Dr. Dhananjaya Sarji ಜನಪರ - ಜೀವಪರ

Dr. Dhananjaya Sarji  ಜನಪರ - ಜೀವಪರ ಜನಪರ - ಜೀವಪರ
MLC for South West Graduates Constituency Karnataka |
Proprietor, Sarji Group of Hospitals |

ಚಿಕ್ಕಮಗಳೂರಿನ ದಂಟರಮಕ್ಕಿಯಲ್ಲಿರುವ "ಶ್ರೀ ಸ್ವಾಮಿ ಸಮರ್ಥ ರಾಮದಾಸ ವಿದ್ಯಾ ಮಂದಿರ"ದ ಅಭಿವೃದ್ಧಿ ಕಾಮಗಾರಿಗೆ ನನ್ನ ಶಾಸಕರ ಸ್ಥಳೀಯ ಪ್ರದೇಶಾಭಿವ...
02/09/2026

ಚಿಕ್ಕಮಗಳೂರಿನ ದಂಟರಮಕ್ಕಿಯಲ್ಲಿರುವ "ಶ್ರೀ ಸ್ವಾಮಿ ಸಮರ್ಥ ರಾಮದಾಸ ವಿದ್ಯಾ ಮಂದಿರ"ದ ಅಭಿವೃದ್ಧಿ ಕಾಮಗಾರಿಗೆ ನನ್ನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುದಾನ ಕಲ್ಪಿಸಲಾಗಿದ್ದು, ಇಂದು ನಿರ್ಮಾಣ ಹಂತದ ಕಾಮಗಾರಿಯನ್ನು ವೀಕ್ಷಿಸಲಾಯಿತು.

ಈ ವಿದ್ಯಾಮಂದಿರದಲ್ಲಿ ಮಕ್ಕಳಿಗೆ ಕೇವಲ ಪಠ್ಯ ಶಿಕ್ಷಣವಷ್ಟೇ ಅಲ್ಲದೆ; ಆಧ್ಯಾತ್ಮಿಕ ಜ್ಞಾನ, ವೇದ ಪಠಣ, ಭಾರತೀಯ ಸಂಸ್ಕೃತಿ, ಸಂಸ್ಕಾರ, ಶಿಸ್ತು ಹಾಗೂ ನೈತಿಕ ಮೌಲ್ಯಗಳನ್ನು ಬಾಲ್ಯದಿಂದಲೇ ಕಲಿಸುತ್ತಿರುವುದು ಅತ್ಯಂತ ಸಂತಸದ ವಿಚಾರ.

ವಿದ್ಯಾಮಂದಿರದ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಶುಭವಾಗಲಿ.

02/09/2026

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ಇಂದು ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ನಡೆದ ಅಭಿವೃದ್ಧಿ, ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಪ್ರಗತಿಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಈ ಕೆಳಕಂಡ ವಿಷಯಗಳನ್ನು ಪ್ರಸ್ತಾಪಿಸಲಾಯಿತು. ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ನಿರಾಮಯ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡುವ ಕುರಿತು,

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ  ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ಇಂದು ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್...
02/09/2026

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರ ನೇತೃತ್ವದಲ್ಲಿ ಇಂದು ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ನಡೆದ ಅಭಿವೃದ್ಧಿ, ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಪ್ರಗತಿಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಈ ಕೆಳಕಂಡ ವಿಷಯಗಳನ್ನು ಪ್ರಸ್ತಾಪಿಸಲಾಯಿತು.

1. ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ನಿರಾಮಯ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡುವ ಕುರಿತು,
2. ಜಿಲ್ಲೆಯ ಎಲ್ಲ ಅಂಗನವಾಡಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಮರ್ಪಕವಾಗಿ ಅಳವಡಿಸುವ ಕುರಿತು,
3. ತರೀಕೆರೆ ತಾಲೂಕಿನಲ್ಲಿ ಕುಸುಮ್-ಸಿ ಯೋಜನೆ ನಿರ್ಮಿಸಲು ಅನೊಮೋದನೆ ನೀಡಿ 2 ವರ್ಷ ಕಳೆದರೂ ವಿಳಂಬವಾಗುತ್ತಿರುವ ಬಗ್ಗೆ
4. ತರೀಕೆರೆ ತಾಲೂಕಿನ ಶಿವಪುರ ರೈಲ್ವೆನಿಲ್ದಾಣದಲ್ಲಿ ರೈಲು ನಿಲುಗಡೆ ಕುರಿತು
5. ಸರ್ವರ್ ಸಮಸ್ಯೆಯಿಂದ ಜಿಲ್ಲೆಯ ಹಲವು ಕಡೆ ಪಡಿತರ ಸಿಗದೆ ಪರದಾಡುತಿದ್ದು. ತ್ವರಿತಗತಿಯಲ್ಲಿ ಸಮಸ್ಯೆ ಬಗೆ ಹರಿಸುವ ಕುರಿತು.
6. ಬೆಳೆ ವಿಮೆ ಮಾರ್ಗಸೂಚಿ ಹಾಗೂ ಮಳೆ ಮಾಪನ ಕೇಂದ್ರಗಳ ಕುರಿತು.

ಹಾಗೂ ಕೇಂದ್ರ ಸರ್ಕಾರದ ಇತರೆ ಜನಪರ ಯೋಜನೆಗಳ ಅನುಷ್ಠಾನ ಕುರಿತು ಚರ್ಚಿಸಲಾಯಿತು.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಮತ್ತು ದಲಿತ ವಿರೋಧಿ ನೀತಿಗಳ ವಿರುದ್ಧ 2 ನೇ ದಿನದ ಬಳ್ಳಾರಿ ಚಲೋ ಪಾದಯಾತ್ರೆಗೆ ಅಭೂತಪೂರ್ವ ಜನಬೆಂಬಲ...
02/09/2026

ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಮತ್ತು ದಲಿತ ವಿರೋಧಿ ನೀತಿಗಳ ವಿರುದ್ಧ 2 ನೇ ದಿನದ ಬಳ್ಳಾರಿ ಚಲೋ ಪಾದಯಾತ್ರೆಗೆ ಅಭೂತಪೂರ್ವ ಜನಬೆಂಬಲ !

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾಪೂಜಿನಗರ ಶಿವಮೊಗ್ಗ ಹಾಗೂ ಯುವ ರೆಡ್ ಕ್ರಾಸ್ ಘಟಕ ಕುವೆಂಪು ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಸರ್ಕಾರಿ ಪ್ರಥ...
01/09/2026

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾಪೂಜಿನಗರ ಶಿವಮೊಗ್ಗ ಹಾಗೂ ಯುವ ರೆಡ್ ಕ್ರಾಸ್ ಘಟಕ ಕುವೆಂಪು ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರೆಡ್ ಕ್ರಾಸ್ ಮೂಲ ತರಬೇತಿ ಮತ್ತು ಹೃದಯ ವಿಶ್ವಾಸಕೋಶದ ಪುನರುಜ್ಜೀವನ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಹಾಗೂ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಲಾಯಿತು.

ಈ ವೇಳೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಸವರಾಜಪ್ಪ ಕೆ ವಿ, ಕುವೆಂಪು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಗಳಾದ ಪ್ರೊ. ಚಂದ್ರಶೇಖರ್, ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ.ರವೀಂದ್ರ ಗೌಡ, ಪ್ರಮುಖರಾದ ಸೋಮಶೇಖರ್, ಕುಮಾರ್, ಆನಂದ್, ಪ್ರಸನ್ನ ಹಾಗೂ ಜಯಕೀರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

01/09/2026
ಕಾಂಗ್ರೆಸ್‌ ಸರ್ಕಾರದ ವೈಫಲ್ಯ, ಜನವಿರೋಧಿ ನೀತಿ ಹಾಗೂ ಭ್ರಷ್ಟಾಚಾರ ಖಂಡಿಸಿ ಸೆಪ್ಟೆಂಬರ್‌ 1 ರಿಂದ 10 ರ ವರೆಗೆ ಬಳ್ಳಾರಿ ಚಲೋ ಪಾದಯಾತ್ರೆ ನಡೆಯ...
31/08/2026

ಕಾಂಗ್ರೆಸ್‌ ಸರ್ಕಾರದ ವೈಫಲ್ಯ, ಜನವಿರೋಧಿ ನೀತಿ ಹಾಗೂ ಭ್ರಷ್ಟಾಚಾರ ಖಂಡಿಸಿ ಸೆಪ್ಟೆಂಬರ್‌ 1 ರಿಂದ 10 ರ ವರೆಗೆ ಬಳ್ಳಾರಿ ಚಲೋ ಪಾದಯಾತ್ರೆ ನಡೆಯಲಿದೆ.
ಬನ್ನಿ, ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಲು ಸಂಘಟಿತ ಹೆಜ್ಜೆ ಹಾಕೋಣ.


ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರು ಹಾಗೂ ಆತ್ಮೀಯ ಸ್ನೇಹಿತರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭ...
31/08/2026

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರು ಹಾಗೂ ಆತ್ಮೀಯ ಸ್ನೇಹಿತರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.

ಭಗವಂತ ನಿಮಗೆ ಉತ್ತಮ ಆಯುರಾರೋಗ್ಯ, ಆಯುಷ್ಯ ನೀಡಿ ಇನ್ನು ಹೆಚ್ಚಿನ ಜನ ಸೇವೆ ಮಾಡುವ ಅವಕಾಶ ಮತ್ತು ಶಕ್ತಿ ನೀಡಲಿ ಎಂದು ಶುಭ ಹಾರೈಸುತ್ತೇನೆ.

Captain Brijesh Chowta

ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ವತಿಯಿಂದ ಇಂದು ನಗರದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರ ದಿವ್ಯ ಸ...
30/08/2026

ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ವತಿಯಿಂದ ಇಂದು ನಗರದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಪರಮಪೂಜ್ಯ ಅವಧೂತ ಶ್ರೀ ವಿನಯ್ ಗುರೂಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾನಿಧಿ ಸಮಾರಂಭದಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಹಾಗೂ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಲಾಯಿತು.

ಈ ವೇಳೆ ಸಮಾಜದ ಹಿರಿಯರನ್ನು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿಗಳು ಹಾಗೂ ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಅವರು, ಶಿವಮೊಗ್ಗ ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ಅಧ್ಯಕ್ಷರಾದ ಡಾ. ಭರತ್ ಎಸ್. ವಿ ಅವರು, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್ ಅವರು, ಆರ್ಯ ವೈಶ್ಯ ಶ್ರೀರಾಮ ಸಹಕಾರ ಸಂಘದ ಪದಾಧಿಕಾರಿಗಳು, ಸಮಾಜದ ಮುಖಂಡರು, ಹಿರಿಯರು, ವಿದ್ಯಾರ್ಥಿಗಳು ಪೋಷಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಶಿಕಾರಿಪುರದ ತಾಲೂಕು ಆಫೀಸ್ ರಸ್ತೆಯ ರಿಧಿ ಕಾಂಪ್ಲೆಕ್ಸ್ ನೂತನ ಕಟ್ಟಡದಲ್ಲಿ ಸುಸಜ್ಜಿತ ಸೌಲಭ್ಯ ಮತ್ತು ಆಧುನಿಕ ತಂತ್ರಜ್ಞಾನಗಳಗೊಂಡು ನೂತನವಾಗಿ ...
30/08/2026

ಶಿಕಾರಿಪುರದ ತಾಲೂಕು ಆಫೀಸ್ ರಸ್ತೆಯ ರಿಧಿ ಕಾಂಪ್ಲೆಕ್ಸ್ ನೂತನ ಕಟ್ಟಡದಲ್ಲಿ ಸುಸಜ್ಜಿತ ಸೌಲಭ್ಯ ಮತ್ತು ಆಧುನಿಕ ತಂತ್ರಜ್ಞಾನಗಳಗೊಂಡು ನೂತನವಾಗಿ ಪ್ರಾರಂಭವಾಗಿರುವ ವಾಸುದೇವ ಮಕ್ಕಳ ಚಿಕಿತ್ಸಾಲಯ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟಿಸಿ ಶುಭ ಕೋರಲಾಯಿತು.

Address

RMR Road, Tilak Nagar
Shimoga
577201

Alerts

Be the first to know and let us send you an email when Dr. Dhananjaya Sarji ಜನಪರ - ಜೀವಪರ posts news and promotions. Your email address will not be used for any other purpose, and you can unsubscribe at any time.

Contact The Organization

Send a message to Dr. Dhananjaya Sarji ಜನಪರ - ಜೀವಪರ:

Shortcuts

Share