SDPI Uchila

SDPI Uchila Contact information, map and directions, contact form, opening hours, services, ratings, photos, videos and announcements from SDPI Uchila, Political organisation, Udupi.

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ಉಚ್ಚಿಲ ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆಪೊಲ್ಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ, ಸ...
14/05/2026

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)
ಉಚ್ಚಿಲ ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆ

ಪೊಲ್ಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ, ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಉಚ್ಚಿಲ ಗ್ರಾಮ ಸಮಿತಿ ವತಿಯಿಂದ ಇಂದು (14 ಗುರುವಾರ) ಸಂಜೆ 4.30ಕ್ಕೆ ಉಚ್ಚಿಲ ಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ SDPI ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಜಾಕ್ ವೈ.ಎಸ್. ಅವರು ಮಾತನಾಡಿ, ರಸ್ತೆ ಕಾಮಗಾರಿ ವಿಳಂಬದಿಂದ ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳನ್ನು ತೀವ್ರವಾಗಿ ಖಂಡಿಸಿದರು. ತಕ್ಷಣವೇ ಕಾಮಗಾರಿಯನ್ನು ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗ್ರಾಮ ಸಮಿತಿ ಅಧ್ಯಕ್ಷರಾದ ಮಜೀದ್ ಪೊಲ್ಯ ಅವರು ಮಾತನಾಡಿ, ಸಾರ್ವಜನಿಕರ ಸಹನೆಯು ಮಿತಿಮೀರಿದೆ. ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ನಂತರ ಬಡಾ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ SDPI ಕಾಪು ಕ್ಷೇತ್ರ ಸಮಿತಿ ಕಾರ್ಯದರ್ಶಿಯಾದ ತೌಫೀಕ್ ಉಚ್ಚಿಲ, ಕಾಪು ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಇಬ್ರಾಹಿಂ ಅರ್ಶ್, ಆಸೀಫ್ ವೈ.ಸಿ., ಗ್ರಾಮ ಸಮಿತಿಯ ಉಪಾಧ್ಯಕ್ಷರಾದ ಶರೀಫ್ 313 ಹಾಗೂ ಪಕ್ಷದ ಸದಸ್ಯರು ಉಪಸ್ಥಿತರಿದ್ದರು.

Address

Udupi

Website

Alerts

Be the first to know and let us send you an email when SDPI Uchila posts news and promotions. Your email address will not be used for any other purpose, and you can unsubscribe at any time.

Share