂ ಸ್ವಚ್ಛ ನಗರ ಪರಿಸರ ನಿರ್ಮಾಣದಲ್ಲಿ ಅವರ ಸೇವೆ ಮಹತ್ವದ್ದಾಗಿದೆ.

ರಾಯಚೂರು ನಗರದ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿಗಾಗಿ ಸಂಬಂಧಿಸಿದ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಅಗತ್ಯ ಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲಾಗುವುದು.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಹದ್ದಿನಾಳ ಅವರು ಹತ್ಯೆಗೀಡಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀಮತಿ...
29/08/2026

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಹದ್ದಿನಾಳ ಅವರು ಹತ್ಯೆಗೀಡಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ರವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಕುಟುಂಬದ ಪ್ರಸ್ತುತ ಪರಿಸ್ಥಿತಿ ಹಾಗೂ ಅಗತ್ಯತೆಗಳ ಕುರಿತು ಮಾಹಿತಿ ಪಡೆದರು. ತಕ್ಷಣದ ನೆರವಿನ ಕ್ರಮವಾಗಿ ಕುಟುಂಬಕ್ಕೆ ಅಗತ್ಯ ಆಹಾರ ಧಾನ್ಯಗಳನ್ನು ವಿತರಿಸಲಾಯಿತು.

ಮೃತ ಭೂಮಾನಂದ ಹದ್ದಿನಾಳ ಅವರ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಅಗತ್ಯವಿರುವ ಎಲ್ಲ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮೃತರ ಪತ್ನಿಗೆ ಸರ್ಕಾರದಿಂದ ಲಭ್ಯವಿರುವ ಪರಿಹಾರವನ್ನು ಮೊದಲ ಹಂತವಾಗಿ ಈಗಾಗಲೇ ಒದಗಿಸಲಾಗಿದ್ದು, ಉಳಿದ ಸರ್ಕಾರಿ ಸೌಲಭ್ಯಗಳನ್ನು ದೊರಕಿಸಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ, ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳುವಂತೆ ದೇವದುರ್ಗ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಿದರು.

ಭೂಮಾನಂದ ಹದ್ದಿನಾಳ ಅವರ ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ತನಿಖೆಯನ್ನು ಸಂಪೂರ್ಣ ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ನ್ಯಾಯಯುತವಾಗಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಕುಟುಂಬದವರಿಗೆ ಭರವಸೆ ನೀಡಿದರು.

ಸಂಕಷ್ಟದಲ್ಲಿರುವ ಕುಟುಂಬಕ್ಕೆ ಜಿಲ್ಲಾಡಳಿತವು ಅಗತ್ಯ ರಕ್ಷಣೆ, ಸಹಾಯ ಮತ್ತು ಬೆಂಬಲವನ್ನು ಮುಂದುವರಿಸಲಿದೆ. ಕುಟುಂಬವು ಅರ್ಹವಾಗಿರುವ ಸರ್ಕಾರಿ ಯೋಜನೆಗಳು, ಪರಿಹಾರ ಸೌಲಭ್ಯಗಳು ಹಾಗೂ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನವನ್ನು ತ್ವರಿತವಾಗಿ ದೊರಕಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ತುಂಗಭದ್ರಾ ಎಡದಂಡೆ ಕಾಲುವೆಯ (TLBC) ಕೊನೆಯ ಭಾಗದ ರೈತರ ಹಿತರಕ್ಷಣೆ ಹಾಗೂ ಸಮರ್ಪಕ ನೀರು ಹಂಚಿಕೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ರಾಯಚ...
28/08/2026

ತುಂಗಭದ್ರಾ ಎಡದಂಡೆ ಕಾಲುವೆಯ (TLBC) ಕೊನೆಯ ಭಾಗದ ರೈತರ ಹಿತರಕ್ಷಣೆ ಹಾಗೂ ಸಮರ್ಪಕ ನೀರು ಹಂಚಿಕೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ರಾಯಚೂರು ಜಿಲ್ಲಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲಾಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿದರು.

ರಾಯಚೂರು ಮತ್ತು ಕೊಪ್ಪಳ ಜಿಲ್ಲಾಧಿಕಾರಿಗಳು ಜಂಟಿಯಾಗಿ 47ನೇ ಮೈಲ್‌ಗೆ ಭೇಟಿ ನೀಡಿ, ಕಾಲುವೆಯ ಗೇಜ್ ಮಟ್ಟ ಹಾಗೂ ನೀರಿನ ಹರಿವಿನ ಸಾಮರ್ಥ್ಯವನ್ನು ಕೂಲಂಕಷವಾಗಿ ಪರಿಶೀಲಿಸಿದರು.

ನಂತರ ಜಿಲ್ಲಾಧಿಕಾರಿಗಳು ರಾಯಚೂರು ರವರು ರಾಯಚೂರು ಜಿಲ್ಲಾ ವ್ಯಾಪ್ತಿಯ ಸಿಂಧನೂರು ಮತ್ತು ಮಸ್ಕಿ ತಾಲ್ಲೂಕಿನ 47ನೇ ಮೈಲ್‌ನಿಂದ 69ನೇ ಮೈಲ್‌ವರೆಗೆ ಸುದೀರ್ಘ ಪರಿಶೀಲನೆ ನಡೆಸಿ, ಕಾಲುವೆಯ ವಾಸ್ತವ ಸ್ಥಿತಿಗತಿಗಳನ್ನು ಅವಲೋಕಿಸಿದರು.

ಕಾಲುವೆಯಿಂದ ಅನಧಿಕೃತವಾಗಿ ನೀರೆತ್ತುವ ಪೈಪ್‌ಗಳು ಹಾಗೂ ಅಕ್ರಮ ಸಂಪರ್ಕಗಳನ್ನು ತಕ್ಷಣವೇ ಮುಟ್ಟುಗೋಲು ಹಾಕಿಕೊಂಡು ತೆರವುಗೊಳಿಸಲು ಸಂಬಂಧಪಟ್ಟ ಕಂದಾಯ, ಪೊಲೀಸ್ ಹಾಗೂ ಜಲಸಂಪನ್ಮೂಲ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಕಾಲುವೆ ಸೋರಿಕೆಯಾಗುತ್ತಿರುವ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ನೀರಿನ ಪೋಲು ತಪ್ಪಿಸಲು ತಾಂತ್ರಿಕ ವಿಭಾಗದ ಅಧಿಕಾರಿಗಳು ತಕ್ಷಣವೇ ದುರಸ್ತಿ ಕೈಗೊಂಡು ಸೋರಿಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಆದೇಶಿಸಿದರು.

ಕಡೆಯ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ನೀರಿನ ಕೊರತೆಯಾಗದಂತೆ ಗೇಜ್ ಮಟ್ಟದ ನಿರಂತರ ಮೇಲ್ವಿಚಾರಣೆ, ಸಮರ್ಪಕ ನೀರು ನಿರ್ವಹಣೆ ಹಾಗೂ ನಿಯಮಾನುಸಾರ ನೀರು ಹಂಚಿಕೆಯನ್ನು ಖಚಿತಪಡಿಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

2026ನೇ ಸಾಲಿನ ಕರಡು ಮತದಾರರ ಪಟ್ಟಿ ಪ್ರಕಟರಾಯಚೂರು ಜಿಲ್ಲೆಯ ಎಲ್ಲಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ 2026ನೇ ಸಾಲಿನ ಕರಡು ಮತದಾರರ ಪಟ್ಟಿಯನ್ನ...
24/08/2026

2026ನೇ ಸಾಲಿನ ಕರಡು ಮತದಾರರ ಪಟ್ಟಿ ಪ್ರಕಟ

ರಾಯಚೂರು ಜಿಲ್ಲೆಯ ಎಲ್ಲಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ 2026ನೇ ಸಾಲಿನ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್., ರವರು ತಿಳಿಸಿದ್ದಾರೆ.

ಇಂದು ಜಿಲ್ಲಾಡಳಿತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಡು ಮತದಾರರ ಪಟ್ಟಿಯ ಪ್ರಮುಖ ವಿವರಗಳನ್ನು ಹಂಚಿಕೊಂಡರು.

ಕರಡು ಮತದಾರರ ಪಟ್ಟಿಯ ಪ್ರಮುಖ ಅಂಶಗಳು

▪️ಜಿಲ್ಲೆಯಲ್ಲಿ ಒಟ್ಟು 13,93,163 ಮತದಾರರು ಕರಡು ಪಟ್ಟಿಯಲ್ಲಿದ್ದಾರೆ.
▪️ ಹಿಂದಿನ ಮತದಾರರ ಪಟ್ಟಿಯಿಂದ ಒಟ್ಟು 3,21,396 ಮತದಾರರನ್ನು ತೆಗೆದುಹಾಕಲಾಗಿದೆ.
▪️ ತೆಗೆದುಹಾಕಲಾದ ಮತದಾರರಲ್ಲಿ:
- 61,385 – ಮರಣ ಹೊಂದಿದವರು
- 1,87,941 – ಶಾಶ್ವತವಾಗಿ ಸ್ಥಳಾಂತರಗೊಂಡವರು
- 30,733 – ಗೈರುಹಾಜರಿ ಮತದಾರರು
- 365 – ಇತರೆ ವರ್ಗ
▪️2025ರ ಮತದಾರರ ಪಟ್ಟಿಗೆ ಹೋಲಿಸಿದರೆ 18.75% ವ್ಯತ್ಯಾಸ ಕಂಡುಬಂದಿದೆ.
▪️ಕರಡು ಪಟ್ಟಿಯಲ್ಲಿ 17,048 ವಿಕಲಚೇತನ ಮತದಾರರು ದಾಖಲಾಗಿದ್ದಾರೆ.

ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆ

ಆಗಸ್ಟ್ 27, 2026 ರಿಂದ ಅಕ್ಟೋಬರ್ 22, 2026 ರವರೆಗೆ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ.

ಹೊಸ ಮತದಾರರ ನೋಂದಣಿ

2026ರ ಅಕ್ಟೋಬರ್ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಅರ್ಹ ಯುವ ಮತದಾರರು ಫಾರ್ಮ್-6 ಅನ್ನು ಆನ್‌ಲೈನ್ ಮೂಲಕ ಅಥವಾ ಬೂತ್ ಮಟ್ಟದ ಅಧಿಕಾರಿಗಳ (BLO) ಮೂಲಕ ಸಲ್ಲಿಸಿ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬಹುದು.

ಅಂತಿಮ ಮತದಾರರ ಪಟ್ಟಿ

ಹಕ್ಕು ಮತ್ತು ಆಕ್ಷೇಪಣೆಗಳ ಸ್ವೀಕಾರ ಹಾಗೂ ವಿಲೇವಾರಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಅಕ್ಟೋಬರ್ 27, 2026 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.

ಜಿಲ್ಲೆಯ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು.

ನಿಮ್ಮ ಮತ – ನಿಮ್ಮ ಹಕ್ಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಿ.

ದೌರ್ಜನ್ಯ ತಡೆ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ...
22/08/2026

ದೌರ್ಜನ್ಯ ತಡೆ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಹಾಗೂ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇತ್ತೀಚಿನ ದೌರ್ಜನ್ಯ ಪ್ರಕರಣಗಳ ಹಿನ್ನೆಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಕರಣಗಳ ಕುರಿತು ತ್ವರಿತ ಸ್ಪಂದನೆ ಹಾಗೂ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವ ಕುರಿತು ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

ಪ್ರಮುಖ ನಿರ್ದೇಶನಗಳು:

▪️ ತಕ್ಷಣದ ಮಾಹಿತಿ ವಿನಿಮಯ: ದೌರ್ಜನ್ಯ ಪ್ರಕರಣ ದಾಖಲಾಗುತ್ತಿದ್ದಂತೆಯೇ ಪೊಲೀಸ್ ಇಲಾಖೆಯು ಸಮಾಜ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಬೇಕು.

▪️ Golden Hour Response: ಘಟನೆ ನಡೆದ 1 ಗಂಟೆಯನ್ನು golden hour ಎಂದು ಪರಿಗಣಿಸಿ ತುರ್ತು 112 ಸಹಾಯವಾಣಿ ಕರೆ ಕೈಗೊಳ್ಳುವುದು, FIR ದಾಖಲಿಸುವುದು. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹಾಗೂ POCSO ಪ್ರಕರಣಗಳಲ್ಲಿ ಪೊಲೀಸರು ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು.

▪️ ಸಂತ್ರಸ್ತರಿಗೆ ತ್ವರಿತ ನೆರವು: ಪರಿಹಾರ, ಸರ್ಕಾರದ ಸೌಲಭ್ಯಗಳು, ಆಂಬುಲೆನ್ಸ್ ಹಾಗೂ ಅಗತ್ಯ ವೈದ್ಯಕೀಯ ಚಿಕಿತ್ಸೆಯನ್ನು ವಿಳಂಬವಿಲ್ಲದೆ ಒದಗಿಸಬೇಕು.

▪️ ಸ್ಥಳೀಯ ಆಡಳಿತದ ಹೊಣೆಗಾರಿಕೆ: ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು ಹಾಗೂ ಪಿಡಿಒಗಳು ಘಟನೆಗಳ ಕುರಿತು ತಕ್ಷಣ ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳಿಗೆ ಮಾಹಿತಿ ನೀಡಬೇಕು.

▪️ ಮುನ್ನೆಚ್ಚರಿಕಾ ಕ್ರಮಗಳು: ಗ್ರಾಮಗಳಲ್ಲಿ ಅಗತ್ಯ ಮೂಲಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪಗಳು ಹಾಗೂ ODF ಪರಿಸರವನ್ನು ಖಚಿತಪಡಿಸಿ, ಅಹಿತಕರ ಘಟನೆಗಳ ಮರುಕಳಿಕೆಯನ್ನು ತಡೆಗಟ್ಟಬೇಕು.

▪️ ಸಾರ್ವಜನಿಕರ ಅಹವಾಲುಗಳಿಗೆ ಆದ್ಯತೆ: ನಾಗರಿಕರು ಹಾಗೂ ಸಂಘಟನೆಗಳಿಂದ ಸ್ವೀಕರಿಸುವ ಅರ್ಜಿ ಮತ್ತು ದೂರುಗಳನ್ನು ಗೌರವಯುತವಾಗಿ ಹಾಗೂ ಆದ್ಯತೆಯ ಮೇರೆಗೆ ಪರಿಹರಿಸಬೇಕು.

▪️ ನಿಯಮಿತ ಪರಿಶೀಲನೆ: ಜಿಲ್ಲಾ ಮತ್ತು ಉಪವಿಭಾಗ ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ದೌರ್ಜನ್ಯ ತಡೆ ಸಭೆ ನಡೆಸಿ ಪ್ರಕರಣಗಳ ಪ್ರಗತಿ ಪರಿಶೀಲಿಸಬೇಕು.

▪️ SOP ಅನುಷ್ಠಾನ: ಸೂಕ್ಷ್ಮ ಪ್ರಕರಣಗಳ ನಿರ್ವಹಣೆಗೆ ಸಮಗ್ರ Standard Operating Procedure (SOP) ರೂಪಿಸಿ ಅನುಷ್ಠಾನಗೊಳಿಸಲು ಸೂಚಿಸಿದರು.

ಇಲಾಖೆಗಳ ನಡುವೆ ಸಮನ್ವಯದ ಕೊರತೆ ಅಥವಾ ಕರ್ತವ್ಯಲೋಪ ಕಂಡುಬಂದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟ ಎಚ್ಚರಿಕೆ ನೀಡಿದರು.

ಅಹಿತಕರ ಘಟನೆಗಳ ಮರುಕಳಿಕೆಯನ್ನು ತಡೆಗಟ್ಟುವುದು, ಸಂತ್ರಸ್ತರಿಗೆ ತ್ವರಿತ ನ್ಯಾಯ ಮತ್ತು ನೆರವು ಒದಗಿಸುವುದು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಎಲ್ಲಾ ಇಲಾಖೆಗಳ ಸಾಮೂಹಿಕ ಜವಾಬ್ದಾರಿಯಾಗಿದೆ.

ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ರವರ ಉಪಸ್ಥಿತಿಯಲ್ಲಿ ರಾಯಚೂರು ...
21/08/2026

ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ರವರ ಉಪಸ್ಥಿತಿಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಎನ್‌ಜಿಒಗಳು, ಟ್ರಸ್ಟ್‌ಗಳು, ಫೌಂಡೇಶನ್‌ಗಳು ಹಾಗೂ ಅಭಿವೃದ್ಧಿ ಸಹಭಾಗಿಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಶಿಕ್ಷಣ, ಆರೋಗ್ಯ, ಕೌಶಲ್ಯಾಭಿವೃದ್ಧಿ, ಜೀವನೋಪಾಯ, ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ನೀರು–ನೈರ್ಮಲ್ಯ, ನವೀಕರಿಸಬಹುದಾದ ಇಂಧನ, ಪರಿಸರ, ಅಂಗವಿಕಲರ ಒಳಗೊಳ್ಳುವಿಕೆ ಹಾಗೂ ಸಮುದಾಯ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾರ್ಯಕ್ರಮಗಳ ಪ್ರಗತಿ, ವ್ಯಾಪ್ತಿ ಮತ್ತು ಪರಿಣಾಮವನ್ನು ಪರಿಶೀಲಿಸಲಾಯಿತು.

ಸಭೆಯ ಪ್ರಮುಖ ಚರ್ಚಾ ವಿಷಯಗಳು:
• ಎನ್‌ಜಿಒಗಳ ಕಾರ್ಯವ್ಯಾಪ್ತಿ ಹಾಗೂ ಭೌಗೋಳಿಕ ವ್ಯಾಪ್ತಿಯ ಮ್ಯಾಪಿಂಗ್
• ಯೋಜನೆಗಳು, ಫಲಾನುಭವಿಗಳ ವ್ಯಾಪ್ತಿ ಮತ್ತು ಸಾಧನೆಗಳ ಪರಿಶೀಲನೆ
• ಸರ್ಕಾರ–ಎನ್‌ಜಿಒ ಸಮನ್ವಯ ಹಾಗೂ ಸಹಭಾಗಿತ್ವದ ಅವಕಾಶಗಳ ಗುರುತಿಸುವಿಕೆ
• ಆದ್ಯತಾ ಕ್ಷೇತ್ರಗಳಲ್ಲಿ ಸಂಪನ್ಮೂಲ ಕ್ರೋಢೀಕರಣ
• ಉತ್ತಮ ಪದ್ಧತಿಗಳು, ನವೀನ ಮಾದರಿಗಳು ಹಾಗೂ ಯಶೋಗಾಥೆಗಳ ಹಂಚಿಕೆ
• ನಿರಂತರ ಸಮನ್ವಯಕ್ಕಾಗಿ ಪರಿಣಾಮಕಾರಿ ಕಾರ್ಯವಿಧಾನ ರೂಪಿಸುವಿಕೆ

ಚಟುವಟಿಕೆಗಳ ಅನುಷ್ಠಾನಕ್ಕಿಂತ ಅವುಗಳಿಂದ ಉಂಟಾಗುವ ಫಲಿತಾಂಶ ಮತ್ತು ಜನರ ಜೀವನದಲ್ಲಿ ಕಂಡುಬರುವ ನೈಜ ಬದಲಾವಣೆಗೆ ಆದ್ಯತೆ ನೀಡುವ ಫಲಿತಾಂಶಾಧಾರಿತ ದೃಷ್ಟಿಕೋನಕ್ಕೆ ಸಭೆಯಲ್ಲಿ ವಿಶೇಷ ಒತ್ತು ನೀಡಲಾಯಿತು.

ಸರ್ಕಾರದ ಆಡಳಿತಾತ್ಮಕ ವ್ಯವಸ್ಥೆ ಮತ್ತು ಸಾಂಸ್ಥಿಕ ಸಾಮರ್ಥ್ಯದೊಂದಿಗೆ ಎನ್‌ಜಿಒಗಳು ಹಾಗೂ ಅಭಿವೃದ್ಧಿ ಸಹಭಾಗಿಗಳ ತಾಂತ್ರಿಕ ಪರಿಣತಿ, ನವೀನತೆ ಮತ್ತು ಸಮುದಾಯದೊಂದಿಗಿನ ನೇರ ಸಂಪರ್ಕವನ್ನು ಸಮನ್ವಯಗೊಳಿಸುವ ಮೂಲಕ ರಾಯಚೂರು ಜಿಲ್ಲೆಯಲ್ಲಿ ಸಮನ್ವಿತ, ಪರಿಣಾಮಕಾರಿ ಹಾಗೂ ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸಲು ಸರ್ಕಾರ–ಎನ್‌ಜಿಒ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ಕುರಿತು ಸಭೆಯಲ್ಲಿ ಒತ್ತು ನೀಡಲಾಯಿತು.

ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ರವರು ಅರಕೇರಾ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆ (EMRS)ಗೆ ಭೇಟಿ ನೀಡಿ,...
18/08/2026

ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ರವರು ಅರಕೇರಾ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆ (EMRS)ಗೆ ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ಮೂಲಸೌಕರ್ಯ, ವಸತಿ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸಂಬಂಧಿಸಿದ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಭೇಟಿಯ ಸಂದರ್ಭದಲ್ಲಿ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯಗಳ ವ್ಯವಸ್ಥೆ, ಮೆಸ್ ಹಾಗೂ ಅಡುಗೆಮನೆ ನಿರ್ವಹಣೆ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಆಹಾರದ ಗುಣಮಟ್ಟ ಮತ್ತು ಪ್ರಮಾಣ, ಕುಡಿಯುವ ನೀರು, ನೈರ್ಮಲ್ಯ, ಸ್ವಚ್ಛತೆ, ವಿದ್ಯುತ್ ವ್ಯವಸ್ಥೆ, ಶಾಲಾ ಆವರಣದ ಸುರಕ್ಷತೆ ಹಾಗೂ ಮೂಲಸೌಕರ್ಯಗಳ ನಿರ್ವಹಣೆಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿ, ಅವರ ಅಗತ್ಯತೆಗಳು, ಅಭಿಪ್ರಾಯಗಳು ಹಾಗೂ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳು, ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ 6ರಿಂದ 12ನೇ ತರಗತಿಯವರೆಗೆ ಉಚಿತ ಹಾಗೂ ಗುಣಮಟ್ಟದ ವಸತಿ ಶಿಕ್ಷಣ ಒದಗಿಸುವ ಉದ್ದೇಶವನ್ನು ಹೊಂದಿವೆ.

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಸುರಕ್ಷಿತ, ಸ್ವಚ್ಛ ಹಾಗೂ ಉತ್ತಮ ವಸತಿ ವಾತಾವರಣ ಕಲ್ಪಿಸುವುದು ಜಿಲ್ಲಾಡಳಿತದ ಪ್ರಮುಖ ಆದ್ಯತೆಯಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಸುರಕ್ಷತೆ, ಆರೋಗ್ಯ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.

Address

Deputy Commissioner
Raichur
584101

Alerts

Be the first to know and let us send you an email when Deputy Commissioner Raichur posts news and promotions. Your email address will not be used for any other purpose, and you can unsubscribe at any time.

Contact The Organization

Send a message to Deputy Commissioner Raichur:

Shortcuts

Share